ಅಪೊಸ್ತಲರ ಕೃತ್ಯಗಳು 7:42 - ಪರಿಶುದ್ದ ಬೈಬಲ್42 ಆದರೆ ದೇವರು ಅವರಿಗೆ ವಿರೋಧವಾಗಿ, ಆಕಾಶದ ಸುಳ್ಳುದೇವರುಗಳನ್ನು ಪೂಜಿಸುವಂತೆ ಅವರನ್ನು ಬಿಟ್ಟುಬಿಟ್ಟನು. ಇದರ ಬಗ್ಗೆ ಪ್ರವಾದಿಗಳ ಪುಸ್ತಕದಲ್ಲಿ ಹೀಗೆ ಬರೆದಿದೆ: ದೇವರು ಹೀಗೆನ್ನುತ್ತಾನೆ, ‘ಯೆಹೂದ್ಯ ಜನರಾದ ನೀವು ನಲವತ್ತು ವರ್ಷಗಳ ಕಾಲ ಮರಳುಗಾಡಿನಲ್ಲಿದ್ದಾಗ ನನಗೆ ಯಜ್ಞಗಳನ್ನು ಅರ್ಪಿಸಲಿಲ್ಲ; ಕಾಣಿಕೆಗಳನ್ನು ತರಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201942 ಆದರೆ ದೇವರು ಅವರಿಗೆ ವಿಮುಖನಾಗಿ, ಆಕಾಶದ ನಕ್ಷತ್ರಗಣಗಳನ್ನು ಪೂಜಿಸುವುದಕ್ಕೆ ಅವರನ್ನು ಒಪ್ಪಿಸಿಬಿಟ್ಟನು. ಪ್ರವಾದಿಗಳ ಗ್ರಂಥದಲ್ಲಿ ಬರೆದಿರುವುದೇನಂದರೆ, “‘ಇಸ್ರಾಯೇಲ್ ವಂಶದವರೇ, ನೀವು ಅರಣ್ಯದಲ್ಲಿದ್ದ ನಲವತ್ತು ವರ್ಷ ನನಗೆ ಯಜ್ಞಗಳನ್ನೂ, ಬಲಿಗಳನ್ನೂ ಅರ್ಪಿಸುತ್ತಿದ್ದಿರೋ? ಇಲ್ಲವಲ್ಲಾ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)42 ಆಗ ದೇವರು ಅವರಿಗೆ ವಿಮುಖರಾದರು. ಆಕಾಶದ ಗ್ರಹಗಳನ್ನೇ ಅವರು ಪೂಜಿಸಲೆಂದು ಬಿಟ್ಟುಬಿಟ್ಟರು. ಇದನ್ನು ಕುರಿತೇ ಪ್ರವಾದಿಗಳ ಗ್ರಂಥದಲ್ಲಿ: ‘ಓ ಇಸ್ರಯೇಲರೇ, ನೀವು ಮರಳುಗಾಡಿನಲ್ಲಿ ನಾಲ್ವತ್ತು ವರ್ಷಗಳಕಾಲ ದಹನಬಲಿಗಳನ್ನು ಅರ್ಪಿಸಿದ್ದು ನನಗಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)42 ಆದರೆ ದೇವರು ಅವರಿಗೆ ವಿಮುಖನಾಗಿ ಆಕಾಶದ ನಕ್ಷತ್ರ ಗಣವನ್ನು ಪೂಜಿಸುವದಕ್ಕೆ ಅವರನ್ನು ಒಪ್ಪಿಸಿಬಿಟ್ಟನು. ಪ್ರವಾದಿಗಳ ಗ್ರಂಥದಲ್ಲಿ ಬರೆದಿರುವದೇನಂದರೆ - ಇಸ್ರಾಯೇಲ್ ವಂಶದವರೇ, ನೀವು