“ಆ ಯೆಹೂದ್ಯರಿಂದ ತಿರಸ್ಕೃತನಾದವನೇ ಈ ಮೋಶೆ. ಅವರು ಅವನಿಗೆ, ‘ನಿನ್ನನ್ನು ನಮ್ಮ ಅಧಿಪತಿ ಎಂದಾಗಲಿ ನ್ಯಾಯಾಧೀಶ ಎಂದಾಗಲಿ ನಿನಗೆ ಯಾರಾದರೂ ಹೇಳಿದರೇ?’ ಎಂದು ಪ್ರಶ್ನಿಸಿದ್ದರು. ಆದರೆ ದೇವರು ಅಧಿಪತಿಯನ್ನಾಗಿಯೂ ವಿಮೋಚಕನನ್ನಾಗಿಯೂ ಕಳುಹಿಸಿದ್ದು ಆ ಮೋಶೆಯನ್ನೇ. ದೇವರು ತನ್ನ ದೂತನ ಮೂಲಕವಾಗಿ ಮೋಶೆಯನ್ನು ಕಳುಹಿಸಿದನು. ಉರಿಯುವ ಪೊದೆಯಲ್ಲಿ ಮೋಶೆಯು ಕಂಡದ್ದು ಈ ದೇವದೂತನನ್ನೇ.
ನಿನ್ನ ಕಷ್ಟಕಾಲದಲ್ಲಿ ನಾನು ನಿನ್ನೊಂದಿಗಿರುವೆನು. ನೀನು ಜಲರಾಶಿಯನ್ನು ಹಾದುಹೋಗುವಾಗ ನಾನೇ ನಿನ್ನೊಂದಿಗಿರುವೆ. ನೀನು ನದಿಗಳನ್ನು ದಾಟುವಾಗ ಅಪಾಯಕ್ಕೆ ಗುರಿಯಾಗದಿರುವೆ. ಬೆಂಕಿಯೊಳಗಿಂದ ನಡೆಯುವಾಗ ನಿನಗೆ ಹಾನಿಯಾಗದು.
ಪ್ರಭುವು ಅವನಿಗೆ, ‘ನಾನೇ ನಿನ್ನ ಪಿತೃಗಳ ದೇವರು. ನಾನೇ ಅಬ್ರಹಾಮನ ದೇವರು, ಇಸಾಕನ ದೇವರು ಮತ್ತು ಯಾಕೋಬನ ದೇವರು’ ಎಂದು ಹೇಳಿದನು. ಮೋಶೆಯು ಭಯದಿಂದ ನಡುಗ ತೊಡಗಿದನು; ಪೊದೆಯನ್ನು ನೋಡಲು ಹೆದರಿದನು.
ಜನರಿಗೆ ಅನೇಕ ತೊಂದರೆಗಳು ಪ್ರಾಪ್ತವಾಗಿದ್ದವು. ಆದರೆ ಯೆಹೋವನು ಅವರಿಗೆ ವಿರುದ್ಧನಾಗಿರಲಿಲ್ಲ. ಆತನು ಅವರನ್ನು ಪ್ರೀತಿಸಿ ಅವರಿಗಾಗಿ ಚಿಂತಿಸಿದನು; ತನ್ನ ವಿಶೇಷ ದೂತನನ್ನು ಕಳುಹಿಸಿ ಅವರನ್ನು ರಕ್ಷಿಸಿದನು. ಯೆಹೋವನು ಅವರನ್ನು ನಿತ್ಯಕಾಲಕ್ಕೂ ಸಲಹುವನು. ತನ್ನ ಜನರಿಗೆ ಯೆಹೋವನು ಸಲಹುವದನ್ನು ನಿಲ್ಲಿಸಲಿಲ್ಲ.
ನಾನು ನಿನ್ನ ಪೂರ್ವಿಕರ ದೇವರು, ನಾನು ಅಬ್ರಹಾಮನ ದೇವರು, ನಾನು ಇಸಾಕನ ದೇವರು, ನಾನು ಯಾಕೋಬನ ದೇವರು” ಎಂದು ಹೇಳಿದನು. ದೇವರನ್ನು ನೋಡುವುದಕ್ಕೆ ಭಯಪಟ್ಟು ಮೋಶೆ ತನ್ನ ಮುಖವನ್ನು ಮುಚ್ಚಿಕೊಂಡನು.
ಸತ್ತಜನರ ಪುನರುತ್ಥಾನದ ಬಗ್ಗೆ ದೇವರು ಹೇಳಿರುವುದನ್ನು ನೀವು ಖಂಡಿತವಾಗಿ ಓದಿದ್ದೀರಿ. ದೇವರು ಮೋಶೆಗೆ, ‘ನಾನೇ ಅಬ್ರಹಾಮನ ದೇವರು, ಇಸಾಕನ ದೇವರು ಮತ್ತು ಯಾಕೋಬನ ದೇವರು’ ಎಂದು ಹೇಳಿದ್ದನ್ನು ಮೋಶೆಯ ಪುಸ್ತಕದಲ್ಲಿರುವ ಉರಿಯುವ ಪೊದೆಯ ಅಧ್ಯಾಯದಲ್ಲಿ ಕಾಣಬಹುದು.
