“ಆ ಯೆಹೂದ್ಯರಿಂದ ತಿರಸ್ಕೃತನಾದವನೇ ಈ ಮೋಶೆ. ಅವರು ಅವನಿಗೆ, ‘ನಿನ್ನನ್ನು ನಮ್ಮ ಅಧಿಪತಿ ಎಂದಾಗಲಿ ನ್ಯಾಯಾಧೀಶ ಎಂದಾಗಲಿ ನಿನಗೆ ಯಾರಾದರೂ ಹೇಳಿದರೇ?’ ಎಂದು ಪ್ರಶ್ನಿಸಿದ್ದರು. ಆದರೆ ದೇವರು ಅಧಿಪತಿಯನ್ನಾಗಿಯೂ ವಿಮೋಚಕನನ್ನಾಗಿಯೂ ಕಳುಹಿಸಿದ್ದು ಆ ಮೋಶೆಯನ್ನೇ. ದೇವರು ತನ್ನ ದೂತನ ಮೂಲಕವಾಗಿ ಮೋಶೆಯನ್ನು ಕಳುಹಿಸಿದನು. ಉರಿಯುವ ಪೊದೆಯಲ್ಲಿ ಮೋಶೆಯು ಕಂಡದ್ದು ಈ ದೇವದೂತನನ್ನೇ.
ಅವರು ಪೇತ್ರ ಯೋಹಾನರನ್ನು ಅಲ್ಲಿದ್ದ ಎಲ್ಲಾ ಜನರ ಮುಂದೆ ನಿಲ್ಲಿಸಿದರು. ಯೆಹೂದ್ಯನಾಯಕರು ಅವರನ್ನು “ನೀವು ಈ ಕುಂಟನನ್ನು ಹೇಗೆ ಗುಣಪಡಿಸಿದಿರಿ? ನೀವು ಯಾವ ಶಕ್ತಿಯನ್ನು ಉಪಯೋಗಿಸಿದಿರಿ? ಇದನ್ನು ಯಾರ ಅಧಿಕಾರದಿಂದ ಮಾಡಿದಿರಿ?” ಎಂದು ಅನೇಕ ಸಲ ಕೇಳಿದರು.
ಯೇಸು ದೇವಾಲಯಕ್ಕೆ ಹೋದನು. ಯೇಸು ಅಲ್ಲಿ ಉಪದೇಶಿಸುತ್ತಿದ್ದಾಗ, ಮಹಾಯಾಜಕರು ಮತ್ತು ಜನರ ಹಿರಿಯ ನಾಯಕರು ಯೇಸುವಿನ ಬಳಿಗೆ ಬಂದರು. ಅವರು ಯೇಸುವಿಗೆ, “ನೀನು ಇವುಗಳನ್ನು ಯಾವ ಅಧಿಕಾರದಿಂದ ಮಾಡುತ್ತಿರುವೆ? ಈ ಅಧಿಕಾರವನ್ನು ನಿನಗೆ ಕೊಟ್ಟವರು ಯಾರು? ನಮಗೆ ತಿಳಿಸು!” ಎಂದರು.
ನಿಮ್ಮ ಸೇವಕನಾದ ನನಗೆ ಮಹಾಕರುಣೆಯನ್ನು ತೋರಿ ನನ್ನನ್ನು ಕಾಪಾಡಿದ್ದೀರಿ. ಆದರೆ ನಾನು ಬೆಟ್ಟಗಳವರೆಗೂ ಓಡಿಹೋಗಲಾರೆ. ನಾನು ನಿಧಾನವಾಗಿ ಹೋಗುವುದಾದರೆ ಕೇಡು ಸಂಭವಿಸಿ ಕೊಲ್ಲಲ್ಪಡುವೆನು.
ಅದಕ್ಕೆ ಆ ಮನುಷ್ಯನು, “ನಿನ್ನನ್ನು ನಮ್ಮ ಅಧಿಕಾರಿಯನ್ನಾಗಿಯೂ ನ್ಯಾಯಾಧಿಪತಿಯನ್ನಾಗಿಯೂ ಮಾಡಿದವರು ಯಾರು? ನಿನ್ನೆ ಆ ಈಜಿಪ್ಟಿನವನನ್ನು ಕೊಂದಂತೆ ನನ್ನನ್ನೂ ಕೊಲ್ಲಬೇಕೆಂದಿರುವಿಯೋ?” ಎಂದು ಉತ್ತರಿಸಿದನು. ಆಗ ಮೋಶೆಗೆ ಭಯವಾಯಿತು. ಮೋಶೆಯು ತನ್ನೊಳಗೆ, “ನಾನು ಮಾಡಿದ್ದು ಪ್ರತಿಯೊಬ್ಬರಿಗೂ ತಿಳಿದಿದೆ” ಅಂದುಕೊಂಡನು.