ಅಪೊಸ್ತಲರ ಕೃತ್ಯಗಳು 7:34 - ಪರಿಶುದ್ದ ಬೈಬಲ್34 ಜನರು ಈಜಿಪ್ಟಿನಲ್ಲಿ ಬಹಳ ಸಂಕಟಪಡುತ್ತಿರುವುದನ್ನು ನಾನು ನೋಡಿದ್ದೇನೆ; ನನ್ನ ಜನರ ಗೋಳಾಟವನ್ನು ನಾನು ಕೇಳಿದ್ದೇನೆ. ನಾನು ಅವರನ್ನು ರಕ್ಷಿಸುವುದಕ್ಕಾಗಿ ಇಳಿದುಬಂದಿದ್ದೇನೆ. ಮೋಶೆಯೇ, ಈಗ ನಾನು ನಿನ್ನನ್ನು ಈಜಿಪ್ಟಿಗೆ ಕಳುಹಿಸುತ್ತಿದ್ದೇನೆ’ ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201934 ಐಗುಪ್ತದೇಶದಲ್ಲಿರುವ ನನ್ನ ಜನರ ದುರವಸ್ಥೆಯನ್ನು ನೋಡೇ ನೋಡಿದ್ದೇನೆ; ಅವರ ಮೊರೆಯನ್ನು ಕೇಳಿ ಅವರನ್ನು ಬಿಡಿಸುವುದಕ್ಕೆ ಇಳಿದುಬಂದಿದ್ದೇನೆ; ಈಗ ನಿನ್ನನ್ನು ಐಗುಪ್ತದೇಶಕ್ಕೆ ಕಳುಹಿಸುತ್ತೇನೆ, ಬಾ’ ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)34 ಈಜಿಪ್ಟಿನಲ್ಲಿರುವ ನನ್ನ ಜನರ ದುರವಸ್ಥೆ ನನಗೆ ತಿಳಿದೇ ಇದೆ. ಅವರ ಗೋಳನ್ನು ಕೇಳಿ ಅವರನ್ನು ಬಿಡುಗಡೆಮಾಡಲು ಬಂದಿರುವೆನು. ಬಾ, ನಾನು ನಿನ್ನನ್ನು ಈಜಿಪ್ಟಿಗೆ ಕಳುಹಿಸುವೆನು,’ ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)34 ಐಗುಪ್ತದೇಶದಲ್ಲಿರುವ ನನ್ನ ಜನರ ದುರವಸ್ಥೆಯನ್ನು ನೋಡೇ ನೋಡಿದ್ದೇನೆ; ಅವರ ಮೊರೆಯನ್ನು ಕೇಳಿ ಅವರನ್ನು ಬಿಡಿಸುವದಕ್ಕೆ ಇಳಿದುಬಂದಿದ್ದೇನೆ; ಈಗ ನಿನ್ನನ್ನು ಐಗುಪ್ತದೇಶಕ್ಕೆ ಕಳುಹಿಸುತ್ತೇನೆ, ಬಾ, ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ34 ಈಜಿಪ್ಟಿನಲ್ಲಿ ನನ್ನ ಜನರ ದುರವಸ್ಥೆಯನ್ನು ನಾನು ಕಂಡಿದ್ದೇನೆ. ಅವರ ನರಳಾಟವನ್ನು ಕೇಳಿಸಿಕೊಂಡಿದ್ದೇನೆ. ಅವರನ್ನು ಬಿಡುಗಡೆ ಮಾಡಲು ನಾನಿಳಿದು ಬಂದಿದ್ದೇನೆ. ಇಲ್ಲಿ ಬಾ, ನಾನು ನಿನ್ನನ್ನು ಹಿಂದಿರುಗಿ ಈಜಿಪ್ಟಿಗೆ ಕಳುಹಿಸುತ್ತೇನೆ,’ ಎಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್34 ಇಜಿಪ್ತಾತ್ ಮಾಜಿ ಲೊಕಾ ಲೈ ತರಾಸ್ ಕರುನ್ ಘೆವ್ಕ್ ಲಾಗಲೆ ಮಿಯಾ ಬಗಟ್ಲಾ ಅನಿ ತೆಂಚೊ ವಿಳಾಪ್ ಮಿಯಾ ಆಯ್ಕ್ಲಾ, ತೆಂಕಾ ಸುಟ್ಕಾ ದಿವ್ಕ್ ಮನುನ್ ಮಿಯಾ ಉತ್ರುನ್ ಯೆಲಾ, ಮೊಯ್ಜೆ ಅತ್ತಾ ಮಿಯಾ ತುಕಾ ಇಜಿಪ್ತಾಕ್ ಧಾಡುನ್ ದಿತಾ” ಮನುನ್ ಸಾಂಗ್ಲ್ಯಾನ್. ಅಧ್ಯಾಯವನ್ನು ನೋಡಿ |
ಅನೇಕ ಸಲ ಶತ್ರುಗಳು ಇಸ್ರೇಲರಿಗೆ ತುಂಬ ಕಷ್ಟಗಳನ್ನು ಉಂಟು ಮಾಡುತ್ತಿದ್ದರು. ಇಸ್ರೇಲರು ಸಹಾಯಕ್ಕಾಗಿ ಯೆಹೋವನಿಗೆ ಮೊರೆಯಿಡುತ್ತಿದ್ದರು; ಪ್ರತಿಸಲವೂ ಯೆಹೋವನು ಅವರ ಗೋಳಾಟವನ್ನು ಕೇಳಿ ಮರುಕಪಡುತ್ತಿದ್ದನು. ಪ್ರತಿಸಲವೂ ಅವರನ್ನು ಶತ್ರುಗಳಿಂದ ರಕ್ಷಿಸಲು ಒಬ್ಬ ನ್ಯಾಯಾಧೀಶನನ್ನು ಕಳುಹಿಸಿ ಕೊಡುತ್ತಿದ್ದನು. ಯೆಹೋವನು ಆ ನ್ಯಾಯಾಧೀಶರ ಜೊತೆಯಲ್ಲಿಯೇ ಇರುತ್ತಿದ್ದನು. ಹೀಗಾಗಿ ಪ್ರತಿಸಲವೂ ಇಸ್ರೇಲರನ್ನು ಅವರ ಶತ್ರುಗಳಿಂದ ರಕ್ಷಿಸಲಾಯಿತು.