ಈ ಕಾರಣಕ್ಕಾಗಿ ನಾನು ಆತನನ್ನು ಜನರ ಮಧ್ಯದಲ್ಲಿ ಪ್ರಸಿದ್ಧಿಪಡಿಸುವೆನು. ಆತನು ಬಲಿಷ್ಠರೊಂದಿಗೆ ಸಮಪಾಲನ್ನು ಹೊಂದುವನು. ಆತನು ಜನರಿಗಾಗಿ ತನ್ನ ಪ್ರಾಣವನ್ನು ಕೊಟ್ಟು ಸತ್ತದ್ದಕ್ಕಾಗಿ ನಾನು ಆತನಿಗೆ ಹೀಗೆ ಮಾಡುವೆನು. ಜನರು ಆತನನ್ನು ಅಪರಾಧಿ ಎಂದು ಹೇಳಿದರೂ ವಾಸ್ತವವಾಗಿ ಆತನು ಬಹುಜನರ ಪಾಪಗಳನ್ನು ಹೊತ್ತುಕೊಂಡು ಹೋದನು. ಈಗ ಆತನು ಪಾಪಮಾಡಿದ ಜನರಿಗಾಗಿ ಪ್ರಾರ್ಥನಾಪೂರ್ವಕವಾಗಿ ವಿಜ್ಞಾಪಿಸುವನು.
ಜನರು ಬಲವಂತದಿಂದ ಆತನನ್ನು ಕೊಂಡೊಯ್ದರು; ಆತನಿಗೆ ಅನ್ಯಾಯವಾದ ತೀರ್ಪನ್ನು ನೀಡಿದರು; ಆತನನ್ನು ಜೀವಲೋಕದಿಂದಲೇ ತೆಗೆದುಹಾಕಿ ಆತನಿಗೆ ಸಂತಾನವೇ ಇಲ್ಲದಂತೆ ಮಾಡಿದರು. ನನ್ನ ಜನರ ಪಾಪಗಳಿಗಾಗಿ ಆತನು ದಂಡಿಸಲ್ಪಟ್ಟನು.
ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ: “ಖಡ್ಗವೇ, ಕುರುಬನನ್ನು ಹೊಡೆ. ನನ್ನ ಸ್ನೇಹಿತನಿಗೆ ಹೊಡೆ. ಕುರುಬನನ್ನು ಹೊಡೆ. ಆಗ ಕುರಿಗಳು ಚದರಿಹೋಗುವವು. ಮತ್ತು ನಾನು ಆ ಚಿಕ್ಕವುಗಳನ್ನು ಶಿಕ್ಷಿಸುವೆನು.
ಅರವತ್ತೆರಡು ವಾರಗಳ ತರುವಾಯ ಅಭಿಷಿಕ್ತನ ಕೊಲೆಯಾಗುವುದು. ಅವನು ಇಲ್ಲವಾಗುವನು. ಭವಿಷ್ಯತ್ತಿನ ನಾಯಕನ ಜನರು ನಗರವನ್ನೂ ಪವಿತ್ರಾಲಯವನ್ನೂ ಹಾಳುಮಾಡುವರು. ಆ ಅಂತ್ಯವು ಒಂದು ಪ್ರವಾಹದಂತೆ ಬರುವುದು. ಕೊನೆಯವರೆಗೂ ಯುದ್ಧ ನಡೆಯುವುದು. ಆ ಸ್ಥಳವನ್ನು ಸಂಪೂರ್ಣವಾಗಿ ನಾಶಮಾಡಬೇಕೆಂದು ದೇವರು ಆಜ್ಞಾಪಿಸಿದ್ದಾನೆ.
ಆತನನ್ನು ಬಾಧೆಯಿಂದ ಜಜ್ಜಬೇಕೆಂಬುದು ಯೆಹೋವನ ನಿರ್ಧಾರವಾಗಿತ್ತು. ಆದ್ದರಿಂದ ಈ ಸೇವಕನು ತನ್ನನ್ನು ಮರಣಕ್ಕೆ ಒಪ್ಪಿಸಿಕೊಟ್ಟನು. ಆದರೆ ಆತನು ತನ್ನ ಹೊಸ ಜೀವಿತದಲ್ಲಿ ಚಿರಂಜೀವಿಯಾಗುವನು. ಆತನು ತನ್ನ ಜನರನ್ನು ದೃಷ್ಟಿಸಿ ನೋಡುವನು. ಯೆಹೋವನ ಸಂಕಲ್ಪದ ಮೇರೆಗೆ ಎಲ್ಲವನ್ನೂ ಆತನು ಮಾಡುವನು.
ಆತನು ಬಾಧೆಯನ್ನೂ ಹಿಂಸೆಯನ್ನೂ ಅನುಭವಿಸಿದನು. ಆದರೂ ಆತನು ಪ್ರತಿಭಟಿಸಲಿಲ್ಲ. ಕೊಯ್ಯಲು ಕೊಂಡೊಯ್ಯುವ ಕುರಿಮರಿಯಂತೆಯೂ ಉಣ್ಣೆಯನ್ನು ಕತ್ತರಿಸುವಾಗ ಮೌನವಾಗಿರುವ ಕುರಿಮರಿಯಂತೆಯೂ ಆತನು ಮೌನವಾಗಿದ್ದನು.
ಅವನು ಫಿಲಿಪ್ಪನಿಗೆ, “ದಯವಿಟ್ಟು ನನಗೆ ಹೇಳು, ಯಾವ ಪ್ರವಾದಿಯ ಬಗ್ಗೆ ಇಲ್ಲಿ ಹೇಳುತ್ತಿದ್ದಾನೆ? ಅವನು ತನ್ನ ಬಗ್ಗೆ ಹೇಳುತ್ತಿದ್ದಾನೋ ಅಥವಾ ಬೇರೊಬ್ಬನ ಬಗ್ಗೆ ಹೇಳುತ್ತಿದ್ದಾನೋ?” ಎಂದು ಕೇಳಿದನು.