ಅಪೊಸ್ತಲರ ಕೃತ್ಯಗಳು 8:39 - ಪರಿಶುದ್ದ ಬೈಬಲ್39 ಅವರು ನೀರಿನಿಂದ ಮೇಲಕ್ಕೆ ಬಂದಾಗ ಪ್ರಭುವಿನ ಆತ್ಮನಿಂದ ಫಿಲಿಪ್ಪನು ಎತ್ತಲ್ಪಟ್ಟನು. ಅವನು ಫಿಲಿಪ್ಪನನ್ನು ಮತ್ತೆಂದೂ ನೋಡಲಿಲ್ಲ. ಅವನು ಬಹಳ ಸಂತೋಷದಿಂದ ತನ್ನ ಪ್ರಯಾಣವನ್ನು ಮುಂದುವರಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201939 ಅವರು ನೀರನ್ನು ಬಿಟ್ಟು ಮೇಲಕ್ಕೆ ಬಂದಾಗ ಕರ್ತನ ಆತ್ಮ ಫಿಲಿಪ್ಪನನ್ನು ಎತ್ತಿಕೊಂಡು ಹೋಗಲಾಗಿ ಆ ಕಂಚುಕಿಯು ಫಿಲಿಪ್ಪನನ್ನು ಪುನಃ ಕಾಣಲಿಲ್ಲ. ಅವನು ಸಂತೋಷವುಳ್ಳವನಾಗಿ ತನ್ನ ಪ್ರಯಾಣವನ್ನು ಮುಂದುವರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)39 ಅವರಿಬ್ಬರು ನೀರಿನಿಂದ ಮೇಲಕ್ಕೆ ಬಂದೊಡನೆ ಪ್ರಭುವಿನ ಆತ್ಮವು ಫಿಲಿಪ್ಪನನ್ನು ಅಲ್ಲಿಂದ ಕೊಂಡೊಯ್ಯಿತು. ಆ ಅಧಿಕಾರಿ ಫಿಲಿಪ್ಪನನ್ನು ಪುನಃ ಕಾಣಲಿಲ್ಲ; ಅವನು ಸಂತೋಷಭರಿತನಾಗಿ ಪ್ರಯಾಣವನ್ನು ಮುಂದುವರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)39 ಅವರು ನೀರನ್ನು ಬಿಟ್ಟು ಮೇಲಕ್ಕೆ ಬಂದಾಗ ಕರ್ತನ ಆತ್ಮ ಫಿಲಿಪ್ಪನನ್ನು ಎತ್ತಿಕೊಂಡುಹೋಗಲಾಗಿ ಕಂಚುಕಿಯು ಸಂತೋಷವುಳ್ಳವನಾಗಿ ತನ್ನ ದಾರಿಯನ್ನು ಹಿಡಿದು ಅವನನ್ನು ಕಾಣಲೇ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ39 ಅವರು ನೀರಿನಿಂದ ಹೊರಗೆ ಬಂದಾಗ, ತಕ್ಷಣವೇ ಕರ್ತದೇವರ ಆತ್ಮರು ಫಿಲಿಪ್ಪನನ್ನು ತೆಗೆದುಕೊಂಡು ಹೋದರು. ಆಮೇಲೆ ಕಂಚುಕಿಯು ಫಿಲಿಪ್ಪನನ್ನು ಪುನಃ ಕಾಣಲಿಲ್ಲ. ಕಂಚುಕಿಯು ಸಂತೋಷಪಡುತ್ತಾ ತನ್ನ ಮಾರ್ಗದಲ್ಲಿ ಹೊರಟುಹೋದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್39 ತೆನಿ ಪಾನಿಯಾತ್ನಾ ವೈರ್ ಯೆಲ್ಲ್ಯಾತನ್ನಾ, ಧನಿಯಾಚ್ಯಾ ಆತ್ಮ್ಯಾನ್ ಫಿಲಿಪಾಕ್ ಉಕ್ಲುನ್ ನ್ಹೆಲ್ಯಾನ್, ಅನಿ ಕನ್ನಾಬಿ ಫಿಲಿಪ್ ತ್ಯಾ ಮಾನ್ಸಾಕ್ ದಿಸುಕ್ ನಾ, ತೊ ಲೈ ಕುಶಿ ಹೊವ್ನ್ ಅಪ್ನಿ ಜಾವ್‍ಲಾಗಲ್ಯಾ ವಾಟೆನ್ ಫಿಡೆ ಗೆಲೊ. ಅಧ್ಯಾಯವನ್ನು ನೋಡಿ |
ಅವರು ಅವನಿಗೆ, “ನೋಡು, ನಮ್ಮಲ್ಲಿ ಐವತ್ತು ಮಂದಿ ಬಲಿಷ್ಠ ಜನರಿದ್ದಾರೆ. ನಿನ್ನ ಒಡೆಯನನ್ನು ಹುಡುಕಲು ದಯವಿಟ್ಟು ಅವರಿಗೆ ಅವಕಾಶಕೊಡು. ಯೆಹೋವನ ಆತ್ಮವು ಎಲೀಯನನ್ನು ಮೇಲಕ್ಕೆ ಎತ್ತಿಕೊಂಡು ಹೋಗಿ ಯಾವುದಾದರೂ ಬೆಟ್ಟದ ಮೇಲಾಗಲಿ ಅಥವಾ ಕಣಿವೆಯಲ್ಲಾಗಲಿ ಬೀಳಿಸಿರಬೇಕು” ಎಂದು ಹೇಳಿದರು. ಆದರೆ ಎಲೀಷನು, “ಇಲ್ಲ, ಎಲೀಯನನ್ನು ಹುಡುಕಲು ಜನರನ್ನು ಕಳುಹಿಸಬೇಡಿ!” ಎಂದು ಉತ್ತರಿಸಿದನು.
ಯೆಹೋವನು ನನ್ನನ್ನು ಸಂತೋಷಭರಿತನನ್ನಾಗಿ ಮಾಡುತ್ತಾನೆ. ನನ್ನ ಸಂಪೂರ್ಣ ವ್ಯಕ್ತಿತ್ವವು ನನ್ನ ದೇವರಲ್ಲಿ ಸಂತೋಷಿಸುತ್ತದೆ. ಯೆಹೋವನು ರಕ್ಷಣೆಯೆಂಬ ವಸ್ತ್ರವನ್ನು ನನಗೆ ತೊಡಿಸಿದ್ದಾನೆ. ಮದುವೆಯಲ್ಲಿ ಮದುಮಗನು ಧರಿಸಿಕೊಳ್ಳುವ ಬಟ್ಟೆಯಂತೆ ಅದು ನಯವಾಗಿದೆ. ಯೆಹೋವನು ನನಗೆ ನೀತಿಯೆಂಬ ನಿಲುವಂಗಿಯನ್ನು ತೊಡಿಸಿರುತ್ತಾನೆ. ಅದು ಮದುಮಗಳು ಮದುವೆಯಲ್ಲಿ ಧರಿಸಿಕೊಳ್ಳುವ ಬಟ್ಟೆಯಂತಿದೆ.