Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 9:17 - ಪರಿಶುದ್ದ ಬೈಬಲ್‌

17 ಆದ್ದರಿಂದ ಅನನೀಯನು ಅಲ್ಲಿಂದ ಹೊರಟು ಯೂದನ ಮನೆಗೆ ಹೋದನು. ಅವನು ಸೌಲನ ಮೇಲೆ ತನ್ನ ಕೈಗಳನ್ನಿಟ್ಟು, “ಸೌಲನೇ, ನನ್ನ ಸಹೋದರನೇ, ಪ್ರಭುವಾದ ಯೇಸು ನನ್ನನ್ನು ಕಳುಹಿಸಿದ್ದಾನೆ. ನೀನು ಇಲ್ಲಿಗೆ ಬರುವಾಗ ದಾರಿಯಲ್ಲಿ ಕಂಡದ್ದು ಆತನನ್ನೇ. ನೀನು ಮತ್ತೆ ದೃಷ್ಟಿಪಡೆಯಬೇಕೆಂತಲೂ ಪವಿತ್ರಾತ್ಮಭರಿತನಾಗಬೇಕೆಂತಲೂ ಯೇಸು ನನ್ನನ್ನು ಕಳುಹಿಸಿದನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಆಗ ಅನನೀಯನು ಹೊರಟು ಆ ಮನೆಯೊಳಗೆ ಹೋಗಿ ಅವನ ಮೇಲೆ ತನ್ನ ಕೈಗಳನ್ನಿಟ್ಟು, “ಸಹೋದರನಾದ ಸೌಲನೇ, ನೀನು ಬಂದ ದಾರಿಯಲ್ಲಿ ನಿನಗೆ ಕಾಣಿಸಿಕೊಂಡ ಕರ್ತನಾದ ಯೇಸು ನಿನಗೆ ಕಣ್ಣು ಕಾಣುವಂತೆಯೂ, ನೀನು ಪವಿತ್ರಾತ್ಮಭರಿತನಾಗುವಂತೆಯೂ ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಅಂತೆಯೇ ಅನನೀಯನು ಹೊರಟು ಆ ಮನೆಗೆ ಹೋದನು. ಸೌಲನ ಮೇಲೆ ಹಸ್ತನಿಕ್ಷೇಪಮಾಡಿ, “ಸಹೋದರ ಸೌಲನೇ, ಪ್ರಭು ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾರೆ. ನೀನು ಬರುವಾಗ ದಾರಿಯಲ್ಲಿ ಕಾಣಿಸಿಕೊಂಡ ಯೇಸುಸ್ವಾಮಿಯೇ, ನೀನು ದೃಷ್ಟಿಯನ್ನು ಮರಳಿ ಪಡೆಯುವಂತೆಯೂ ಪವಿತ್ರಾತ್ಮಭರಿತನಾಗುವಂತೆಯೂ ನನ್ನನ್ನು ಕಳುಹಿಸಿದ್ದಾರೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಆಗ ಅನನೀಯನು ಹೊರಟು ಆ ಮನೆಯೊಳಗೆ ಹೋಗಿ ಅವನ ಮೇಲೆ ತನ್ನ ಕೈಗಳನ್ನಿಟ್ಟು - ಸಹೋದರನಾದ ಸೌಲನೇ, ನೀನು ಬಂದ ದಾರಿಯಲ್ಲಿ ನಿನಗೆ ಕಾಣಿಸಿಕೊಂಡ ಕರ್ತನಾದ ಯೇಸು ನಿನಗೆ ಕಣ್ಣುಕಾಣುವಂತೆಯೂ ನೀನು ಪವಿತ್ರಾತ್ಮಭರಿತನಾಗುವಂತೆಯೂ ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾನೆ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಆಮೇಲೆ ಅನನೀಯನು ಆ ಮನೆಗೆ ಹೋಗಿ ಒಳಗೆ ಪ್ರವೇಶಿಸಿದನು. ತನ್ನ ಕೈಗಳನ್ನು ಸೌಲನ ಮೇಲಿಟ್ಟು, “ಸಹೋದರ ಸೌಲನೇ, ನೀನು ಇಲ್ಲಿಗೆ ಬರುತ್ತಿದ್ದಾಗ ದಾರಿಯಲ್ಲಿ ನಿನಗೆ ದರ್ಶನಕೊಟ್ಟ ಕರ್ತ ಯೇಸು, ನಿನಗೆ ಪುನಃ ದೃಷ್ಟಿ ಬರುವಂತೆಯೂ ನೀನು ಪವಿತ್ರಾತ್ಮಭರಿತನಾಗುವಂತೆಯೂ ನನ್ನನ್ನು ಕಳುಹಿಸಿದ್ದಾರೆ,” ಎಂದು ಹೇಳಲು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ತಸೆ ಹೊವ್ನ್ ಅನನಿಯ್ ಜುದಾಸಾಚ್ಯಾ ಘರಾಕ್ ಗೆಲೊ, ಅನಿ ಸಾವ್ಲುಚೆರ್ ಅಪ್ನಿ ಹಾತಾ ಥವ್ನ್ “ಸಾವ್ಲ್, ಮಾಜ್ಯಾ ಭಾವಾ, ಧನಿಯಾ ಜೆಜುನ್ ಮಾಕಾ ಧಾಡುನ್ ದಿಲಾ, ತಿಯಾ ಹಿತ್ತೆ ಯೆತಾನಾ ವಾಟೆರ್ ಬಗಟಲ್ಲೆ ತೆಕಾಚ್, ತುಕಾ ಪರ್ತುನ್ ಡೊಳೆ ಯೆಯ್ ಸಾರ್ಕೆ ಹೊವ್ಚೆ, ಅನಿ ಪವಿತ್ರ್ ಆತ್ಮ್ಯಾನ್ ಭರುಚೊ ಮನುನ್ ಜೆಜುನ್ ಮಾಕಾ ಧಾಡುನ್ ದಿಲಾ” ಮನುನ್ ಸಾಂಗ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 9:17
36 ತಿಳಿವುಗಳ ಹೋಲಿಕೆ  

