Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 8:27 - ಪರಿಶುದ್ದ ಬೈಬಲ್‌

27 ಆದ್ದರಿಂದ ಫಿಲಿಪ್ಪನು ಸಿದ್ಧನಾಗಿ ಹೊರಟನು. ಇಥಿಯೋಪಿಯಾದ ಒಬ್ಬನನ್ನು ಅವನು ದಾರಿಯಲ್ಲಿ ಕಂಡನು. ಈ ಮನುಷ್ಯನು ನಪುಂಸಕನಾಗಿದ್ದನು. ಇಥಿಯೋಪಿಯದ ರಾಣಿಯಾದ ಕಂದಾಕೆಯ ಆಸ್ಥಾನದಲ್ಲಿ ಇವನು ಮುಖ್ಯಾಧಿಕಾರಿಯಾಗಿದ್ದನು. ಹಣವನ್ನೆಲ್ಲ ನೋಡಿಕೊಳ್ಳುವ ಜವಾಬ್ದಾರಿ ಇವನದೇ ಆಗಿತ್ತು. ಈ ಮನುಷ್ಯನು ಆರಾಧನೆಗಾಗಿ ಜೆರುಸಲೇಮಿಗೆ ಹೋಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಅವನು ಎದ್ದು ಹೊರಟು ಹೋಗುತ್ತಿರುವಾಗ ಇಥಿಯೋಪ್ಯ ದೇಶದ ಒಬ್ಬ ಮನುಷ್ಯನನ್ನು ಕಂಡನು. ಅವನು ಕಂಚುಕಿಯೂ ಇಥಿಯೋಪ್ಯದವರ ರಾಣಿಯಾಗಿದ್ದ ಕಂದಾಕೆಯ ಕೈಕೆಳಗೆ ದೊಡ್ಡ ಅಧಿಕಾರಿಯೂ ಹಾಗೂ ಆಕೆಯ ಎಲ್ಲಾ ಖಜಾನೆಯ ಮೇಲ್ವಿಚಾರಕನೂ ಆಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27-28 ಅಂತೆಯೇ ಫಿಲಿಪ್ಪನು ಹೊರಟನು. ಆಗ ಇಥಿಯೋಪಿಯದ ಕಂಚುಕಿಯೊಬ್ಬನು ಅದೇ ಮಾರ್ಗವಾಗಿ ಬರುತ್ತಿದ್ದನು. ಅವನು ಆ ದೇಶದ ರಾಣಿ ಕಂದಾಕಿಯ ಕೋಶಾಧಿಕಾರಿ ಹಾಗೂ ಸಚಿವ. ದೇವಾರಾಧನೆಗೆಂದು ಜೆರುಸಲೇಮಿಗೆ ಹೋಗಿ ಹಿಂದಿರುಗುತ್ತಿದ್ದನು. ಅವನು ತನ್ನ ರಥದಲ್ಲಿ ಕುಳಿತು ಯೆಶಾಯನ ಪ್ರವಾದನೆಯನ್ನು ಓದುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಅವನು ಎದ್ದು ಹೊರಟುಹೋದನು; ಹೋಗುತ್ತಿರುವಾಗ ಐಥಿಯೋಪ್ಯ ದೇಶದ ಒಬ್ಬ ಮನುಷ್ಯನನ್ನು ಕಂಡನು. ಅವನು ಕಂಚುಕಿಯೂ ಐಥಿಯೋಪ್ಯದವರ ರಾಣಿಯಾಗಿದ್ದ ಕಂದಾಕೆಯ ಕೈಕೆಳಗೆ ದೊಡ್ಡ ಅಧಿಕಾರಿಯೂ ಆಕೆಯ ಎಲ್ಲಾ ಖಜಾನೆಯ ಮೇಲ್ವಿಚಾರಕನೂ ಆಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಅದರಂತೆ ಅವನು ಹೋಗುತ್ತಿದ್ದಾಗ, ಮಾರ್ಗದಲ್ಲಿ ಐಥಿಯೋಪ್ಯದ ರಾಣಿ ಕಂದಾಕೆಯ ಹಣಕಾಸಿನ ಮುಖ್ಯ ಅಧಿಕಾರಿಯಾಗಿದ್ದ ಕಂಚುಕಿಯನ್ನು ಭೇಟಿಯಾದನು. ಈ ಮನುಷ್ಯನು ಆರಾಧನೆಗಾಗಿ ಯೆರೂಸಲೇಮಿಗೆ ಹೋಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

