ಅಪೊಸ್ತಲರ ಕೃತ್ಯಗಳು 9:2 - ಪರಿಶುದ್ದ ಬೈಬಲ್2 ದಮಸ್ಕದಲ್ಲಿ ಕ್ರಿಸ್ತನ ಮಾರ್ಗವನ್ನು ಅನುಸರಿಸುವವರನ್ನು ಕಂಡುಹಿಡಿದು, ಸ್ತ್ರೀಯರು, ಪುರುಷರು ಎನ್ನದೆ ಅವರನ್ನು ಬಂಧಿಸಿ ಜೆರುಸಲೇಮಿಗೆ ಎಳೆದುಕೊಂಡು ಬರಲು ತನಗೆ ಅಧಿಕಾರ ಕೊಟ್ಟಿರುವುದಾಗಿ ದಮಸ್ಕ ಪಟ್ಟಣದ ಸಭಾಮಂದಿರಗಳಿಗೆ ಪತ್ರಬರೆಯಬೇಕೆಂದು ಕೇಳಿಕೊಂಡನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಈ ಮಾರ್ಗವನ್ನು ಹಿಡಿದವರು ಯಾರಾದರೂ ಸಿಕ್ಕಿದರೆ ಅವರು ಗಂಡಸರಾದರೂ ಸರಿಯೇ, ಹೆಂಗಸರಾದರೂ ಸರಿಯೇ ನಾನು ಅವರಿಗೆ ಬೇಡಿಹಾಕಿಸಿ ಯೆರೂಸಲೇಮಿಗೆ ತರುವಂತೆ, ದಮಸ್ಕದಲ್ಲಿರುವ ಸಭಾಮಂದಿರದವರಿಗೆ ನೀನು, ಪತ್ರವನ್ನು ಕೊಡಬೇಕು ಎಂದು ಅವನನ್ನು ಬೇಡಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಈ ಹೊಸ ಮಾರ್ಗವನ್ನು ಅವಲಂಬಿಸುವವರು ಹೆಂಗಸರೇ ಆಗಿರಲಿ, ಗಂಡಸರೇ ಆಗಿರಲಿ, ದಮಸ್ಕಸಿನಲ್ಲಿದ್ದರೆ ಅವರನ್ನು ಬಂಧಿಸಿ ಜೆರುಸಲೇಮಿಗೆ ಎಳೆದು ತರಬೇಕೆಂದಿದ್ದನು. ಇದಕ್ಕೆ ಬೇಕಾದ ಪತ್ರಗಳನ್ನು ಕೇಳುವುದಕ್ಕಾಗಿ ಪ್ರಧಾನಯಾಜಕನ ಬಳಿಗೆ ಹೋದನು. ದಮಸ್ಕಸಿನಲ್ಲಿರುವ ಪ್ರಾರ್ಥನಾಮಂದಿರದ ಅಧಿಕಾರಿಗಳಿಗೆ ತೋರಿಸಲು ಆ ಪತ್ರಗಳನ್ನು ಪಡೆದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಆ ಮಾರ್ಗವನ್ನು ಹಿಡಿದವರು ಯಾರಾದರೂ ಸಿಕ್ಕಿದರೆ ಅವರು ಗಂಡಸರಾದರೂ ಸರಿಯೇ ಹೆಂಗಸರಾದರೂ ಸರಿಯೇ ನಾನು ಅವರಿಗೆ ಬೇಡಿಹಾಕಿಸಿ ಯೆರೂಸಲೇವಿುಗೆ ತರುವಂತೆ ದಮಸ್ಕದಲ್ಲಿರುವ ಆಯಾ ಸಭಾಮಂದಿರದವರಿಗೆ ನೀನು ಕಾಗದವನ್ನು ಕೊಡಬೇಕು ಎಂದು ಅವನನ್ನು ಬೇಡಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಈ ಮಾರ್ಗಕ್ಕೆ ಸಂಬಂಧಪಟ್ಟ ಪುರುಷರಾಗಲಿ ಸ್ತ್ರೀಯರಾಗಲಿ ದಮಸ್ಕದಲ್ಲಿದ್ದರೆ ಅವರನ್ನು ತಾನು ಬಂಧಿಸಿ ಯೆರೂಸಲೇಮಿಗೆ ತರಲಿಕ್ಕಾಗುವಂತೆ ದಮಸ್ಕದಲ್ಲಿಯ ಸಭಾಮಂದಿರಗಳಿಗೆ ಕೊಡಲು ಮಹಾಯಾಜಕನಿಂದ ಪತ್ರ ಪಡೆದುಕೊಂಡನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್2 ದಮಸ್ಕಾ ಮನ್ತಲ್ಯಾ ಶಾರಾತ್ ಕ್ರಿಸ್ತಾಚ್ಯಾ ವಾಟೆನ್ ಚಲ್ತಲ್ಯಾ ಲೊಕಾಕ್ನಿ ವಳ್ಕುನ್ ಬಾಯ್ಕಾಮಾನ್ಸಾ, ಘವ್ಮಾನ್ಸಾ ಮನುನ್ ಬಗಿನಸ್ತಾನಾ ಧರುನ್ ತೆಂಕಾ ಬಾಂದುನ್ ಜೆರುಜಲೆಮಾಕ್ ತೆಂಕಾ ಭಂದಿ ಕರುನ್ ಹಾನುಕ್ ಅಪ್ನಾಕ್ ಅಧಿಕಾರ್ ದಿಲ್ಲೊ ಹಾಯ್, ಮನುನ್ ಧಮಸ್ಕ್ ಶಾರಾತ್ಲ್ಯಾ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾಕ್ನಿ ಚಿಟ್ ಲಿವ್ಚೆ ಮನುನ್ ಮಾಗುನ್ ಘೆಟ್ಲ್ಯಾನ್. ಅಧ್ಯಾಯವನ್ನು ನೋಡಿ |
ಆದರೆ ಕೆಲವು ಯೆಹೂದ್ಯರು ಬಂದು ಅವನೊಂದಿಗೆ ವಾದಿಸಿದರು. ಈ ಯೆಹೂದ್ಯರು ಸಭಾಮಂದಿರಕ್ಕೆ ಸೇರಿದವರು. ಅದಕ್ಕೆ “ಬಿಡುಗಡೆ ಹೊಂದಿದವರ ಸಭಾಮಂದಿರ” ಎಂದು ಕರೆಯುತ್ತಿದ್ದರು. (ಸಿರೇನ್ ಮತ್ತು ಅಲೆಕ್ಸಾಂಡ್ರಿಯದಿಂದ ಬಂದ ಯೆಹೂದ್ಯರಿಗೋಸ್ಕರವಾಗಿಯೂ ಈ ಸಭಾಮಂದಿರವಿತ್ತು.) ಸಿಲಿಸಿಯ ಮತ್ತು ಏಷ್ಯಾದಿಂದ ಬಂದ ಯೆಹೂದ್ಯರೂ ಅವರೊಂದಿಗಿದ್ದರು. ಅವರೆಲ್ಲರೂ ಬಂದು ಅವನೊಂದಿಗೆ ವಾದಮಾಡಿದರು.