ಈ ಇಬ್ಬರು ಅಪೊಸ್ತಲರು ಅವರ ಮೇಲೆ ತಮ್ಮ ಕೈಗಳನ್ನಿಟ್ಟಾಗ ಅವರು ಪವಿತ್ರಾತ್ಮನನ್ನು ಹೊಂದಿಕೊಂಡರು.


ಬಳಿಕ ಅವರು ಈ ಏಳು ಮಂದಿಯನ್ನು ಅಪೊಸ್ತಲರ ಮುಂದೆ ನಿಲ್ಲಿಸಿದರು. ಅಪೊಸ್ತಲರು ಪ್ರಾರ್ಥಿಸಿ, ಅವರ ತಲೆಗಳ ಮೇಲೆ ತಮ್ಮ ಕೈಗಳನ್ನಿಟ್ಟರು.


ಅವರೆಲ್ಲರೂ ಪವಿತ್ರಾತ್ಮಭರಿತರಾದರು ಮತ್ತು ವಿವಿಧ ಭಾಷೆಗಳಲ್ಲಿ ಮಾತಾಡತೊಡಗಿದರು. ಪವಿತ್ರಾತ್ಮನೇ ಅವರಿಗೆ ಆ ಶಕ್ತಿಯನ್ನು ಕೊಟ್ಟನು.


ನೀನು ನಿನ್ನ ಹಸ್ತಗಳನ್ನು ಯಾರ ಮೇಲಾದರೂ ಇಟ್ಟು ಅವನನ್ನು ಸಭಾಹಿರಿಯನನ್ನಾಗಿ ನೇಮಿಸುವುದಕ್ಕಿಂತ ಮೊದಲೇ ಗಮನವಿಟ್ಟು ಆಲೋಚನೆಮಾಡು. ಇತರ ಜನರ ಪಾಪಗಳಲ್ಲಿ ಪಾಲುಗಾರನಾಗದೆ ಶುದ್ಧನಾಗಿರು.