27 ತಸೆ ಹೊವ್ನ್ ಫಿಲಿಪ್ ತಯಾರ್ ಹೊವ್ನ್ ಜಾವ್ಲಾಲೊ, ತನ್ನಾ ಇಥಿಯೊಫಿಯಾತ್ಲೊ, ಎಕ್ ಮಾನುಸ್ ತೆಕಾ ವಾಟೆರ್ ದಿಸ್ಲೊ, ಹೊ ಮಾನುಸ್ ಹಿಜ್ಡಾ ಹೊಲ್ಲೊ, ಇಥಿಯೊಫಿಯಾಚ್ಯಾ ರಾನಿಚ್ಯಾ ಆಸ್ಥಾನಾತ್ ಹ್ಯೊ ಮೊಟೊ ಅಧಿಕಾರಿ ಹೊವ್ನ್ ಹೊತ್ತೊ ಪೈಸೆ ಸಗ್ಳ್ಯೆ ಬಗುನ್ ಘೆತಲಿ ಜವಾಬ್ದಾರಿ ತೆಕಾಚ್ ಹೊತ್ತಿ, ತೊ ದೆವಾಚಿ ಸ್ತುತಿ ಕರುಕ್ ಸಾಟ್ನಿ ಜೆರುಜಲೆಮಾಕ್ ಗೆಲ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 8:27
25 ತಿಳಿವುಗಳ ಹೋಲಿಕೆ  

ಇಥಿಯೋಪ್ಯದಲ್ಲಿ ನದಿಯ ಆಚೆ ದಡದವರೆಗೂ ಜನರು ಬರುವರು. ನನ್ನಿಂದ ಚದರಿಹೋಗಿದ್ದ ಜನರು ನನ್ನ ಬಳಿಗೆ ಬರುವರು. ನನ್ನನ್ನು ಆರಾಧಿಸಲು ಬರುವವರು ನನಗೆ ಕಾಣಿಕೆಗಳನ್ನು ತರುವರು.


ಅವರು ಈಜಿಪ್ಟಿನಿಂದ ಐಶ್ವರ್ಯವನ್ನು ನಿನಗೆ ತಂದುಕೊಡುವಂತೆ ಮಾಡು. ದೇವರೇ, ಇಥಿಯೋಪಿಯದವರು ತಮ್ಮ ಐಶ್ವರ್ಯವನ್ನು ನಿನಗೆ ತಂದುಕೊಡುವಂತೆ ಮಾಡು.


ಆ ಅಧಿಕಾರಿಗಳು ಯೆರೆಮೀಯನನ್ನು ಬಾವಿಗೆ ಹಾಕಿದ ಸಂಗತಿಯು ಎಬೆದ್ಮೆಲೆಕನೆಂಬ ಮನುಷ್ಯನ ಕಿವಿಗೆ ಬಿತ್ತು. ಎಬೆದ್ಮೆಲೆಕನು ಇಥಿಯೋಪಿಯದವನಾಗಿದ್ದು ಅರಮನೆಯಲ್ಲಿ ಕಂಚುಕಿಯಾಗಿದ್ದನು. ರಾಜನಾದ ಚಿದ್ಕೀಯನು ಬೆನ್ಯಾಮೀನ್ ಊರ ಬಾಗಲಲ್ಲಿ ಕುಳಿತಿದ್ದನು. ಎಬೆದ್ಮೆಲೆಕನು ಅರಮನೆಯನ್ನು ಬಿಟ್ಟು ಬೆನ್ಯಾಮೀನ್ ಊರಹೆಬ್ಬಾಗಿಲಿನ ಹತ್ತಿರ ಕುಳಿತಿದ್ದ ರಾಜನಾದ ಚಿದ್ಕೀಯನ ಹತ್ತಿರ ಬಂದು ಹೀಗೆ ಹೇಳಿದನು:


ದೇವಜನರು ಪ್ರಪಂಚದ ಅನೇಕ ಕಡೆಗಳಲ್ಲಿ ಈಗ ವಾಸವಾಗಿದ್ದಾರೆ. ಅವರಲ್ಲಿ ಕೆಲವರು ಈಜಿಪ್ಟಿನಲ್ಲಿಯೂ ಬಾಬಿಲೋನಿನಲ್ಲಿಯೂ ನೆಲೆಸಿದ್ದಾರೆ. ಇನ್ನು ಕೆಲವರು ಫಿಲಿಷ್ಟಿಯದಲ್ಲಿಯೂ ತೂರಿನಲ್ಲಿಯೂ ಇಥಿಯೋಪಿಯದಲ್ಲಿಯೂ ನೆಲೆಸಿದ್ದಾರೆ.


