Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 7:46 - ಪರಿಶುದ್ದ ಬೈಬಲ್‌

46 ದೇವರು ದಾವೀದನನ್ನು ಬಹಳವಾಗಿ ಮೆಚ್ಚಿಕೊಂಡನು. ‘ಯಾಕೋಬನ ದೇವರಾದ ನಿನಗಾಗಿ ಒಂದು ಆಲಯವನ್ನು ಕಟ್ಟಲು ನನಗೆ ಅವಕಾಶಕೊಡು’ ಎಂದು ದಾವೀದನು ದೇವರನ್ನು ಕೇಳಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

46 ದಾವೀದನು ದೇವರ ಸನ್ನಿಧಾನದಲ್ಲಿ ಕೃಪೆ ಹೊಂದಿ ಯಾಕೋಬನ ವಂಶದವರಿಗೋಸ್ಕರ ದೇವಾಲಯವನ್ನು ಕಟ್ಟಿಸುವುದಕ್ಕೆ ಅಪ್ಪಣೆಯಾಗಬೇಕೆಂದು ಕೇಳಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

46 ದೈವಾನುಗ್ರಹಕ್ಕೆ ಪಾತ್ರನಾದ ದಾವೀದನು ಯಕೋಬನ ದೇವರಿಗೆ ಆಲಯವೊಂದನ್ನು ಕಟ್ಟಲು ಅಪ್ಪಣೆಯಾಗಬೇಕೆಂದು ಬೇಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

46 ದಾವೀದನು ದೇವರ ಸನ್ನಿಧಾನದಲ್ಲಿ ಕೃಪೆಹೊಂದಿ ಯಾಕೋಬನ ವಂಶದವರಿಗೋಸ್ಕರ ದೇವಾಲಯವನ್ನು ಕಟ್ಟಿಸುವದಕ್ಕೆ ಅಪ್ಪಣೆಯಾಗಬೇಕೆಂದು ಕೇಳಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

46 ದಾವೀದನು ದೇವರ ದಯೆಯನ್ನು ಹೊಂದಿದವನಾಗಿ ಯಾಕೋಬನ ದೇವರಿಗೆ ದೇವಾಲಯ ಕಟ್ಟಲು ತನಗೆ ಅಪ್ಪಣೆಯಾಗಬೇಕೆಂದು ದೇವರಿಗೆ ಕೇಳಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

46 ದಾವಿದಾಚ್ಯಾ ವರ್‍ತಿ ದೆವಾಚಿ ಕುರ್ಪಾ ಹೊತ್ತಿ, “ಮಿಯಾ ಜಾಕೊಬಾಚ್ಯಾ ದೆವಾಕ್ ವಸ್ತಿ ಕರುಕ್ ಮಾಗ್ನಿ ಕರ್‍ತಲೊ ಜಾಗೊ ಬಾಂದುಕ್ ಮಾಕಾ ಅವ್ಕಾಸ್ ಕರುನ್ ದಿ ಮನುನ್ ದಾವಿದಾನ್ ದೆವಾಕ್ಡೆ ಮಾಗುನ್ ಘೆಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 7:46
18 ತಿಳಿವುಗಳ ಹೋಲಿಕೆ  

ದೇವರು ಸೌಲನನ್ನು ತೆಗೆದುಹಾಕಿದ ಮೇಲೆ ದಾವೀದನನ್ನು ಅವರ ರಾಜನನ್ನಾಗಿ ಮಾಡಿದನು. ‘ಇಷಯನ ಮಗನಾದ ದಾವೀದನು ನನಗೆ ಮೆಚ್ಚಿಗೆಯಾದವನು. ಅವನು ನನ್ನ ಅಪೇಕ್ಷೆಗೆ ತಕ್ಕಂತೆ ಕಾರ್ಯಗಳನ್ನು ಮಾಡುತ್ತಾನೆ’ ಎಂದು ದೇವರು ದಾವೀದನ ಬಗ್ಗೆ ಹೇಳಿದ್ದಾನೆ.