ಆದರೆ ಯೇಸುವಿನ ಶಿಷ್ಯರು ಸಂತೋಷವಾಗಿದ್ದರು ಮತ್ತು ಪವಿತ್ರಾತ್ಮಭರಿತರಾಗಿದ್ದರು.


ಆ ಸಮಯದಲ್ಲಿ ನಮಗೆ ದೀಕ್ಷಾಸ್ನಾನ, ಹಸ್ತಾರ್ಪಣ, ಸತ್ತವರ ಪುನರುತ್ಥಾನ ಮತ್ತು ನಿತ್ಯವಾದ ನ್ಯಾಯತೀರ್ಪು ಇವುಗಳನ್ನು ಕುರಿತು ಬೋಧಿಸಲಾಯಿತು. ಆದರೆ ಈಗ ನಾವು ಪೂರ್ಣ ತಿಳುವಳಿಕೆಗೆ ಹೋಗುವುದು ಅಗತ್ಯವಾಗಿದೆ.


ಇನ್ನು ಮೇಲೆ ಅವನು ನಿನಗೆ ಕೇವಲ ಗುಲಾಮನಾಗಿರದೆ ಗುಲಾಮನಿಗಿಂತಲೂ ಹೆಚ್ಚಿನ ಪ್ರಿಯ ಸಹೋದರನಾಗಿದ್ದಾನೆ. ಅವನನ್ನು ಬಹಳವಾಗಿ ಪ್ರೀತಿಸುತ್ತೇನೆ. ಆದರೆ ನೀನು ಅವನನ್ನು ಮತ್ತಷ್ಟು ಹೆಚ್ಚಾಗಿ ಪ್ರೀತಿಸುವೆ. ನೀನು ಅವನನ್ನು ಮನುಷ್ಯನೆಂದು ಮತ್ತು ಪ್ರಭುವಿನಲ್ಲಿ ಒಬ್ಬ ಸಹೋದರನೆಂದು ಪ್ರೀತಿಸುವೆ.


ದೇವರು ನಿನಗೆ ದಯಪಾಲಿಸಿರುವ ವರವನ್ನು ನೀನು ನೆನಪು ಮಾಡಿಕೊಳ್ಳಬೇಕೆಂದು ನಾನು ಅಪೇಕ್ಷಿಸುವುದು ಈ ಕಾರಣದಿಂದಲೇ. ನಾನು ನನ್ನ ಕೈಗಳನ್ನು ನಿನ್ನ ಮೇಲಿಟ್ಟಾಗ ಆತನು ನಿನಗೆ ಆ ವರವನ್ನು ದಯಪಾಲಿಸಿದನು. ಬೆಂಕಿಯ ಕಿಡಿಯು ಪ್ರಜ್ವಲವಾಗಿ ದಟ್ಟವಾದ ಬೆಂಕಿಯಾಗುವಂತೆ ನಿನ್ನ ವರವನ್ನು ಉಪಯೋಗಿಸುತ್ತಾ ಅದನ್ನು ಅಧಿಕಗೊಳಿಸಬೇಕೆಂಬುದು ನನ್ನ ಅಪೇಕ್ಷೆ.


ನಿನ್ನಲ್ಲಿರುವ ವರವನ್ನು ಜ್ಞಾಪಿಸಿಕೊಳ್ಳುತ್ತಿರು. ಸಭೆಯ ಹಿರಿಯರು ಪ್ರವಾದನೆಗಳೊಂದಿಗೆ ತಮ್ಮ ಕೈಗಳನ್ನು ನಿನ್ನ ಮೇಲಿಟ್ಟಾಗ ಆ ವರವು ನಿನಗೆ ಕೊಡಲ್ಪಟ್ಟಿತು.


ಮೊದಲನೆಯ ಮನುಷ್ಯನು ಭೂಮಿಯ ಧೂಳಿನಿಂದ ಬಂದನು. ಆದರೆ ಎರಡನೆಯ ಮನುಷ್ಯನು (ಕ್ರಿಸ್ತನು) ಪರಲೋಕದಿಂದ ಬಂದನು.