ಅಲ್ಲಿ ಗ್ರೀಕ್ ಜನರು ಸಹ ಇದ್ದರು. ಪಸ್ಕಹಬ್ಬದಲ್ಲಿ ಆರಾಧಿಸುವುದಕ್ಕಾಗಿ ಜೆರುಸಲೇಮಿಗೆ ಹೋಗಿದ್ದವರಲ್ಲಿ ಇವರೂ ಸೇರಿದ್ದರು.


“ನ್ಯಾಯತೀರ್ಪಿನ ದಿನದಂದು ದಕ್ಷಿಣ ದೇಶದ ರಾಣಿಯು ಇಂದು ಜೀವಿಸುತ್ತಿರುವ ನಿಮ್ಮೊಂದಿಗೆ ಎದ್ದುನಿಂತು ನಿಮ್ಮನ್ನು ತಪ್ಪಿತಸ್ಥರೆಂದು (ಅಪರಾಧಿಗಳು) ನಿರೂಪಿಸುವಳು. ಏಕೆಂದರೆ, ಆ ರಾಣಿಯು ಸೊಲೊಮೋನನ ಜ್ಞಾನದ ಬೋಧನೆಯನ್ನು ಕೇಳಲು ಬಹಳ ದೂರದಿಂದ ಬಂದಳು. ನಾನಾದರೋ ಸೊಲೊಮೋನನಿಗಿಂತಲೂ ಹೆಚ್ಚಿನವನಾಗಿದ್ದೇನೆ ಎಂದು ನಿಮಗೆ ಹೇಳುತ್ತೇನೆ.


ಕಪ್ಪಗಿರುವವನು ತನ್ನ ಚರ್ಮದ ಬಣ್ಣವನ್ನು ಬದಲಿಸಲಾರನು. ಚಿರತೆಯು ತನ್ನ ಮೈಮೇಲಿನ ಚುಕ್ಕೆಗಳನ್ನು ಬದಲಾಯಿಸಲಾರದು. ಅದೇ ರೀತಿ, ಜೆರುಸಲೇಮ್ ನಗರವೇ, ನೀನು ಸಹ ಮಾರ್ಪಾಟು ಹೊಂದಿ ಒಳ್ಳೆಯದನ್ನು ಮಾಡಲಾರೆ. ನೀನು ಯಾವಾಗಲೂ ಕೆಟ್ಟದ್ದನ್ನೇ ಮಾಡುವೆ.


ಅವರಲ್ಲಿ ಕೆಲವರಿಗೆ ನಾನು ಗುರುತು ಹಾಕುವೆನು. ನಾನು ಅವರನ್ನು ರಕ್ಷಿಸುವೆನು. ರಕ್ಷಿಸಲ್ಪಟ್ಟ ಕೆಲವರನ್ನು ನಾನು ತಾರ್ಷೀಷ್, ಲಿಬ್ಯ, ಲೂದ್, ತೂಬಾಲ್, ಗ್ರೀಸ್ ಮತ್ತು ದೂರದೇಶಗಳಿಗೆ ಕಳುಹಿಸುವೆನು. ಅಲ್ಲಿಯ ಜನರು ನನ್ನ ಬೋಧನೆಯನ್ನು ಎಂದೂ ಕೇಳಿರಲಿಲ್ಲ. ಅವರು ನನ್ನ ಮಹಿಮೆಯನ್ನು ಎಂದೂ ಕಂಡಿರಲಿಲ್ಲ. ಆದ್ದರಿಂದ ರಕ್ಷಿಸಲ್ಪಟ್ಟ ಜನರು ನನ್ನ ಮಹಿಮೆಯನ್ನು ಅವರಿಗೆ ತಿಳಿಸುವರು.


ಮಿದ್ಯಾನಿನ ಮತ್ತು ಏಫದ ಒಂಟೆಗಳ ಹಿಂಡು ರಾಜ್ಯವನ್ನು ದಾಟುವವು. ಶೆಬ ರಾಜ್ಯದ ಒಂಟೆಗಳ ಸಾಲು ಚಿನ್ನ ಮತ್ತು ಧೂಪವನ್ನು ಹೊತ್ತುಕೊಂಡು ನಿನ್ನ ಬಳಿಗೆ ಬರುವವು. ಜನರು ಯೆಹೋವನಿಗೆ ಸ್ತೋತ್ರಗಾನ ಹಾಡುವರು.


ಜನಾಂಗಗಳು ನಿನ್ನ ಬೆಳಕಿನ ಕಡೆಗೆ ಬರುವರು. ಅರಸರುಗಳು ನಿನ್ನ ಪ್ರಕಾಶಮಾನವಾದ ಬೆಳಕಿನತ್ತ ಬರುವರು.


ಯೆಹೋವನು ಹೇಳುವುದೇನೆಂದರೆ, “ಈಜಿಪ್ಟ್ ಮತ್ತು ಇಥಿಯೋಪ್ಯ ಐಶ್ವರ್ಯವುಳ್ಳ ರಾಜ್ಯಗಳಾಗಿವೆ. ಇಸ್ರೇಲೇ, ನೀನು ಆ ಐಶ್ವರ್ಯವನ್ನು ಪಡೆದುಕೊಳ್ಳುವೆ. ಸೆಬಾದ ಉನ್ನತ ಜನರು ನಿನ್ನವರಾಗುವರು. ಅವರು ತಮ್ಮ ಕುತ್ತಿಗೆಗಳಲ್ಲಿ ಸಂಕೋಲೆಗಳಿಂದ ಬಂಧಿತರಾಗಿ ನಿಮ್ಮ ಹಿಂದೆ ನಡೆಯುವರು. ಅವರು ನಿಮ್ಮ ಮುಂದೆ ಅಡ್ಡಬಿದ್ದು, ‘ಇಸ್ರೇಲೇ, ದೇವರು ನಿಜವಾಗಿ ನಿಮ್ಮೊಂದಿಗಿದ್ದಾನೆ. ಬೇರೆ ದೇವರುಗಳೇ ಇಲ್ಲ’” ಎಂದು ನಿಮ್ಮಲ್ಲಿ ಪ್ರಾರ್ಥಿಸುವರು.


ನಾನು ಉತ್ತರಕ್ಕೆ ‘ನನ್ನ ಜನರನ್ನು ಬಿಟ್ಟುಕೊಡು’ ಎಂದು ಹೇಳುವೆನು. ದಕ್ಷಿಣಕ್ಕೆ, ‘ನನ್ನ ಜನರನ್ನು ಸೆರೆಮನೆಯಲ್ಲಿರಿಸಬೇಡ’ ಎಂದು ಹೇಳುವೆನು. ಬಹುದೂರ ದೇಶಗಳಿಂದ ನನ್ನ ಮಕ್ಕಳನ್ನು ನನ್ನ ಬಳಿಗೆ ಕರೆದುಕೊಂಡು ಬಾ.


ರಾಜರುಗಳು ತಮ್ಮ ಕಾಣಿಕೆಗಳನ್ನು ತೆಗೆದುಕೊಂಡು ಜೆರುಸಲೇಮಿನ ನಿನ್ನ ಆಲಯಕ್ಕೆ ಬರುವರು.


ಶೆಬದ ರಾಣಿ ಸೊಲೊಮೋನನ ಬಗ್ಗೆ ಕೇಳಿದಳು. ಅವಳು ಒಗಟುಗಳಿಂದ ಅವನನ್ನು ಪರೀಕ್ಷಿಸಲು


ದೇವರು ತಾನು ಕೊಡುತ್ತೇನೆಂದು ವಾಗ್ದಾನ ಮಾಡಿದ್ದ ಸ್ಥಳಕ್ಕೆ ಪ್ರಯಾಣ ಮಾಡಬೇಕೆಂದು ಅಬ್ರಹಾಮನನ್ನು ಕರೆದನು. ಆ ಸ್ಥಳವು ಎಲ್ಲಿದೆಯೆಂಬುದು ಅವನಿಗೆ ತಿಳಿದಿರಲಿಲ್ಲ. ಅಬ್ರಹಾಮನಲ್ಲಿ ನಂಬಿಕೆಯಿದ್ದುದರಿಂದ, ದೇವರಿಗೆ ವಿಧೇಯನಾಗಿ ಪ್ರಯಾಣ ಮಾಡಲಾರಂಭಿಸಿದನು.


