26 ಬಳಿಕ ಸೌಲನು ಜೆರುಸಲೇಮಿಗೆ ಹೋದನು. ಅವನು ವಿಶ್ವಾಸಿಗಳ ಸಮುದಾಯವನ್ನು ಸೇರಿಕೊಳ್ಳಲು ಪ್ರಯತ್ನಿಸಿದನು. ಆದರೆ ಅವರೆಲ್ಲರೂ ಅವನಿಗೆ ಭಯಪಟ್ಟರು. ಸೌಲನು ನಿಜವಾಗಿ ಯೇಸುವಿನ ಶಿಷ್ಯನೆಂದು ಅವರು ನಂಬಲಿಲ್ಲ.
ನಾನು ಜನರಿಗೆ, ‘ನಿಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳಿರಿ’ ಎಂತಲೂ ಅವರಿಗಾಗಿರುವ ಮಾನಸಾಂತರವನ್ನು ಯೋಗ್ಯವಾದ ಕಾರ್ಯಗಳ ಮೂಲಕ ತೋರ್ಪಡಿಸಬೇಕೆಂತಲೂ ಹೇಳಿದೆನು. ಮೊದಲನೆಯದಾಗಿ ದಮಸ್ಕಕ್ಕೂ ಬಳಿಕ ಜೆರುಸಲೇಮಿಗೂ ಜುದೇಯದ ಪ್ರತಿಯೊಂದು ಭಾಗಕ್ಕೂ ಹೋಗಿ ಅಲ್ಲಿರುವ ಜನರಿಗೆ ಈ ಸಂಗತಿಗಳನ್ನು ತಿಳಿಸಿದೆನು. ಅಲ್ಲದೆ ಯೆಹೂದ್ಯರಲ್ಲದ ಜನರ ಬಳಿಗೂ ಹೋದೆನು.
ಪೇತ್ರ ಮತ್ತು ಯೋಹಾನರು ಯೆಹೂದ್ಯನಾಯಕರ ಸಭೆಯಿಂದ ಹೊರಟು ತಮ್ಮ ಸಮುದಾಯಕ್ಕೆ ಹೋದರು. ಮಹಾಯಾಜಕರು ಮತ್ತು ಯೆಹೂದ್ಯರ ಹಿರಿಯ ನಾಯಕರು ತಮಗೆ ಹೇಳಿದ ಪ್ರತಿಯೊಂದನ್ನು ಅವರು ತಮ್ಮ ಸಮುದಾಯದವರಿಗೆ ತಿಳಿಸಿದರು.
ಒಂದು ರಾತ್ರಿ, ಸೌಲನ ಕೆಲವು ಶಿಷ್ಯರು ಅವನನ್ನು ಪಟ್ಟಣದಿಂದ ಹೊರಗೆ ಕಳುಹಿಸುವುದಕ್ಕಾಗಿ ಅವನನ್ನು ಒಂದು ಬುಟ್ಟಿಯಲ್ಲಿ ಕುಳ್ಳಿರಿಸಿ, ನಗರದ ಕೋಟೆಯ ಸಂದಿನ ಮೂಲಕ ಅವನನ್ನು ಕೆಳಗಿಳಿಸಿದರು.