ಅರಣ್ಯದಲ್ಲಿದ್ದ ನಾಲ್ವತ್ತು ವರುಷ ನನಗೆ ಯಜ್ಞಗಳನ್ನೂ ಬಲಿಗಳನ್ನೂ ಅರ್ಪಿಸುತ್ತಿದ್ದಿರೋ? ಇಲ್ಲವಲ್ಲಾ; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ42 ಆದರೆ ದೇವರು ಅವರಿಗೆ ವಿಮುಖನಾಗಿ, ಆಕಾಶದ ಗ್ರಹಗಳನ್ನೇ ಆರಾಧಿಸುವಂತೆ ಅವರನ್ನು ಬಿಟ್ಟುಬಿಟ್ಟರು. ಇದರ ವಿಷಯವಾಗಿ ಪ್ರವಾದಿಗಳ ಗ್ರಂಥದಲ್ಲಿ: “ ‘ಇಸ್ರಾಯೇಲಿನ ಮನೆತನದವರೇ, ನಲವತ್ತು ವರ್ಷ ಅರಣ್ಯದಲ್ಲಿ ಯಜ್ಞಗಳನ್ನೂ ಕಾಣಿಕೆಗಳನ್ನೂ ಸಮರ್ಪಿಸಿದ್ದು ನನಗಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್42 ಖರೆ ದೆವಾನ್ ತೆಂಕಾ ವಿರೊಧ್ ಹೊವ್ನ್ ಮಳ್ಬಾತ್ಲೊ ದಿಸ್, ಚಂದ್ರಾಮ್ ಅನಿ ಚುಕ್ಕಿಯಾಕ್ನಿ ಫುಜ್ಯಾ ಕರುಕ್ ಸೊಡುನ್ ದಿಲ್ಯಾನ್, ಹೆಚ್ಯಾ ವಿಶಯಾತ್ ಪ್ರವಾದ್ಯಾಂಚ್ಯಾ ಪುಸ್ತಕಾತ್ ಅಶೆ ಲಿವಲ್ಲೆ ಹಾಯ್: ದೆವ್ ಅಸೊ ಮನ್ತಾ, ತುಮಿ ಜುದೆವಾಂಚ್ಯಾ ಲೊಕಾನಿ, ಭಜನ್ ಕರುಚೆ ಮನುನ್ ಚಾಳಿಸ್ ವರ್ಸಾ ಡಂಗ್ಳಿತ್ ರಾತಾನಾ ಮಾಕಾ ಜನಾವರಾಂಚಿ ಬಲಿ ಭೆಟ್ವುಲ್ಯಾಸಿ ಕಾಯ್? ಅಧ್ಯಾಯವನ್ನು ನೋಡಿ |
ಆದ್ದರಿಂದ ನಾನು ಅವರ ಉಪಾಯಗಳನ್ನೇ ಬಳಸಿಕೊಳ್ಳಲು ನಿರ್ಧರಿಸಿದೆನು. ಅವರು ಬಹು ಭಯಪಡುವ ವಸ್ತುಗಳಿಂದಲೇ ಅವರನ್ನು ಶಿಕ್ಷಿಸಲು ತೀರ್ಮಾನಿಸಿದೆನು. ಎಕೆಂದರೆ ನಾನು ಅವರನ್ನು ಕರೆದರೂ ಅವರು ಕಿವಿಗೊಡಲಿಲ್ಲ. ನಾನು ಅವರೊಂದಿಗೆ ಮಾತಾಡಿದರೂ ಅವರು ಕೇಳಲಿಲ್ಲ. ಆದ್ದರಿಂದ ನಾನು ಅವರಿಗೆ ಅದನ್ನೇ ಮಾಡುವೆನು. ನಾನು ಯಾವದನ್ನು ಕೆಟ್ಟದೆಂದು ಪರಿಗಣಿಸಿದ್ದೆನೋ ಅದನ್ನೇ ಅವರು ಮಾಡಿದರು. ನಾನು ಇಷ್ಟಪಡದ ಸಂಗತಿಗಳನ್ನು ಅವರು ಮಾಡಿದರು.”