ಅವರು ಹೊರಗೆ ಬಂದ ಮೇಲೆ ಉಪರಾಜರು, ನಾಯಕರು, ದೇಶಾಧಿಪತಿಗಳು, ಮಂತ್ರಿಗಳು ಮತ್ತು ಇತರರು ಅವರ ಸುತ್ತಲೂ ನೆರೆದರು. ಶದ್ರಕ್, ಮೇಶಕ್, ಅಬೇದ್‌ನೆಗೋ ಇವರುಗಳನ್ನು ಬೆಂಕಿಯು ಸುಟ್ಟಿಲ್ಲ. ಅವರ ದೇಹಕ್ಕೆ ಬೆಂಕಿಯು ಮುಟ್ಟಿಲ್ಲ. ಅವರ ಕೂದಲಿಗೂ ವಸ್ತ್ರಗಳಿಗೂ ಬೆಂಕಿಯು ತಾಕಿಲ್ಲ. ಬೆಂಕಿಯ ಸಮೀಪಕ್ಕೆ ಹೋದ ವಾಸನೆಯೂ ಅವರಿಗೆ ಮುಟ್ಟಿಲ್ಲ ಎಂಬುದನ್ನು ಅವರು ತಿಳಿದುಕೊಂಡರು.
ಆದರೆ ಯೆಹೋವನು ನಿಮ್ಮನ್ನು ಈಜಿಪ್ಟ್ ದೇಶದಿಂದ ಹೊರತಂದು ತನ್ನ ಸ್ವಕೀಯ ಪ್ರಜೆಯನ್ನಾಗಿ ಮಾಡಿಕೊಂಡಿರುತ್ತಾನೆ. ಕಬ್ಬಿಣವನ್ನು ಕರಗಿಸುವ ಬೆಂಕಿಯ ಕುಲುಮೆಯಂತಿದ್ದ ಈಜಿಪ್ಟಿನಿಂದ ನಿಮ್ಮನ್ನು ಎಳೆದು ತಂದು ತನ್ನ ವಿಶೇಷ ಜನಾಂಗವಾಗಿ ನಿಮ್ಮನ್ನು ತೆಗೆದುಕೊಂಡಿರುತ್ತಾನೆ. ಈಗ ನೀವು ಆತನ ಜನರಾಗಿದ್ದೀರಿ.
ಆದ್ದರಿಂದ ಹಾಗರಳು ಅರೇಬಿಯಾದಲ್ಲಿರುವ ಸೀನಾಯಿ ಪರ್ವತದಂತಿದ್ದಾಳೆ. ಯೆಹೂದ್ಯರ ನಗರವಾದ ಜೆರುಸಲೇಮಿಗೆ ಆಕೆಯು ಅನುರೂಪವಾಗಿದ್ದಾಳೆ. ಈ ನಗರವು ಗುಲಾಮಗಿರಿಯಲ್ಲಿದೆ ಮತ್ತು ಅದರ ಜನರೆಲ್ಲರೂ ಧರ್ಮಶಾಸ್ತ್ರಕ್ಕೆ ಗುಲಾಮರಾಗಿದ್ದಾರೆ.
ಸತ್ತವರು ಪುನರುತ್ಥಾನ ಹೊಂದುವುದನ್ನು ಮೋಶೆಯು ಸ್ಪಷ್ಟವಾಗಿ ತೋರಿಸಿದ್ದಾನೆ. ಉರಿಯುವ ಪೊದೆಯ ಕುರಿತು ಮೋಶೆ ಬರೆಯುವಾಗ ‘ಪ್ರಭುವಾದ ದೇವರೇ ಅಬ್ರಹಾಮನ ದೇವರು, ಇಸಾಕನ ದೇವರು ಮತ್ತು ಯಾಕೋಬನ ದೇವರು’ ಎಂದು ಹೇಳಿದ್ದಾನೆ.
ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ: “ನನ್ನ ಮಾರ್ಗವನ್ನು ಸಿದ್ಧಮಾಡಲು ನಾನು ಮುಂದೂತನನ್ನು ಕಳುಹಿಸುತ್ತೇನೆ. ನೀವು ಹುಡುಕುತ್ತಿರುವ ಧಣಿಯು ತನ್ನ ಆಲಯಕ್ಕೆ ಬರುತ್ತಾನೆ. ಹೌದು, ನಿಮಗೆ ಬೇಕಾಗಿರುವ ಹೊಸ ಒಡಂಬಡಿಕೆಯ ಸಂದೇಶಕನು ನಿಜವಾಗಿಯೂ ಬರುತ್ತಿದ್ದಾನೆ.
ಎಲೀಯನು ಎದ್ದು ಊಟಮಾಡಿ ನೀರನ್ನು ಕುಡಿದನು. ಎಲೀಯನು ನಲವತ್ತು ಹಗಲು ಮತ್ತು ರಾತ್ರಿ ಪ್ರಯಾಣ ಮಾಡಲು ಸಾಕಾಗುವಷ್ಟು ಶಕ್ತಿಯನ್ನು ಆ ಆಹಾರವು ನೀಡಿತು. ಅವನು ದೇವರ ಬೆಟ್ಟವಾದ ಹೋರೇಬ್‌ಗೆ ಹೋದನು.