ಕಟ್ಟಕಡೆಗೆ, ಕ್ರಿಸ್ತನು, ದಿನ ತುಂಬುವ ಮೊದಲೇ ಹುಟ್ಟಿದಂತಿದ್ದ ನನಗೆ ಕಾಣಿಸಿಕೊಂಡನು.


ಕ್ರಿಸ್ತನು ನಿಮ್ಮನ್ನು ಸ್ವೀಕರಿಸಿಕೊಂಡನು. ಆದ್ದರಿಂದ ನೀವು ಒಬ್ಬರನ್ನೊಬ್ಬರು ಸ್ವೀಕರಿಸಿಕೊಳ್ಳಬೇಕು. ಇದು ದೇವರಿಗೆ ಮಹಿಮೆಯನ್ನು ಉಂಟು ಮಾಡುತ್ತದೆ.


“ನಾನು, ‘ಪ್ರಭುವೇ, ನೀನು ಯಾರು?’ ಎಂದೆನು. “ಪ್ರಭುವು, ‘ನೀನು ಹಿಂಸೆಪಡಿಸುತ್ತಿರುವ ಯೇಸುವೇ ನಾನು.


ಈ ಸಂಗತಿಗಳನ್ನು ಕೇಳಿದ ಹಿರಿಯರು ದೇವರನ್ನು ಕೊಂಡಾಡಿದರು. ಬಳಿಕ ಅವರು ಪೌಲನಿಗೆ, “ಸಹೋದರನೇ, ವಿಶ್ವಾಸಿಗಳಿಗಾಗಿ ಪರಿವರ್ತನೆಗೊಂಡಿರುವ ಸಾವಿರಾರು ಮಂದಿ ಯೆಹೂದ್ಯರನ್ನು ನೀನು ಇಲ್ಲಿ ಕಾಣಬಹುದು. ಆದರೆ ಮೋಶೆಯ ಧರ್ಮಶಾಸ್ತ್ರಕ್ಕೆ ವಿಧೇಯರಾಗುವುದು ಬಹಳ ಮುಖ್ಯವೆಂಬುದು ಇವರ ಆಲೋಚನೆ.


ಬಳಿಕ ಪೌಲನು ಅವರ ಮೇಲೆ ತನ್ನ ಕೈಗಳನ್ನಿಟ್ಟಾಗ ಅವರು ಪವಿತ್ರಾತ್ಮಭರಿತರಾದರು. ಅವರು ವಿವಿಧ ಭಾಷೆಗಳಲ್ಲಿ ಮಾತಾಡಿದರು ಮತ್ತು ಪ್ರವಾದನೆ ಮಾಡಿದರು.


ಆದ್ದರಿಂದ ಸಭೆಯವರು ಉಪವಾಸವಿದ್ದು ಪ್ರಾರ್ಥನೆ ಮಾಡಿದರು. ಅವರು ಬಾರ್ನಬ ಮತ್ತು ಸೌಲರ ಮೇಲೆ ಹಸ್ತಾರ್ಪಣೆ ಮಾಡಿ ಅವರನ್ನು ಕಳುಹಿಸಿಕೊಟ್ಟರು.


ದೇವರು ಯೆಹೂದ್ಯ ಜನರೊಂದಿಗೆ ಮಾತಾಡಿದ್ದಾನೆ. ಯೇಸು ಕ್ರಿಸ್ತನ ಮೂಲಕವಾಗಿ ಶಾಂತಿ ಬಂದಿದೆ ಎಂಬ ಸುವಾರ್ತೆಯನ್ನು ದೇವರು ಅವರಿಗೆ ಕಳುಹಿಸಿದನು. ಯೇಸುವು ಎಲ್ಲಾ ಜನರಿಗೆ ಪ್ರಭುವಾಗಿದ್ದಾನೆ!


ಹೀಗೆ ವಿಶ್ವಾಸಿಗಳು ಪ್ರಾರ್ಥಿಸುತ್ತಿದ್ದಾಗ, ಅವರು ಸಭೆ ಸೇರಿದ್ದ ಸ್ಥಳವು ನಡುಗಿತು. ಅವರೆಲ್ಲರೂ ಪವಿತ್ರಾತ್ಮಭರಿತರಾದರು ಮತ್ತು ದೇವರ ವಾಕ್ಯವನ್ನು ಭಯವಿಲ್ಲದೆ ಪ್ರಕಟಿಸಿದರು.