“ಯೆರೆಮೀಯನೇ, ಹೋಗಿ ಇಥಿಯೋಪಿಯದವನಾದ ಎಬೆದ್ಮೆಲೆಕನಿಗೆ ಈ ಸಂದೇಶವನ್ನು ಕೊಡು: ‘ಇಸ್ರೇಲರ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ಹೀಗೆನ್ನುತ್ತಾನೆ: ಜೆರುಸಲೇಮ್ ನಗರದ ಬಗ್ಗೆ ನಾನು ಕೊಟ್ಟ ಸಂದೇಶಗಳು ಬೇಗ ಕಾರ್ಯರೂಪಕ್ಕೆ ಬರುತ್ತವೆ. ನನ್ನ ಸಂದೇಶ ಕಾರ್ಯರೂಪಕ್ಕೆ ಬರುವುದು ಕೇಡುಗಳ ಮೂಲಕವೇ ಹೊರತು ಒಳ್ಳೆಯದರ ಮೂಲಕವಲ್ಲ. ಎಲ್ಲವೂ ನನ್ನ ಸಂದೇಶದಂತೆ ನಡೆಯುವುದನ್ನು ನೀನು ಕಣ್ಣಾರೆ ನೋಡುವೆ.


ಆ ಸಮಯದಲ್ಲಿ ಸರ್ವಶಕ್ತನಾದ ಯೆಹೋವನಿಗೆ ವಿಶೇಷವಾದ ಕಾಣಿಕೆಯು ಸಮರ್ಪಿಸಲ್ಪಡುವದು. ಆ ಕಾಣಿಕೆಯು ಉನ್ನತವಾಗಿರುವ ಬಲಶಾಲಿಗಳಾದ ಜನರಿಂದ ಬರುವದು. ಎಲ್ಲಾ ದೇಶಗಳ ಜನರು ಈ ಉನ್ನತವಾದ ಈ ಬಲಿಷ್ಠರಿಗೆ ಹೆದರುವರು. ಅವರು ಬಲಾಢ್ಯ ಜನಾಂಗವಾಗಿದ್ದಾರೆ. ಅವರ ಜನಾಂಗವು ಇತರ ಜನಾಂಗಗಳನ್ನು ಸೋಲಿಸುತ್ತದೆ. ಅವರ ದೇಶವು ನದಿಯ ಶಾಖೆಗಳಿಂದ ತುಂಬಿದೆ. ಈ ಕಾಣಿಕೆಯನ್ನು ಚೀಯೋನ್ ಪರ್ವತದಲ್ಲಿರುವ ಯೆಹೋವನ ಸ್ಥಳಕ್ಕೆ ತರುವರು.


ಈಗ ಅವನು ತನ್ನ ಮನೆಗೆ ಮರಳಿ ಹೋಗುತ್ತಿದ್ದನು. ಅವನು ತನ್ನ ರಥದಲ್ಲಿ ಕುಳಿತುಕೊಂಡು ಯೆಶಾಯನ ಗ್ರಂಥವನ್ನು ಓದುತ್ತಿದ್ದನು.


ಇದು ಸಮುದ್ರದ ಆಚೆ ಇರುವ ಮಾತಲ್ಲ, ‘ನಮಗೋಸ್ಕರ ಸಮುದ್ರವನ್ನು ದಾಟಿ ಅದನ್ನು ತೆಗೆದುಕೊಂಡು ಬಂದು ನಮಗೆ ತಿಳಿಸುವವರು ಯಾರಿರುವರು? ನಾವದನ್ನು ಕೇಳಿ ಅದರಂತೆ ನಡೆಯಬಹುದಾಗಿತ್ತು’ ಎಂದು ಹೇಳುವ ಅವಶ್ಯಕತೆ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು