ಅಪೊಸ್ತಲರ ಕೃತ್ಯಗಳು 8:1 - ಪರಿಶುದ್ದ ಬೈಬಲ್1-3 ಸ್ತೆಫನನ ಕೊಲೆಗೆ ಸೌಲನ ಸಮ್ಮತಿಯಿತ್ತು. ಕೆಲವು ಭಕ್ತರು ಸ್ತೆಫನನನ್ನು ಸಮಾಧಿ ಮಾಡಿದರು. ಅವರು ಅವನಿಗೋಸ್ಕರ ಬಹಳವಾಗಿ ಗೋಳಾಡಿದರು. ಜೆರುಸಲೇಮಿನಲ್ಲಿದ್ದ ವಿಶ್ವಾಸಿಗಳ ಸಮುದಾಯವನ್ನು ಹಿಂಸಿಸಲು ಯೆಹೂದ್ಯರು ಅಂದೇ ಆರಂಭಿಸಿ ಅವರನ್ನು ಬಹಳವಾಗಿ ಸಂಕಟಪಡಿಸಿದರು. ಆ ಸಭೆಯನ್ನು ನಾಶಮಾಡಲು ಸೌಲನು ಮನೆಗಳಿಗೆ ನುಗ್ಗಿ ಗಂಡಸರನ್ನೂ ಹೆಂಗಸರನ್ನೂ ಎಳೆದೊಯ್ದು ಸೆರೆಮನೆಗೆ ಹಾಕಿದನು. ವಿಶ್ವಾಸಿಗಳೆಲ್ಲಾ ಜೆರುಸಲೇಮನ್ನು ಬಿಟ್ಟುಹೋದರು. ಅಪೊಸ್ತಲರು ಮಾತ್ರ ಅಲ್ಲೇ ಇದ್ದರು. ವಿಶ್ವಾಸಿಗಳು ಜುದೇಯ ಮತ್ತು ಸಮಾರ್ಯದ ಬೇರೆಬೇರೆ ಸ್ಥಳಗಳಿಗೆ ಹೊರಟುಹೋದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಸೌಲನಿಗೆ ಅವನ ಕೊಲೆಗೆ ಸಮ್ಮತಿಸಿದನು. ಆ ದಿನದಲ್ಲಿ ಯೆರೂಸಲೇಮಿನಲ್ಲಿದ್ದ ಸಭೆಗೆ ದೊಡ್ಡ ಹಿಂಸೆ ಉಂಟಾಯಿತು. ಅಪೊಸ್ತಲರು ಹೊರತಾಗಿ ಎಲ್ಲರೂ ಯೂದಾಯ, ಸಮಾರ್ಯ ಸೀಮೆಗಳಿಗೆ ಚದರಿಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಆ ದಿನವೇ ಜೆರುಸಲೇಮಿನ ಧರ್ಮಸಭೆಯ ವಿರುದ್ಧ ಕ್ರೂರ ಹಿಂಸೆ ಪ್ರಾರಂಭ ಆಯಿತು. ಪ್ರೇಷಿತರ ಹೊರತು ಇತರ ಭಕ್ತವಿಶ್ವಾಸಿಗಳು ಜುದೇಯ ಮತ್ತು ಸಮಾರಿಯ ಪ್ರಾಂತ್ಯಗಳಲ್ಲೆಲ್ಲಾ ಚದರಿಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಇದನ್ನು ಹೇಳಿ ನಿದ್ರೆಹೋದನು. ಸೌಲನು ಅವನ ಕೊಲೆಗೆ ಸಮ್ಮತಿಸುವವನಾಗಿದ್ದನು. ಆ ದಿವಸದಲ್ಲಿ ಯೆರೂಸಲೇವಿುನಲ್ಲಿದ್ದ ಸಭೆಗೆ ದೊಡ್ಡ ಹಿಂಸೆ ಉಂಟಾಯಿತು. ಅಪೊಸ್ತಲರು ಹೊರತಾಗಿ ಎಲ್ಲರು ಯೂದಾಯ ಸಮಾರ್ಯ ಸೀಮೆಗಳಲ್ಲಿ ಚದರಿಹೋದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಸೌಲನು ಸ್ತೆಫನನ ಕೊಲೆಗೆ ಸಮ್ಮತಿಸಿದ್ದನು. ಆ ದಿನವೇ ಯೆರೂಸಲೇಮಿನ ಸಭೆಗೆ ವಿರೋಧವಾಗಿ ಮಹಾಹಿಂಸೆ ಪ್ರಾರಂಭವಾಯಿತು, ಅಪೊಸ್ತಲರನ್ನು ಬಿಟ್ಟು ಉಳಿದವರೆಲ್ಲರೂ ಯೂದಾಯ ಮತ್ತು ಸಮಾರ್ಯ ಪ್ರಾಂತಗಳಿಗೆ ಚದರಿಹೋದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್1 ಸಾವ್ಲುಕ್ ಸ್ತೆಪನಾಚೊ ಜಿವ್ ಕಾಡಲೆ ಒಪ್ಕಿ ಹೊಲ್ಲೆ, ತ್ಯಾ ದಿಸಾಕ್ನಾಚ್ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾಕ್ ವಿರೊದ್ ಹೊವ್ನ್ ತರಾಸ್ ಸುರು ಹೊಲೊ, ಅನಿ ತೆನಿ ಸಗ್ಳ್ಯಾನಿ ಅಪೊಸ್ತಲಾಕ್ನಿ ಸೊಡುನ್ ಸಾಮಾರ್ಯಾಚ್ಯಾ ಗಾಂವಾಕ್ನಿ ಪಗ್ಳುನ್ ಗೆಲೆ. ಅಧ್ಯಾಯವನ್ನು ನೋಡಿ |
ದಾನಿಯೇಲನು ಯಾವಾಗಲೂ ಪ್ರತಿದಿನ ಮೂರು ಸಲ ದೇವರಲ್ಲಿ ಪ್ರಾರ್ಥನೆಯನ್ನು ಮಾಡುತ್ತಿದ್ದನು. ದಾನಿಯೇಲನು ಮೊಣಕಾಲೂರಿ ದೇವರಲ್ಲಿ ಪ್ರಾರ್ಥಿಸುತ್ತಿದ್ದನು ಮತ್ತು ದೇವರನ್ನು ಸ್ತುತಿಸುತ್ತಿದ್ದನು. ಈ ಹೊಸ ಶಾಸನದ ಬಗ್ಗೆ ಕೇಳಿದ ಮೇಲೆ ದಾನಿಯೇಲನು ತನ್ನ ಮನೆಯ ಮಹಡಿಯ ಮೇಲಿದ್ದ ತನ್ನ ಕೋಣೆಗೆ ಹೋಗಿ ಜೆರುಸಲೇಮಿನ ಕಡೆಗೆ ತೆರೆದ ಕಿಟಕಿಯ ಬಳಿ ಮೊಣಕಾಲೂರಿ ಎಂದಿನಂತೆ ಪ್ರಾರ್ಥನೆಮಾಡಿದನು.