ನಾವು ಸಂತೋಷಪಡಬೇಕು. ಉಲ್ಲಾಸಪಡಬೇಕು, ಏಕೆಂದರೆ ನಿನ್ನ ತಮ್ಮನು ಸತ್ತುಹೋಗಿದ್ದನು, ಈಗಲಾದರೋ ಮತ್ತೆ ಜೀವಂತವಾಗಿ ಬಂದಿದ್ದಾನೆ. ಅವನು ಕಳೆದುಹೋಗಿದ್ದನು, ಈಗಲಾದರೋ ಮತ್ತೆ ಸಿಕ್ಕಿದ್ದಾನೆ’ ಅಂದನು.”


ಆದರೆ ನಿನ್ನ ಕಿರಿಯ ಮಗನು ನಿನ್ನ ಎಲ್ಲ ಹಣವನ್ನು ಸೂಳೆಯರಿಗೆ ಖರ್ಚುಮಾಡಿ ಮನೆಗೆ ಹಿಂತಿರುಗಿ ಬಂದಾಗ ನೀನು ಅವನಿಗಾಗಿ ಕೊಬ್ಬಿದ ಕರುವನ್ನು ಕೊಯ್ಸಿದ್ದಿ!’ ಅಂದನು.


ಈ ದಿನ ನಿಮಗೋಸ್ಕರ ದಾವೀದನ ಊರಿನಲ್ಲಿ ರಕ್ಷಕನು ಜನಿಸಿದ್ದಾನೆ. ಆತನೇ ಪ್ರಭುವಾದ ಕ್ರಿಸ್ತನು.


“ಮಗುವೇ, ನೀನು ಮಹೋನ್ನತನ ಪ್ರವಾದಿ ಎನಿಸಿಕೊಳ್ಳುವೆ. ಪ್ರಭುವಿನ ಮುಂದೆ ಹೋಗಿ ಆತನ ಬರುವಿಕೆಗಾಗಿ ಜನರನ್ನು ಸಿದ್ಧಮಾಡುವೆ.


ಯೇಸು ಆ ಊರಿನಲ್ಲಿ ಅನೇಕ ಅದ್ಭುತಕಾರ್ಯಗಳನ್ನು ಮಾಡಲು ಸಾಧ್ಯವಾಗಲಿಲ್ಲ. ಆತನು ತನ್ನ ಕೈಗಳನ್ನು ಕೆಲವು ಮಂದಿ ಕಾಯಿಲೆಯವರ ಮೇಲಿಟ್ಟು ಅವರ ಕಾಯಿಲೆಗಳನ್ನು ವಾಸಿಮಾಡಿದನು. ಇವುಗಳಲ್ಲದೆ ಬೇರೆ ಯಾವ ಅದ್ಭುತಕಾರ್ಯಗಳನ್ನೂ ಆತನು ಮಾಡಲಿಲ್ಲ.


ಬಳಿಕ ಜನರು ಯೇಸುವಿನ ಬಳಿಗೆ ಬಂದು ತಮ್ಮ ಚಿಕ್ಕ ಮಕ್ಕಳನ್ನು ತಂದು ಅವರಿಗಾಗಿ ಪ್ರಾರ್ಥಿಸಬೇಕೆಂದು ಆತನನ್ನು ಬೇಡಿಕೊಂಡರು. ಇದನ್ನು ಕಂಡ ಶಿಷ್ಯರು ಚಿಕ್ಕ ಮಕ್ಕಳನ್ನು ಆತನ ಬಳಿಗೆ ತರಕೂಡದೆಂದು ಗದರಿಸಿದರು.


