ಅಪೊಸ್ತಲರ ಕೃತ್ಯಗಳು 7:51 - ಪರಿಶುದ್ದ ಬೈಬಲ್51 ಸ್ತೆಫನನು ಮಾತನ್ನು ಮುಂದುವರಿಸಿದನು: “ಮೊಂಡರಾದ ಯೆಹೂದ್ಯನಾಯಕರೇ! ನೀವು ನಿಮ್ಮ ಹೃದಯಗಳನ್ನು ದೇವರಿಗೆ ಕೊಟ್ಟಿಲ್ಲ. ನೀವು ಆತನಿಗೆ ಕಿವಿಗೊಡುವುದಿಲ್ಲ. ಪವಿತ್ರಾತ್ಮನು ನಿಮಗೆ ತಿಳಿಸಲು ಪ್ರಯತ್ನಿಸುತ್ತಿರುವ ವಿಷಯಕ್ಕೆ ನೀವು ಯಾವಾಗಲೂ ವಿರೋಧಿಗಳಾಗಿದ್ದೀರಿ. ನಿಮ್ಮ ಪಿತೃಗಳು ಹೀಗೆಯೇ ಮಾಡಿದರು ಮತ್ತು ನೀವೂ ಅವರಂತೆಯೇ ಇದ್ದೀರಿ! ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201951 “ಹಠಮಾರಿಗಳೇ, ಮನಶುದ್ಧಿಯೂ, ಕರ್ಣಶುದ್ಧಿಯೂ ಇಲ್ಲದವರೇ, ನಿಮ್ಮ ಪೂರ್ವಿಕರು ಹೇಗೋ ಹಾಗೆಯೇ ನೀವೂ ಯಾವಾಗಲೂ ಪವಿತ್ರಾತ್ಮನಿಗೆ ಎದುರಾಗಿ ನಡೆಯುವವರಾಗಿದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)51 ಸ್ತೇಫನನು ಮುಂದುವರೆದು, “ಎಷ್ಟು ಹಟಮಾರಿಗಳು ನೀವು; ಎಂಥಾ ಕಠಿಣ ಹೃದಯಿಗಳು ನೀವು’ ದೇವರ ಸಂದೇಶಕ್ಕೆ ಎಷ್ಟು ಕಿವುಡರು ನೀವು! ನಿಮ್ಮ ಪೂರ್ವಜರಂತೆ ನೀವು ಸಹ ಪವಿತ್ರಾತ್ಮ ಅವರನ್ನು ಯಾವಾಗಲೂ ಪ್ರತಿಭಟಿಸುತ್ತೀರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)51 ಚಂಡಿಗಳೇ, ಮನಶ್ಶುದ್ಧಿಯೂ ಕರ್ಣಶುದ್ಧಿಯೂ ಇಲ್ಲದವರೇ, ನಿಮ್ಮ ಪಿತೃಗಳು ಹೇಗೋ ಹಾಗೆಯೇ ನೀವೂ ಯಾವಾಗಲೂ ಪವಿತ್ರಾತ್ಮನನ್ನು ಎದುರಿಸುವವರಾಗಿದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ51 “ಹಟಮಾರಿಗಳೇ! ಹೃದಯದಲ್ಲಿಯೂ ಕಿವಿಯಲ್ಲಿಯೂ ಸುನ್ನತಿ ಹೊಂದದವರೇ, ನೀವು ಸಹ ನಿಮ್ಮ ಪಿತೃಗಳಂತೆಯೇ ಯಾವಾಗಲೂ ಪವಿತ್ರಾತ್ಮ ದೇವರನ್ನು ಎದುರಿಸುತ್ತೀರಿ! ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್51 ಸ್ತೆಪನಾನ್ ಅನಿಬಿ ಬೊಲುನ್, “ಮಂಡ್ ಮನಾಚ್ಯಾ ಲೊಕಾನು ತುಮಿ ತುಮ್ಚಿ ಮಾನಾ ದೆವಾಕ್ ದಿವ್ಕ್ ನ್ಯಾಸಿ, ಅನಿ ತೆಚ್ಯಾ ಗೊಸ್ಟಿಯಾಕ್ನಿ ಕಾನ್ ದಿವ್ಕ್ ನ್ಯಾಸಿ, ಪವಿತ್ರ್ ಆತ್ಮ್ಯಾಕ್ ಕನ್ನಾಬಿ ವಿರೊಧ್ ಹೊವ್ನ್ ಹಾಸಿ ತುಮ್ಚ್ಯಾ ಪುರ್ವಜ್ ಲೊಕಾನಿ ಬಿ ಅಸೆಚ್ ಕರ್‍ಲ್ಯಾನಿ, ಅನಿ ತುಮಿ ಬಿ ತೆಂಚ್ಯಾ ಸಾರ್ಕೆಚ್ ಹಾಸಿ! ಅಧ್ಯಾಯವನ್ನು ನೋಡಿ |
ಯೆಹೋವನ ಮನುಷ್ಯರಾಗಿರಿ, ನಿಮ್ಮ ಹೃದಯ ಪರಿವರ್ತನೆ ಮಾಡಿಕೊಳ್ಳಿರಿ. ಯೆಹೂದದ ಜನಗಳೇ, ಜೆರುಸಲೇಮಿನ ಜನರೇ, ನೀವು ಬದಲಾಗದಿದ್ದರೆ ನನಗೆ ವಿಪರೀತ ಕೋಪ ಬರುವುದು. ನನ್ನ ಕೋಪವು ಬೆಂಕಿಯ ಜ್ವಾಲೆಯಂತೆ ಭರದಿಂದ ಹಬ್ಬುವದು. ನನ್ನ ಕೋಪವು ನಿಮ್ಮನ್ನು ಸುಟ್ಟು ಬೂದಿ ಮಾಡುವುದು. ಯಾರಿಂದಲೂ ಆ ಬೆಕಿಯನ್ನು ಆರಿಸುವುದು ಸಾಧ್ಯವಾಗುವದಿಲ್ಲ. ಇದೆಲ್ಲ ಏಕೆ ನಡೆಯುವುದು? ನೀವು ಮಾಡಿದ ದುಷ್ಕೃತ್ಯಗಳಿಂದಲೇ.”
ನೀವು ನನ್ನ ಆಲಯದೊಳಗೆ ಅನ್ಯರನ್ನು ತಂದಿರುತ್ತೀರಿ. ಅವರು ಸುನ್ನತಿಯಾದವರಾಗಿರಲಿಲ್ಲ. ಅವರು ಸಂಪೂರ್ಣವಾಗಿ ನನ್ನನ್ನು ನಂಬಿರಲಿಲ್ಲ. ಈ ರೀತಿಯಾಗಿ ನೀವು ನನ್ನ ಆಲಯವನ್ನು ಹೊಲೆ ಮಾಡಿರುತ್ತೀರಿ. ನೀವು ನಾವು ಮಾಡಿಕೊಂಡ ಒಡಂಬಡಿಕೆಯನ್ನು ಮುರಿದುಬಿಟ್ಟಿರಿ. ಭಯಂಕರ ಕೃತ್ಯಗಳನ್ನು ಮಾಡಿ ಆಮೇಲೆ ನನಗೆ ರೊಟ್ಟಿ, ಕೊಬ್ಬು, ರಕ್ತಗಳ ಕಾಣಿಕೆ ಅರ್ಪಿಸುತ್ತೀರಿ. ಆದರೆ ಇವೆಲ್ಲಾ ನನ್ನ ಆಲಯವನ್ನು ಅಶುದ್ಧಗೊಳಿಸುತ್ತಿವೆ.
“ಆ ಯೆಹೂದ್ಯರಿಂದ ತಿರಸ್ಕೃತನಾದವನೇ ಈ ಮೋಶೆ. ಅವರು ಅವನಿಗೆ, ‘ನಿನ್ನನ್ನು ನಮ್ಮ ಅಧಿಪತಿ ಎಂದಾಗಲಿ ನ್ಯಾಯಾಧೀಶ ಎಂದಾಗಲಿ ನಿನಗೆ ಯಾರಾದರೂ ಹೇಳಿದರೇ?’ ಎಂದು ಪ್ರಶ್ನಿಸಿದ್ದರು. ಆದರೆ ದೇವರು ಅಧಿಪತಿಯನ್ನಾಗಿಯೂ ವಿಮೋಚಕನನ್ನಾಗಿಯೂ ಕಳುಹಿಸಿದ್ದು ಆ ಮೋಶೆಯನ್ನೇ. ದೇವರು ತನ್ನ ದೂತನ ಮೂಲಕವಾಗಿ ಮೋಶೆಯನ್ನು ಕಳುಹಿಸಿದನು. ಉರಿಯುವ ಪೊದೆಯಲ್ಲಿ ಮೋಶೆಯು ಕಂಡದ್ದು ಈ ದೇವದೂತನನ್ನೇ.