ಆಗ ದಾವೀದನು ಮೀಕಲಳಿಗೆ, “ಯೆಹೋವನು ನಿನ್ನ ತಂದೆಯನ್ನಾಗಲಿ ಅವರ ಕುಟುಂಬದ ಇತರ ಯಾರನ್ನೇ ಆಗಲಿ ಆರಿಸಿಕೊಳ್ಳದೆ ನನ್ನನ್ನೇ ಇಸ್ರೇಲರ ನಾಯಕನನ್ನಾಗಿ ಆರಿಸಿಕೊಂಡಿದ್ದಾನೆ. ಆದ್ದರಿಂದಲೇ ನಾನು ಯೆಹೋವನ ಸನ್ನಿಧಿಯಲ್ಲಿ ಕುಣಿದಾಡಿದೆನು.


ಯೆಹೋವನು ಸಮುವೇಲನಿಗೆ, “ನೀನು ಸೌಲನಿಗಾಗಿ ಎಷ್ಟುಕಾಲ ಶೋಕಿಸುವೆ? ನಾನು ಸೌಲನನ್ನು ಇಸ್ರೇಲರ ರಾಜತ್ವದಿಂದ ತಿರಸ್ಕರಿಸಿರುತ್ತೇನೆ. ನೀನು ಕೊಂಬಿನಲ್ಲಿ ಎಣ್ಣೆಯನ್ನು ತುಂಬಿಕೊಂಡು ಬಾ. ನಾನು ನಿನ್ನನ್ನು ಇಷಯನೆಂಬ ಮನುಷ್ಯನ ಬಳಿಗೆ ಕಳುಹಿಸುತ್ತೇನೆ. ಇಷಯನು ಬೆತ್ಲೆಹೇಮಿನಲ್ಲಿ ವಾಸಿಸುತ್ತಿದ್ದನು. ನಾನು ಅವನ ಮಕ್ಕಳಲ್ಲಿ ಒಬ್ಬನನ್ನು ಹೊಸ ರಾಜನನ್ನಾಗಿ ಆರಿಸಿದ್ದೇನೆ” ಎಂದು ಹೇಳಿದನು.


ಯೆಹೋವನು ದಾವೀದನಿಗೆ ಸ್ಥಿರವಾದ ವಾಗ್ದಾನವನ್ನು ಮಾಡಿದನು. ಆತನು ಅದನ್ನು ಬದಲಾಯಿಸುವುದೇ ಇಲ್ಲ. “ನಿನ್ನ ಸಂತಾನದವರನ್ನು ನಿನ್ನ ಸಿಂಹಾಸನದ ಮೇಲೆ ಕುಳ್ಳಿರಿಸುವೆನು.


ಆಗ ಸಮುವೇಲನು ಸೌಲನಿಗೆ, “ನೀನು ನನ್ನ ಮೇಲಂಗಿಯನ್ನು ಹರಿದುಹಾಕಿದೆ. ಇದೇರೀತಿ ಯೆಹೋವನು ಈ ದಿನ ನಿನ್ನಿಂದ ಇಸ್ರೇಲ್ ರಾಜ್ಯವನ್ನು ಹರಿದುಹಾಕಿದನು. ನಿನ್ನ ಸ್ನೇಹಿತರಲ್ಲಿ ಒಬ್ಬನಿಗೆ ಯೆಹೋವನು ರಾಜ್ಯಾಧಿಕಾರವನ್ನು ಕೊಟ್ಟಿದ್ದಾನೆ. ಅವನು ನಿನಗಿಂತ ಉತ್ತಮ ವ್ಯಕ್ತಿ.


ಆದರೆ ಈಗ ನಿನ್ನ ಆಳ್ವಿಕೆಯು ಮುಂದುವರಿಯುವುದಿಲ್ಲ. ಯೆಹೋವನು ತನಗೆ ವಿಧೇಯನಾಗಿರುವಂತಹ ಮನುಷ್ಯನಿಗಾಗಿ ಹುಡುಕುತ್ತಿದ್ದನು. ಯೆಹೋವನಿಗೆ ಅಂತಹ ಮನುಷ್ಯನು ಸಿಕ್ಕಿದ್ದಾನೆ. ತನ್ನ ಜನರನ್ನು ಆಳಲು ಯೆಹೋವನು ಅವನನ್ನು ಹೊಸ ನಾಯಕನನ್ನಾಗಿ ನೇಮಿಸುತ್ತಾನೆ. ನೀನು ಯೆಹೋವನ ಆಜ್ಞೆಗೆ ವಿಧೇಯನಾಗಲಿಲ್ಲ. ಆದ್ದರಿಂದ ಯೆಹೋವನು ಹೊಸ ನಾಯಕನನ್ನು ಆರಿಸಿಕೊಳ್ಳುವನು” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು