“ಆದ್ದರಿಂದ ಬೇರೊಬ್ಬನು ನಮ್ಮೊಂದಿಗೆ ಸೇರಿ, ಯೇಸುವಿನ ಪುನರುತ್ಥಾನಕ್ಕೆ ಸಾಕ್ಷಿಯಾಗಿರಬೇಕು. ಪ್ರಭುವಾದ ಯೇಸು ನಮ್ಮಲ್ಲಿ ಹೋಗುತ್ತಾ ಬರುತ್ತಾ ಇದ್ದ ಕಾಲವೆಲ್ಲಾ ಅವನು ನಮ್ಮ ಗುಂಪಿನಲ್ಲಿದ್ದವರಲ್ಲಿ ಒಬ್ಬನಾಗಿರಬೇಕು. ಯೋಹಾನನು ದೀಕ್ಷಾಸ್ನಾನ ಕೊಡಲು ಆರಂಭ ಮಾಡಿದ ದಿನದ ಮೊದಲುಗೊಂಡು ಯೇಸುವು ನಮ್ಮ ಬಳಿಯಿಂದ ಪರಲೋಕಕ್ಕೆ ಎತ್ತಲ್ಪಟ್ಟ ದಿನದವರೆಗೂ ಅವನು ನಮ್ಮೊಂದಿಗಿದ್ದವನಾಗಿರಬೇಕು.”
ನನ್ನ ದೇವರಾದ ಯೆಹೋವನೇ, ನನ್ನ ತಂದೆಯ ಸ್ಥಾನದಲ್ಲಿ ನನ್ನನ್ನು ನೀನು ರಾಜನನ್ನಾಗಿ ಮಾಡಿದೆ. ಆದರೆ ನಾನೊಬ್ಬ ಚಿಕ್ಕ ಮಗುವಿನಂತಿದ್ದೇನೆ. ನಾನು ಮಾಡಬೇಕಾದ ಕಾರ್ಯಗಳನ್ನು ಮಾಡಲು ಇರಬೇಕಾದ ಬುದ್ದಿವಂತಿಕೆಯು ನನ್ನಲ್ಲಿಲ್ಲ.
ಹಿಂದಿನ ದಿನಗಳಲ್ಲಿ, ಸೌಲನು ರಾಜನಾಗಿದ್ದಾಗಲೂ ನಮ್ಮನ್ನು ಯುದ್ಧದಲ್ಲಿ ಮುನ್ನಡೆಸಿದವನು ನೀನೇ. ಯೆಹೋವನು ನಿನ್ನನ್ನು ಕುರಿತು, ‘ನೀನು ನನ್ನ ಜನರಾದ ಇಸ್ರೇಲರ ನಾಯಕನೂ ಪಾಲಕನೂ ಆಗಿರುವೆ’ ಎಂದು ಹೇಳಿದ್ದಾನೆ” ಎಂದರು.
ಪೇತ್ರ ಮತ್ತು ಯೋಹಾನರಿಗೆ ವಿಶೇಷವಾದ ಯಾವ ತರಬೇತಿಯಾಗಲಿ ವಿದ್ಯೆಯಾಗಲಿ ಇಲ್ಲವೆಂಬುದು ಯೆಹೂದ್ಯನಾಯಕರಿಗೆ ಗೊತ್ತಿತ್ತು. ಅಲ್ಲದೆ ಅವರು ಹೆದರದೆ ಮಾತಾಡುವುದನ್ನು ಸಹ ನಾಯಕರು ಗಮನಿಸಿದರು. ಆದ್ದರಿಂದ ಆ ನಾಯಕರಿಗೆ ಬಹಳ ಆಶ್ಚರ್ಯವಾಯಿತು. ಪೇತ್ರ ಮತ್ತು ಯೋಹಾನರು ಯೋಸುವಿನೊಂದಿಗೆ ಇದ್ದರೆಂಬುದನ್ನು ಅವರು ಆ ಬಳಿಕ ಗ್ರಹಿಸಿಕೊಂಡರು.
ಪ್ರಭುವೇ, ಈಗ ಅವರು ಹೇಳುತ್ತಿರುವುದನ್ನು ಕೇಳು. ಅವರು ನಮ್ಮನ್ನು ಹೆದರಿಸಲು ಪ್ರಯತ್ನಿಸುತ್ತಿದ್ದಾರೆ! ಪ್ರಭುವೇ ನಾವು ನಿನ್ನ ಸೇವಕರು. ನಿನ್ನ ವಾಕ್ಯವನ್ನು ಭಯವಿಲ್ಲದೆ ಹೇಳಲು ನೀನೇ ಸಹಾಯ ಮಾಡು.