ಅಪೊಸ್ತಲರ ಕೃತ್ಯಗಳು 7:36 - ಪರಿಶುದ್ದ ಬೈಬಲ್36 ಆದ್ದರಿಂದ ಮೋಶೆಯು ಜನರನ್ನು ಈಜಿಪ್ಟಿನಿಂದ ಕರೆದುಕೊಂಡು ಬಂದನು. ಅವನು ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಈಜಿಪ್ಟಿನಲ್ಲಿಯೂ ಕೆಂಪುಸಮುದ್ರದಲ್ಲಿಯೂ ಮತ್ತು ನಲವತ್ತು ವರ್ಷಗಳ ಕಾಲ ಅರಣ್ಯದಲ್ಲಿಯೂ ಮಾಡಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201936 ಅವನೇ ಐಗುಪ್ತ ದೇಶದಲ್ಲಿಯೂ, ಕೆಂಪು ಸಮುದ್ರದಲ್ಲಿಯೂ, ನಲವತ್ತು ವರ್ಷ ಮರುಭೂಮಿಯಲ್ಲಿಯೂ, ಅದ್ಭುತಕಾರ್ಯಗಳನ್ನೂ ಸೂಚಕ ಕಾರ್ಯಗಳನ್ನೂ ಮಾಡುತ್ತಾ ಅವರನ್ನು ನಡೆಸಿಕೊಂಡು ಬಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)36 ಈಜಿಪ್ಟಿನಲ್ಲೂ ಕೆಂಪುಸಮುದ್ರದಲ್ಲೂ ನಲವತ್ತು ವರ್ಷಕಾಲ ಮರಳು ಬೆಂಗಾಡಿನಲ್ಲೂ ಅದ್ಭುತಗಳನ್ನು ಹಾಗೂ ಸೂಚಕಕಾರ್ಯಗಳನ್ನು ಮಾಡಿ ಇಸ್ರಯೇಲರನ್ನು ಬಿಡುಗಡೆಮಾಡಿದವನು ಇವನೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)36 ಅವನೇ ಐಗುಪ್ತದೇಶದಲ್ಲಿಯೂ ಕೆಂಪು ಸಮುದ್ರದಲ್ಲಿಯೂ ನಾಲ್ವತ್ತು ವರುಷ ಅಡವಿಯಲ್ಲಿಯೂ ಅದ್ಭುತಕಾರ್ಯಗಳನ್ನೂ ಸೂಚಕಕಾರ್ಯಗಳನ್ನೂ ಮಾಡುತ್ತಾ ಅವರನ್ನು ನಡಿಸಿಕೊಂಡು ಬಂದವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ36 ಈ ಮೋಶೆಯೇ ಇಸ್ರಾಯೇಲರನ್ನು ಈಜಿಪ್ಟಿನಿಂದ ಹೊರಗೆ ನಡೆಸಿಕೊಂಡು ಬಂದನು. ಈಜಿಪ್ಟಿನಲ್ಲಿ, ಕೆಂಪುಸಮುದ್ರದ ಬಳಿಯಲ್ಲಿ, ಅರಣ್ಯದಲ್ಲಿ ಅದ್ಭುತಗಳನ್ನು ಮತ್ತು ಸೂಚಕಕಾರ್ಯಗಳನ್ನು ಮಾಡುತ್ತಾ ನಲವತ್ತು ವರ್ಷಗಳ ಕಾಲ ನಡೆಸಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್36 ತಸೆ ಹೊವ್ನ್ ಮೊಯ್ಜೆನ್ ಲೊಕಾಕ್ನಿ ಇಜಿಪ್ತಾತ್ನಾ ಬಲ್ವುನ್ ಹಾನ್ಲ್ಯಾನ್ ಅನಿ ತೆನಿ ಇಜಿಪ್ತಾತ್, ತಾಂಬ್ಡ್ಯಾ ಸಮುಂದರಾತ್, ಅನಿ ಚಾಳಿಸ್ ವರ್ಸಾ ಪತರ್ ಡಂಗ್ಳಿತ್ಬಿ ಅಜಾಬಾಚಿ ಅನಿ ಚಮತ್ಕಾರಾಚಿ ಕಾಮಾ ಕರುಂಗೆತ್ ಲೊಕಾಕ್ನಿ ಫಿಡೆ ಚಾಲ್ವುಲ್ಯಾನ್. ಅಧ್ಯಾಯವನ್ನು ನೋಡಿ |