ಯೋಸೇಫನು ಮತ್ತೆ ತನ್ನ ಸಹೋದರರಿಗೆ, “ನನ್ನ ಬಳಿಗೆ ಬನ್ನಿ. ನನ್ನ ಹತ್ತಿರ ಬನ್ನಿ ಎಂದು ಬೇಡಿಕೊಳ್ಳುತ್ತೇನೆ” ಎಂದು ಹೇಳಿದನು. ಆದ್ದರಿಂದ ಸಹೋದರರು ಯೋಸೇಫನ ಹತ್ತಿರ ಹೋದರು. ಯೋಸೇಫನು ಅವರಿಗೆ, “ನಾನು ನಿಮ್ಮ ತಮ್ಮನಾದ ಯೋಸೇಫ. ನೀವು ಈಜಿಪ್ಟಿನವರಿಗೆ ಯಾವನನ್ನು ಗುಲಾಮನನ್ನಾಗಿ ಮಾರಿದಿರೋ ಅವನೇ ನಾನು.


“ನನ್ನ ಚಿಕ್ಕಮಗಳು ಸಾಯುತ್ತಿದ್ದಾಳೆ. ದಯವಿಟ್ಟು ನೀನು ಬಂದು, ನಿನ್ನ ಕೈಗಳಿಂದ ಅವಳನ್ನು ಸ್ಪರ್ಶಿಸು. ಆಗ ಅವಳು ಗುಣವಾಗಿ ಬದುಕಿಕೊಳ್ಳುತ್ತಾಳೆ” ಎಂದು ಬಹಳವಾಗಿ ಬೇಡಿಕೊಂಡನು.


ಎಲಿಜಬೇತಳು ಮರಿಯಳ ವಂದನೆಯನ್ನು ಕೇಳಿದಾಗ, ಆಕೆಯ ಗರ್ಭದಲ್ಲಿದ್ದ ಮಗು ನಲಿದಾಡಿತು. ಆಗ ಎಲಿಜಬೇತಳು ಪವಿತ್ರಾತ್ಮಭರಿತಳಾಗಿ


ಬಳಿಕ ಯೋಹಾನನ ತಂದೆಯಾದ ಜಕರೀಯನು ಪವಿತ್ರಾತ್ಮಭರಿತನಾಗಿ ಹೀಗೆಂದು ಪ್ರವಾದಿಸಿದನು:


ಇದ್ದಕ್ಕಿದ್ದಂತೆ, ಮೀನಿನ ಪರೆಯಂತಿದ್ದ ಏನೋ ಒಂದು ಸೌಲನ ಕಣ್ಣುಗಳಿಂದ ಕಳಚಿಬಿದ್ದಿತು. ಸೌಲನಿಗೆ ಮತ್ತೆ ಕಣ್ಣುಕಾಣತೊಡಗಿತು! ಸೌಲನು ಮೇಲೆದ್ದು, ದೀಕ್ಷಾಸ್ನಾನ ಮಾಡಿಸಿಕೊಂಡನು.


ನಾನು ಸ್ವತಂತ್ರನಾಗಿದ್ದೇನೆ; ಅಪೊಸ್ತಲನಾಗಿದ್ದೇನೆ; ನಮ್ಮ ಪ್ರಭುವಾದ ಯೇಸುವನ್ನು ನೋಡಿದ್ದೇನೆ. ನಾನು ಪ್ರಭುವಿನಲ್ಲಿ ಮಾಡಿದ ಸೇವೆಯ ಫಲವು ನೀವೇ ಆಗಿದ್ದೀರಿ.


ನಾವು ರಕ್ಷಣೆ ಹೊಂದಿಕೊಂಡದ್ದು ನಮ್ಮ ಪ್ರಭುವಿನ ತಾಳ್ಮೆಯಿಂದಲೇ ಎಂಬುದನ್ನು ನೆನಪು ಮಾಡಿಕೊಳ್ಳಿರಿ. ನಮ್ಮ ಪ್ರಿಯ ಸಹೋದರನಾದ ಪೌಲನು ದೇವರಿಂದ ತನಗೆ ದೊರೆತ ಜ್ಞಾನದಿಂದ ನಿಮಗೆ ಪತ್ರ ಬರೆದಾಗ ಇದನ್ನೇ ತಿಳಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು