Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 7:50 - ಪರಿಶುದ್ದ ಬೈಬಲ್‌

50 ನೆನಪಿರಲಿ, ಈ ವಸ್ತುಗಳನ್ನೆಲ್ಲ ಮಾಡಿದವನು ನಾನೇ!’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

50 ಇವುಗಳನ್ನೆಲ್ಲಾ ನನ್ನ ಕೈಯೇ ನಿರ್ಮಿಸಿತಲ್ಲಾ ಎಂಬುದಾಗಿ ಕರ್ತನು ಹೇಳುತ್ತಾನೆ’ ಎಂದು ಪ್ರವಾದಿಯು ನುಡಿದಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

50 ಇವೆಲ್ಲವನ್ನೂ ನಿರ್ಮಿಸಿದವನು ನಾನೇ ಅಲ್ಲವೇ?’ ಎಂದು ಪ್ರಶ್ನಿಸುತ್ತಾರೆ ಸರ್ವೇಶ್ವರ, ಪ್ರವಾದಿಯ ಪ್ರವಚನವೊಂದರಲ್ಲಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

50 ಇವುಗಳನ್ನೆಲ್ಲಾ ನನ್ನ ಕೈಯೇ ನಿರ್ಮಿಸಿತಲ್ಲಾ ಎಂಬದಾಗಿ ಕರ್ತನು ಹೇಳುತ್ತಾನೆ ಎಂದು ಪ್ರವಾದಿಯು ನುಡಿದಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

50 ಇವುಗಳನ್ನೆಲ್ಲಾ ನಿರ್ಮಿಸಿದ್ದು ನನ್ನ ಕೈಯಿಂದ ಅಲ್ಲವೇ?’ ಎಂದು ಕರ್ತದೇವರು ಪ್ರಶ್ನಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

50 ಹೆ ಸಗ್ಳ್ಯೆ ಮಿಯಾಚ್ ರಚಲ್ಲೆ ನ್ಹಯ್ ಕಾಯ್!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 7:50
13 ತಿಳಿವುಗಳ ಹೋಲಿಕೆ  

“ದೇವರಾದ ಯೆಹೋವನೇ, ನೀನು ಭೂಮ್ಯಾಕಾಶಗಳನ್ನು ಸೃಷ್ಟಿಸಿದೆ. ಅವುಗಳನ್ನು ನೀನು ನಿನ್ನ ಅಪಾರವಾದ ಶಕ್ತಿಯಿಂದ ಸೃಷ್ಟಿಸಿದೆ. ನಿನಗೆ ಅಸಾಧ್ಯವಾದುದು ಯಾವುದೂ ಇಲ್ಲ.


“ಜನರೇ, ನೀವು ಈ ಕಾರ್ಯಗಳನ್ನು ಮಾಡುತ್ತಿರುವುದೇಕೆ? ನಾವು ದೇವರುಗಳಲ್ಲ. ನಾವು ನಿಮ್ಮಂತೆ ಕೇವಲ ಮನುಷ್ಯರು. ನಿಮಗೆ ಸುವಾರ್ತೆಯನ್ನು ಹೇಳುವುದಕ್ಕಾಗಿ ನಾವು ಬಂದೆವು. ವ್ಯರ್ಥವಾದ ಈ ಕಾರ್ಯಗಳನ್ನು ನೀವು ಬಿಟ್ಟುಬಿಡಿರಿ; ಜೀವಸ್ವರೂಪನಾದ ದೇವರ ಕಡೆಗೆ ತಿರುಗಿಕೊಳ್ಳಿರಿ. ಆಕಾಶವನ್ನೂ ಭೂಮಿಯನ್ನೂ ಸಮುದ್ರವನ್ನೂ ಮತ್ತು ಅವುಗಳಲ್ಲಿರುವ ಪ್ರತಿಯೊಂದನ್ನೂ ಸೃಷ್ಟಿಮಾಡಿದಾತನು ಆತನೇ.


ಯೆಹೋವನು ಹೇಳುತ್ತಾನೆ, “ಈ ಸಂದೇಶವನ್ನು ಆ ಜನರಿಗೆ ಹೇಳು: ‘ಆ ಸುಳ್ಳುದೇವರುಗಳು ಭೂಲೋಕವನ್ನೂ ಪರಲೋಕವನ್ನೂ ಸೃಷ್ಟಿ ಮಾಡಿಲ್ಲ. ಆ ಸುಳ್ಳುದೇವರುಗಳನ್ನು ನಾಶಮಾಡಲಾಗುವುದು; ಅವುಗಳು ಭೂಲೋಕದಿಂದಲೂ ಆಕಾಶದಿಂದಲೂ ಕಣ್ಮರೆಯಾಗುವವು.’”


