ನಾನು ಜನರಿಗೆ, ‘ನಿಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳಿರಿ’ ಎಂತಲೂ ಅವರಿಗಾಗಿರುವ ಮಾನಸಾಂತರವನ್ನು ಯೋಗ್ಯವಾದ ಕಾರ್ಯಗಳ ಮೂಲಕ ತೋರ್ಪಡಿಸಬೇಕೆಂತಲೂ ಹೇಳಿದೆನು. ಮೊದಲನೆಯದಾಗಿ ದಮಸ್ಕಕ್ಕೂ ಬಳಿಕ ಜೆರುಸಲೇಮಿಗೂ ಜುದೇಯದ ಪ್ರತಿಯೊಂದು ಭಾಗಕ್ಕೂ ಹೋಗಿ ಅಲ್ಲಿರುವ ಜನರಿಗೆ ಈ ಸಂಗತಿಗಳನ್ನು ತಿಳಿಸಿದೆನು. ಅಲ್ಲದೆ ಯೆಹೂದ್ಯರಲ್ಲದ ಜನರ ಬಳಿಗೂ ಹೋದೆನು.
ಅವರು ಈಜಿಪ್ಟಿನವನಿಗೆ ಅಂಜೂರದ ಹಣ್ಣಿನ ಉಂಡೆಯನ್ನೂ ಎರಡು ಗೊಂಚಲು ಒಣ ದ್ರಾಕ್ಷಿಯನ್ನೂ ಕೊಟ್ಟರು. ಅವನು ತಿಂದನಂತರ ಚೇತರಿಸಿಕೊಂಡನು. ಅವನು ಮೂರು ದಿವಸ ಹಗಲಿರುಳು ಆಹಾರವನ್ನೇನೂ ತಿಂದಿರಲಿಲ್ಲ; ನೀರನ್ನೂ ಕುಡಿದಿರಲಿಲ್ಲ.
ಅಪೊಸ್ತಲರನ್ನು ನೋಡುವುದಕ್ಕಾಗಿ ಜೆರುಸಲೇಮಿಗೂ ಹೋಗಲಿಲ್ಲ. ಅವರು ನನಗಿಂತ ಮೊದಲೇ ಅಪೊಸ್ತಲರಾಗಿದ್ದರು. ಆದರೆ, ನಾನು ತಡಮಾಡದೆ ಅರೇಬಿಯಾಕ್ಕೆ ಹೋದೆನು. ಆ ಬಳಿಕ ದಮಸ್ಕ ಪಟ್ಟಣಕ್ಕೆ ಹಿಂತಿರುಗಿದೆನು.
ಬಾರ್ನಬನು ಅಲ್ಲಿ ಸೌಲನನ್ನು ಕಂಡುಕೊಂಡು ಅವನನ್ನು ಅಂತಿಯೋಕ್ಯಕ್ಕೆ ಕರೆದುಕೊಂಡು ಬಂದನು. ಸೌಲನು ಮತ್ತು ಬಾರ್ನಬನು ಅಂತಿಯೋಕ್ಯದಲ್ಲಿ ಒಂದು ವರ್ಷ ಪೂರ್ತಿ ಸಭೆಯ ಅನ್ಯೋನ್ಯತೆಯಲ್ಲಿ ಇದ್ದುಕೊಂಡು ಅನೇಕ ಜನರಿಗೆ ಬೋಧಿಸಿದರು. ಯೇಸುವಿನ ಹಿಂಬಾಲಕರಿಗೆ “ಕ್ರೈಸ್ತರು” ಎಂಬ ಹೆಸರು ಬಂದದ್ದು ಅಂತಿಯೋಕ್ಯದಲ್ಲೇ.
ಬಳಿಕ ಸೌಲನು ಜೆರುಸಲೇಮಿಗೆ ಹೋದನು. ಅವನು ವಿಶ್ವಾಸಿಗಳ ಸಮುದಾಯವನ್ನು ಸೇರಿಕೊಳ್ಳಲು ಪ್ರಯತ್ನಿಸಿದನು. ಆದರೆ ಅವರೆಲ್ಲರೂ ಅವನಿಗೆ ಭಯಪಟ್ಟರು. ಸೌಲನು ನಿಜವಾಗಿ ಯೇಸುವಿನ ಶಿಷ್ಯನೆಂದು ಅವರು ನಂಬಲಿಲ್ಲ.
ಪೇತ್ರನು ಲುದ್ದದಲ್ಲಿದ್ದಾನೆಂಬ ಸುದ್ದಿಯು ಜೊಪ್ಪದಲ್ಲಿದ್ದ ವಿಶ್ವಾಸಿಗಳಿಗೆ ತಿಳಿಯಿತು. (ಲುದ್ದವು ಜೊಪ್ಪದ ಸಮೀಪದಲ್ಲಿದೆ.) ಆದ್ದರಿಂದ ಅವರು ಇಬ್ಬರನ್ನು ಪೇತ್ರನ ಬಳಿಗೆ ಕಳುಹಿಸಿದರು. ಅವರು, “ತ್ವರೆ ಮಾಡು, ದಯವಿಟ್ಟು ಬೇಗನೆ ಬಾ!” ಎಂದು ಅವನನ್ನು ಬೇಡಿಕೊಂಡರು.