ಅಪೊಸ್ತಲರ ಕೃತ್ಯಗಳು 8:35 - ಪರಿಶುದ್ದ ಬೈಬಲ್35 ಫಿಲಿಪ್ಪನು ಪವಿತ್ರ ಗ್ರಂಥದ ಈ ಭಾಗದಿಂದಲೇ ಆರಂಭಿಸಿ ಯೇಸುವಿನ ವಿಷಯವಾದ ಸುವಾರ್ತೆಯನ್ನು ಅವನಿಗೆ ತಿಳಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201935 ಫಿಲಿಪ್ಪನು ಬೋಧಿಸುವುದಕ್ಕೆ ತೊಡಗಿ ಅದೇ ವಚನವನ್ನು ಆಧಾರಮಾಡಿಕೊಂಡು ಅವನಿಗೆ ಯೇಸುವಿನ ವಿಷಯವಾದ ಸುವಾರ್ತೆಯನ್ನು ತಿಳಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)35 ಆಗ ಫಿಲಿಪ್ಪನು ಮರುತ್ತರವಾಗಿ, ಆ ಪ್ರವಾದನೆಯನ್ನೇ ಆಧಾರವಾಗಿ ತೆಗೆದುಕೊಂಡು, ಯೇಸುವಿನ ಶುಭಸಂದೇಶವನ್ನು ಅವನಿಗೆ ಬೋಧಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)35 ಫಿಲಿಪ್ಪನು ಉಪದೇಶಿಸುವದಕ್ಕೆ ತೊಡಗಿ ಅದೇ ವಚನವನ್ನು ಆಧಾರ ಮಾಡಿಕೊಂಡು ಅವನಿಗೆ ಯೇಸುವಿನ ವಿಷಯವಾದ ಸುವಾರ್ತೆಯನ್ನು ತಿಳಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ35 ಪವಿತ್ರ ವೇದದ ಆ ಭಾಗದಿಂದಲೇ ಪ್ರಾರಂಭಿಸಿ ಫಿಲಿಪ್ಪನು ಅವನಿಗೆ ಯೇಸುವಿನ ಕುರಿತಾದ ಶುಭವಾರ್ತೆಯನ್ನು ತಿಳಿಸಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್35 ಫಿಲಿಪಾನ್ ಪವಿತ್ರ್ ಪುಸ್ತಕಾಚ್ಯಾ ಹ್ಯಾ ಭಾಗಾಕ್ನಾಚ್ ಶುರು ಕರುನ್ ಜೆಜುಚ್ಯಾ ವಿಶಯಾಚಿ ಖಬರ್ ತೆಕಾ ಕಳ್ವುಲ್ಯಾನ್. ಅಧ್ಯಾಯವನ್ನು ನೋಡಿ |
ಪೌಲನು ಮತ್ತು ಯೆಹೂದ್ಯರು ಸಭೆಸೇರಲು ಒಂದು ದಿನವನ್ನು ಗೊತ್ತುಮಾಡಿದರು. ಅಂದು ಇನ್ನೂ ಅನೇಕ ಮಂದಿ ಯೆಹೂದ್ಯರು ಪೌಲನ ಮನೆಯಲ್ಲಿ ಸಭೆಸೇರಿದರು. ಪೌಲನು ಬೆಳಗ್ಗೆಯಿಂದ ಸಂಜೆಯವರೆಗೂ ಅವರೊಂದಿಗೆ ಮಾತಾಡಿದನು; ದೇವರ ರಾಜ್ಯದ ಬಗ್ಗೆ ಅವರಿಗೆ ವಿವರಿಸಿದನು. ಯೇಸುವಿನ ವಿಷಯವಾದ ಸಂಗತಿಗಳಲ್ಲಿ ನಂಬಿಕೆ ಇಡುವಂತೆ ಅವರನ್ನು ಒಪ್ಪಿಸಲು ಪ್ರಯತ್ನಿಸಿದನು. ಇದಕ್ಕಾಗಿ ಅವನು ಮೋಶೆಯ ಧರ್ಮಶಾಸ್ತ್ರವನ್ನೂ ಪ್ರವಾದಿಗಳ ಗ್ರಂಥಗಳನ್ನೂ ಬಳಸಿಕೊಂಡನು.
ಕೆಲವು ಯೆಹೂದ್ಯರು ಸಹ ಊರೂರುಗಳಿಗೆ ಸಂಚರಿಸುತ್ತಾ ದೆವ್ವದಿಂದ ಪೀಡಿತರಾಗಿದ್ದ ಜನರೊಳಗಿಂದ ದೆವ್ವಗಳನ್ನು ಯೇಸುವಿನ ಹೆಸರಿನ ಮೂಲಕ ಹೊರಡಿಸುತ್ತಿದ್ದರು. ಸ್ಕೇವ ಎಂಬವನ ಏಳು ಮಂದಿ ಗಂಡುಮಕ್ಕಳೂ ಹೀಗೇ ಮಾಡುತ್ತಿದ್ದರು. (ಸ್ಕೇವನು ಪ್ರಧಾನಯಾಜಕನಾಗಿದ್ದನು.) ಅವರೆಲ್ಲರೂ, “ಪೌಲನು ಯಾವ ಯೇಸುವಿನ ಬಗ್ಗೆ ಹೇಳುತ್ತಿದ್ದಾನೋ ಆ ಯೇಸುವಿನ ಹೆಸರಿನಿಂದಲೇ ನೀನು ಹೊರಗೆ ಬರಬೇಕೆಂದು ನಾವು ಆಜ್ಞಾಪಿಸುತ್ತೇವೆ” ಎಂದು ಹೇಳುತ್ತಿದ್ದರು.
ಎಪಿಕೊರಿಯಾ ಮತ್ತು ಸ್ತೋಯಿಕ ತತ್ವಶಾಸ್ತ್ರಜ್ಞರಲ್ಲಿ ಕೆಲವರು ಅವನೊಂದಿಗೆ ವಾದಿಸಿದರು. ಅವರಲ್ಲಿ ಕೆಲವರು, “ಈ ಮನುಷ್ಯನಿಗೆ ತಾನು ಯಾವುದರ ಬಗ್ಗೆ ಮಾತಾಡುತ್ತಿದ್ದೇನೆ ಎಂಬುದೇ ನಿಜವಾಗಿಯೂ ತಿಳಿದಿಲ್ಲ. ಅವನು ಏನು ಹೇಳಲು ಪ್ರಯತ್ನಿಸುತ್ತಿದ್ದಾನೆ?” ಎಂದರು. ಯೇಸುವು ಸತ್ತವರೊಳಗಿಂದ ಜೀವಂತನಾಗಿ ಎದ್ದುಬಂದಿದ್ದಾನೆ ಎಂಬ ಸುವಾರ್ತೆಯನ್ನು ಪೌಲನು ಅವರಿಗೆ ಹೇಳುತ್ತಿದ್ದನು. ಆದ್ದರಿಂದ ಅವರು, “ಕೆಲವು ಬೇರೆ ದೇವರುಗಳ ಬಗ್ಗೆ ಅವನು ನಮಗೆ ಹೇಳುತ್ತಿರುವಂತೆ ತೋರುತ್ತಿದೆ” ಎಂದರು.