ನಾನೇ ಎಲ್ಲವನ್ನು ಉಂಟುಮಾಡಿದೆನು. ನಾನು ಸೃಷ್ಟಿಸಿದ್ದರಿಂದ ಅವು ಅಸ್ತಿತ್ವದಲ್ಲಿವೆ.” ಇವು ಯೆಹೋವನ ನುಡಿಗಳು. “ಎಂಥ ಜನರನ್ನು ನಾನು ಪರಿಪಾಲಿಸುತ್ತೇನೆಂದು ಕೇಳುವಿರಾ? ಬಡವರ ವಿಷಯದಲ್ಲಿ ನಾನು ಚಿಂತಿಸುತ್ತೇನೆ. ದುಃಖಿಸುವ ಜನರಿಗಾಗಿ ನಾನು ಚಿಂತಿಸುತ್ತೇನೆ. ನನ್ನ ಮಾತುಗಳಿಗೆ ವಿಧೇಯರಾಗುವವರಿಗಾಗಿ ನಾನು ಚಿಂತಿಸುತ್ತೇನೆ.


ಭೂಮಿಯನ್ನು ನಿರ್ಮಿಸಿದವನೂ ಅದರಲ್ಲಿ ವಾಸಿಸುವ ಎಲ್ಲಾ ಜನರನ್ನು ಉಂಟುಮಾಡಿದವನೂ ನಾನೇ. ನನ್ನ ಸ್ವಹಸ್ತದಿಂದ ಆಕಾಶಮಂಡಲವನ್ನು ನಿರ್ಮಿಸಿದ್ದೇನೆ. ಆಕಾಶದಲ್ಲಿರುವ ಎಲ್ಲಾ ನಕ್ಷತ್ರಪುಂಜಗಳನ್ನು ನನ್ನ ಹತೋಟಿಯಲ್ಲಿಟ್ಟಿದ್ದೇನೆ.


ದೇವರಾದ ಯೆಹೋವನು ಜ್ಞಾನಿಯೆಂಬುದನ್ನು ನೀನು ಖಂಡಿತವಾಗಿಯೂ ಕೇಳಿರುವೆ. ಆತನು ತಿಳಿದಿರುವ ಪ್ರತಿಯೊಂದನ್ನೂ ಕಲಿತುಕೊಳ್ಳಲು ಜನರಿಗೆ ಸಾಧ್ಯವಿಲ್ಲ. ಆತನು ಆಯಾಸಗೊಳ್ಳುವದಿಲ್ಲ; ಆತನಿಗೆ ವಿಶ್ರಾಂತಿಯ ಅವಶ್ಯವಿಲ್ಲ. ಭೂಮಿಯಲ್ಲಿರುವ ದೂರ ಸ್ಥಳಗಳನ್ನೆಲ್ಲಾ ಮಾಡಿದವನು ಆತನೇ. ಆತನು ನಿರಂತರಕ್ಕೂ ಜೀವಿಸುವಾತನಾಗಿದ್ದಾನೆ.


ಯಾಕೆಂದರೆ ಯೆಹೋವನು ಆರು ದಿನಗಳಲ್ಲಿ ಕೆಲಸ ಮಾಡಿ ಭೂಮ್ಯಾಕಾಶಗಳನ್ನೂ ಸಮುದ್ರವನ್ನೂ ಅವುಗಳಲ್ಲಿರುವ ಸಮಸ್ತವನ್ನೂ ನಿರ್ಮಿಸಿ ಏಳನೆಯ ದಿನದಲ್ಲಿ ವಿಶ್ರಮಿಸಿದನು. ಆದ್ದರಿಂದ ಯೆಹೋವನು ಸಬ್ಬತ್ ದಿನವನ್ನು ಆಶೀರ್ವದಿಸಿ ಅದನ್ನು ತನ್ನ ದಿನವನ್ನಾಗಿ ಮಾಡಿದನು.


ಯೆಹೋವನು ನಿನ್ನನ್ನು ರೂಪಿಸಿದನು. ನೀನು ನಿನ್ನ ತಾಯಿಯ ಗರ್ಭದಲ್ಲಿರುವಾಗಲೇ ಆತನು ನಿನ್ನನ್ನು ರೂಪಿಸಿದನು. ಆತನು ಹೇಳುವುದೇನೆಂದರೆ, “ಯೆಹೋವನಾದ ನಾನು ಸಮಸ್ತವನ್ನೂ ಸೃಷ್ಟಿಸಿದೆನು. ಆಕಾಶಮಂಡಲವನ್ನು ಅದರ ಸ್ಥಳದಲ್ಲಿ ಇಟ್ಟೆನು; ಭೂಮಿಯನ್ನು ನನ್ನ ಮುಂದೆ ಹರಡಿದೆನು.”


“ದೇವರ ಬಗ್ಗೆಯೇ ನಾನು ನಿಮಗೆ ಹೇಳುತ್ತಿದ್ದೇನೆ! ಇಡೀ ಪ್ರಪಂಚವನ್ನು ಮತ್ತು ಅದರಲ್ಲಿರುವ ಪ್ರತಿಯೊಂದನ್ನು ಸೃಷ್ಟಿಮಾಡಿದಾತನೇ ಆ ದೇವರು. ಆತನೇ ಭೂಮ್ಯಾಕಾಶಗಳ ಒಡೆಯನು. ಮನುಷ್ಯರು ನಿರ್ಮಿಸುವ ಗುಡಿಗಳಲ್ಲಿ ಆತನು ಜೀವಿಸುವವನಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು