ಅಪೊಸ್ತಲರ ಕೃತ್ಯಗಳು 7:52 - ಪರಿಶುದ್ದ ಬೈಬಲ್52 ಜೀವಸಿದ್ದ ಪ್ರವಾದಿಗಳಲ್ಲಿ ಪ್ರತಿಯೊಬ್ಬರನ್ನೂ ನಿಮ್ಮ ಪಿತೃಗಳು ಹಿಂಸಿಸಿದರು. ನೀತಿವಂತನೊಬ್ಬನು (ಕ್ರಿಸ್ತನು) ಬರುತ್ತಾನೆಂದು ಬಹುಕಾಲದ ಹಿಂದೆಯೇ ಆ ಪ್ರವಾದಿಗಳು ತಿಳಿಸಿದ್ದರು. ಆದರೆ ನಿಮ್ಮ ಪಿತೃಗಳು ಆ ಪ್ರವಾದಿಗಳನ್ನು ಕೊಂದುಹಾಕಿದರು. ಈಗ ನೀವು ನೀತಿವಂತನಿಗೆ ವಿರುದ್ಧವಾಗಿ ತಿರುಗಿ ಆತನನ್ನು ಕೊಂದುಹಾಕಿದಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201952 ಪ್ರವಾದಿಗಳಲ್ಲಿ ನಿಮ್ಮ ಪೂರ್ವಿಕರು ಹಿಂಸೆಪಡಿಸದವರು ಯಾರಿದ್ದಾರೆ? ಅವರು ಆ ನೀತಿಸ್ವರೂಪನಾದ ಕರ್ತನ ಆಗಮನದ ವಿಷಯದಲ್ಲಿ ಮುಂತಿಳಿಸಿದವರನ್ನು ಕೊಂದರು, ನೀವು ಈಗ ಆತನನ್ನು ಹಿಡಿದುಕೊಟ್ಟು ಕೊಲ್ಲಿಸಿದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)52 ನಿಮ್ಮ ಪೂರ್ವಜರು ಹಿಂಸೆಗೆ ಗುರಿಪಡಿಸದ ಪ್ರವಾದಿ ಯಾರಾದರೂ ಇದ್ದಾರೆಯೆ? ಸತ್ಯಸ್ವರೂಪನು ಬರಲಿದ್ದಾನೆಂದು ಮುಂತಿಳಿಸಿದವರನ್ನು ಅವರು ಕೊಂದುಹಾಕಿದರು. ನೀವಾದರೋ, ಆ ಸತ್ಯಸ್ವರೂಪನನ್ನು ಹಿಡಿದುಕೊಟ್ಟು ಕೊಲೆಮಾಡಿಸಿದಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)52 ಪ್ರವಾದಿಗಳಲ್ಲಿ ನಿಮ್ಮ ಪಿತೃಗಳು ಹಿಂಸೆಪಡಿಸದವರು ಯಾರಿದ್ದಾರೆ? ಅವರು ಆ ನೀತಿ ಸ್ವರೂಪನ ಆಗಮನದ ವಿಷಯದಲ್ಲಿ ಮುಂತಿಳಿಸಿದವರನ್ನು ಕೊಂದರು, ನೀವು ಈಗ ಆತನನ್ನು ಹಿಡುಕೊಟ್ಟು ಕೊಂದವರಾದಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ52 ನಿಮ್ಮ ಪಿತೃಗಳು ಹಿಂಸೆಪಡಿಸದೆ ಇದ್ದ ಪ್ರವಾದಿ ಒಬ್ಬನಾದರೂ ಇರುವನೇ? ನೀತಿವಂತರಾಗಿರುವ ಒಬ್ಬರು ಬರಲಿದ್ದಾರೆಂದು ಮುಂತಿಳಿಸಿದವರನ್ನು ಸಹ ಅವರು ಕೊಂದುಹಾಕಿದರು. ಈಗ ನೀವೇ ಅವರನ್ನು ಹಿಡಿದುಕೊಟ್ಟು ಕೊಲೆಮಾಡಿದ್ದೀರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್52 ತುಮ್ಚ್ಯಾ ಪುರ್ವಜಾನಿ ತರಾಸ್ ದಿಸ್ತಾನಾ ಸೊಡಲೊ ಪ್ರವಾದಿ ಕೊನ್ ಹಾಯ್? ಅನಿ ತೆನಿ ತ್ಯಾ ನಿತಿವಂತಾಚ್ಯಾ ಯೆನ್ಯಾಚ್ಯಾ ಅದ್ದಿಚ್ ಬರಿ ಖಬರ್ ಸಾಂಗಲ್ಲ್ಯಾಕ್ನಿ ಜಿವ್ ಕಾಡ್ಲ್ಯಾನಿ. ಅಧ್ಯಾಯವನ್ನು ನೋಡಿ |
ಎಲೀಯನು, “ಸರ್ವಶಕ್ತನಾದ ಯೆಹೋವ ದೇವರೇ, ನಾನು ಯಾವಾಗಲೂ ನಿನ್ನ ಸೇವೆಯನ್ನು ಮಾಡಿದೆನು. ನಾನು ನನ್ನಿಂದ ಸಾಧ್ಯವಾದಷ್ಟು ಉತ್ತಮವಾಗಿ ನಿನ್ನ ಸೇವೆಯನ್ನು ಮಾಡಿದೆನು. ಆದರೆ ಇಸ್ರೇಲಿನ ಜನರು ನಿನ್ನೊಂದಿಗೆ ತಾವು ಮಾಡಿಕೊಂಡ ಒಡಂಬಡಿಕೆಯನ್ನು ಉಲ್ಲಂಘಿಸಿದರು. ಅವರು ನಿನ್ನ ಯಜ್ಞವೇದಿಕೆಗಳನ್ನು ನಾಶಪಡಿಸಿದರು. ಅವರು ನಿನ್ನ ಪ್ರವಾದಿಗಳನ್ನು ಕೊಂದುಹಾಕಿದರು. ಇನ್ನೂ ಜೀವಂತವಾಗಿರುವ ಪ್ರವಾದಿಯು ನಾನೊಬ್ಬನು ಮಾತ್ರ. ಅವರು ಈಗ ನನ್ನನ್ನೂ ಕೊಲ್ಲಲು ಪ್ರಯತ್ನಿಸುತ್ತಿದ್ದಾರೆ!” ಎಂದು ಹೇಳಿದನು.
ಕ್ರಿಸ್ತನ ಆತ್ಮನು ಅವರಲ್ಲಿದ್ದನು. ಆ ಆತ್ಮನು ಕ್ರಿಸ್ತನಿಗೆ ಸಂಭವಿಸಬಹುದಾದ ಸಂಕಟವನ್ನು ಮತ್ತು ಆ ಸಂಕಟಗಳ ನಂತರ ಬರಲಿದ್ದ ಮಹಿಮೆಯನ್ನು ಕುರಿತು ತಿಳಿಸುತ್ತಿದ್ದನು. ಆ ಪ್ರವಾದಿಗಳು ತಮಗೆ ಆತ್ಮನು ತೋರಿಸುತ್ತಿದ್ದುದನ್ನು ತಿಳಿದುಕೊಳ್ಳಲು ಪ್ರಯತ್ನಿಸಿದರು. ಆ ಸಂಗತಿಗಳು ಯಾವಾಗ ಸಂಭವಿಸುತ್ತವೆ ಹಾಗೂ ಆ ಕಾಲದಲ್ಲಿ ಈ ಲೋಕವು ಹೇಗಿರುತ್ತದೆ ಎಂಬುದನ್ನು ತಿಳಿದುಕೊಳ್ಳಲು ಪ್ರಯತ್ನಿಸಿದರು.
ನಜರೇತಿನ ಯೇಸು ಕ್ರಿಸ್ತನ ಹೆಸರಿನಿಂದ ಈ ಮನುಷ್ಯನಿಗೆ ಗುಣವಾಯಿತೆಂಬುದನ್ನು ನೀವು ಮತ್ತು ಯೆಹೂದ್ಯರೆಲ್ಲರು ತಿಳಿದುಕೊಳ್ಳಬೇಕೆಂದು ನಾನು ಬಯಸುತ್ತೇನೆ! ನೀವು ಯೇಸುವನ್ನು ಶಿಲುಬೆಗೇರಿಸಿದಿರಿ. ದೇವರು ಆತನನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದನು. ಈ ಮನುಷ್ಯನು ಕುಂಟನಾಗಿದ್ದನು, ಆದರೆ ಈಗ ಇವನು ಗುಣಹೊಂದಿದ್ದಾನೆ ಮತ್ತು ಯೇಸುವಿನ ಹೆಸರಿನಿಂದ ನಿಮ್ಮ ಮುಂದೆ ನಿಂತುಕೊಳ್ಳಲು ಶಕ್ತನಾಗಿದ್ದಾನೆ!
ಎಲೀಯನು, “ಸರ್ವಶಕ್ತನಾದ ಯೆಹೋವ ದೇವರೇ, ನಾನು ಯಾವಾಗಲೂ ನಿನ್ನ ಸೇವೆಯನ್ನು ಮಾಡಿದೆನು. ನಾನು ನನ್ನಿಂದ ಸಾಧ್ಯವಾದಷ್ಟು ಉತ್ತಮವಾಗಿ ನಿನ್ನ ಸೇವೆಯನ್ನು ಮಾಡಿದೆನು. ಆದರೆ ಇಸ್ರೇಲಿನ ಜನರು ನಿನ್ನೊಂದಿಗೆ ತಾವು ಮಾಡಿಕೊಂಡ ಒಡಂಬಡಿಕೆಯನ್ನು ಉಲ್ಲಂಘಿಸಿದರು. ಅವರು ನಿನ್ನ ಯಜ್ಞವೇದಿಕೆಗಳನ್ನು ನಾಶಪಡಿಸಿದರು. ಅವರು ನಿನ್ನ ಪ್ರವಾದಿಗಳನ್ನು ಕೊಂದುಹಾಕಿದರು. ಇನ್ನೂ ಜೀವಂತವಾಗಿರುವ ಪ್ರವಾದಿಯು ನಾನೊಬ್ಬನು ಮಾತ್ರ. ಅವರು ಈಗ ನನ್ನನ್ನೂ ಕೊಲ್ಲಲು ಪ್ರಯತ್ನಿಸುತ್ತಿದ್ದಾರೆ!” ಎಂದು ಹೇಳಿದನು.