11 ಪ್ರಭುವು ಅನನೀಯನಿಗೆ, “ಎದ್ದು, ‘ನೇರಬೀದಿ’ ಎಂಬ ಬೀದಿಗೆ ಹೋಗು. ಅಲ್ಲಿರುವ ಯೂದನ ಮನೆಯನ್ನು ಕಂಡುಕೊಂಡು ತಾರ್ಸಸ್ ಪಟ್ಟಣದ ಸೌಲನ ಬಗ್ಗೆ ವಿಚಾರಿಸು. ಈಗ ಅವನು ಅಲ್ಲಿ ಪ್ರಾರ್ಥಿಸುತ್ತಿದ್ದಾನೆ.
ಆಗ ಪೌಲನು ಹೀಗೆಂದನು: “ನಾನು ಯೆಹೂದ್ಯನು. ನಾನು ಹುಟ್ಟಿದ್ದು ಸಿಲಿಸಿಯ ದೇಶದ ತಾರ್ಸದಲ್ಲಿ. ಆದರೆ ನಾನು ಬೆಳೆದದ್ದು ಈ ಪಟ್ಟಣದಲ್ಲಿ. ನಾನು ಗಮಲಿಯೇಲನ ವಿದ್ಯಾರ್ಥಿಯಾಗಿದ್ದೆನು. ನಮ್ಮ ಪಿತೃಗಳ ಧರ್ಮಶಾಸ್ತ್ರದ ಬಗ್ಗೆ ಪ್ರತಿಯೊಂದನ್ನೂ ಅವನು ನನಗೆ ಬಹು ಸೂಕ್ಷ್ಮವಾಗಿ ಬೋಧಿಸಿದ್ದಾನೆ. ಇಂದು ಇಲ್ಲಿರುವ ನಿಮ್ಮೆಲ್ಲರಂತೆಯೇ ನಾನೂ ದೇವರ ಸೇವೆಯ ಬಗ್ಗೆ ಬಹಳ ಅಭಿಮಾನ ಉಳ್ಳವನಾಗಿದ್ದೆ.
ತನ್ನ ಮನೆಯಲ್ಲಿ ದೇವದೂತನೊಬ್ಬನು ನಿಂತಿರುವುದನ್ನು ತಾನು ಕಂಡದ್ದರ ಬಗ್ಗೆ ಕೊರ್ನೇಲಿಯನು ನನಗೆ ಹೇಳಿದನು. ಆ ದೇವದೂತನು ಕೊರ್ನೇಲಿಯನಿಗೆ, ‘ಕೆಲವು ಜನರನ್ನು ಜೊಪ್ಪಕ್ಕೆ ಕಳುಹಿಸು. ಸೀಮೋನ್ ಪೇತ್ರನನ್ನು ಆಹ್ವಾನಿಸಿ ನಿಮ್ಮ ಬಳಿಗೆ ಬರಮಾಡಿಕೊ.
ನಾನು ದಾವೀದನ ಸಂತತಿಯವರನ್ನೂ ಜೆರುಸಲೇಮಿನಲ್ಲಿ ವಾಸಿಸುವವರನ್ನೂ ದಯೆಕರುಣೆಗಳ ಆತ್ಮದಿಂದ ತುಂಬಿಸುವೆನು. ಅವರು ತಾವು ಈಟಿಯಿಂದ ತಿವಿದ ನನ್ನನ್ನು ದೃಷ್ಟಿಸಿ ನೋಡುವರು; ತುಂಬಾ ದುಃಖಿಸುವರು. ತಮಗಿದ್ದ ಒಬ್ಬನೇ ಮಗನನ್ನು ಕಳಕೊಂಡವರಂತೆ ರೋಧಿಸುವರು.
ಯೇಸು ಆಕೆಗೆ, “ದೇವರು ಏನು ಕೊಡುತ್ತಾನೆಂಬುದು ನಿನಗೆ ಗೊತ್ತಿಲ್ಲ ಮತ್ತು ಕುಡಿಯಲು ನೀರನ್ನು ಕೇಳಿದ ನಾನು ಯಾರೆಂಬುದೂ ನಿನಗೆ ಗೊತ್ತಿಲ್ಲ. ನಿನಗೆ ಈ ಸಂಗತಿಗಳು ಗೊತ್ತಿದ್ದರೆ, ನೀನು ನನ್ನನ್ನು ಕೇಳಿಕೊಳ್ಳುತ್ತಿದ್ದೆ, ಮತ್ತು ನಾನು ನಿನಗೆ ಜೀವಜಲವನ್ನು ಕೊಡುತ್ತಿದ್ದೆ” ಎಂದನು.