Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 9:36 - ಪರಿಶುದ್ದ ಬೈಬಲ್‌

36 ಜೊಪ್ಪ ಪಟ್ಟಣದಲ್ಲಿ ತಬಿಥಾ ಎಂಬ ಯೇಸುವಿನ ಶಿಷ್ಯಳಿದ್ದಳು. ಗ್ರೀಕ್ ಭಾಷೆಯಲ್ಲಿ ಆಕೆಯ ಹೆಸರು ದೊರ್ಕಾ ಅಂದರೆ “ಜಿಂಕೆ.” ಆಕೆಯು ಜನರಿಗೆ ಯಾವಾಗಲೂ ಒಳ್ಳೆಯ ಕಾರ್ಯಗಳನ್ನು ಮಾಡುತ್ತಿದ್ದಳು. ಆಕೆಯು ಕೊರತೆಯಲ್ಲಿದ್ದ ಜನರಿಗೆ ಯಾವಾಗಲೂ ಹಣಕೊಡುತ್ತಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ಯೊಪ್ಪ ಪಟ್ಟಣದಲ್ಲಿ ತಬಿಥಾ ಎಂಬ ಒಬ್ಬ ಶಿಷ್ಯಳಿದ್ದಳು. ಆ ಹೆಸರಿಗೆ ಗ್ರೀಕ್ ಭಾಷೆಯಲ್ಲಿ “ದೊರ್ಕ” ಅಂದರೆ ಜಿಂಕೆ ಎಂದರ್ಥ. ಆಕೆಯು ಸತ್ಕ್ರಿಯೆಗಳನ್ನೂ, ದಾನಧರ್ಮಗಳನ್ನೂ ಬಹಳವಾಗಿ ಮಾಡುತ್ತಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

36 ಜೊಪ್ಪ ಎಂಬ ಊರಿನಲ್ಲಿ ತಬಿಥ ಎಂಬ ಒಬ್ಬ ಭಕ್ತೆ ಇದ್ದಳು. (ಗ್ರೀಕ್ ಭಾಷೆಯಲ್ಲಿ ಅವಳ ಹೆಸರು ‘ದೋರ್ಕ’) ಅವಳು ಸತ್ಕಾರ್ಯಗಳಲ್ಲೂ ದಾನಧರ್ಮಗಳಲ್ಲೂ ಸದಾ ನಿರತಳಾಗಿದ್ದವಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

36 ಯೊಪ್ಪದಲ್ಲಿ ತಬಿಥಾ ಎಂಬ ಒಬ್ಬ ಶಿಷ್ಯಳಿದ್ದಳು. ಆ ಹೆಸರಿಗೆ ಗ್ರೀಕ್‍ಭಾಷೆಯಲ್ಲಿ ದೊರ್ಕ ಎಂದರ್ಥ. ಆಕೆಯು ಸತ್ಕ್ರಿಯೆಗಳನ್ನೂ ದಾನಧರ್ಮಗಳನ್ನೂ ಬಹಳವಾಗಿ ಮಾಡುತ್ತಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

36 ಯೊಪ್ಪ ಎಂಬಲ್ಲಿ ತಬಿಥಾ ಎಂಬ ಹೆಸರಿನ ದೇವಭಕ್ತೆ ಇದ್ದಳು. ಈ ಹೆಸರಿನ ಗ್ರೀಕ್ ಭಾಷಾಂತರ “ದೊರ್ಕ” ಎಂದಾಗುತ್ತದೆ. ಆಕೆ ಬಡವರಿಗೆ ಸಹಾಯ ಮಾಡುತ್ತಾ ಯಾವಾಗಲೂ ಒಳ್ಳೆಯದನ್ನೇ ಮಾಡುತ್ತಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

36 ಜೊಪ್ಪಾ ಶಾರಾತ್ ತಬಿಥಾ ಮನ್ತಲಿ ಜೆಜುಚಿ ಶಿಸೆ ಹೊತ್ತಿ, ಗ್ರಿಕ್ ಭಾಶ್ಯಾನ್ ತಿಜೆ ನಾವ್ ದೊರ್ಕಾಸ್ ಮಟ್ಲ್ಯಾರ್, “ಚಿತಾಳ್” ಮನುನ್, ತಿ ಕನ್ನಾಬಿ ಲೊಕಾಂಚ್ಯಾ ಸಾಟ್ನಿ ಬರಿ ಕಾಮಾಚ್ ಕರಿತ್ ಹೊತ್ತಿ, ಅನಿ ತಿ ಗರಿಬ್ ಹೊತ್ತ್ಯಾ ಲೊಕಾಕ್ನಿ ಕನ್ನಾಬಿ ಮಜ್ಜತ್ ಕರಿತ್ ಹೊತ್ತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 9:36
30 ತಿಳಿವುಗಳ ಹೋಲಿಕೆ  

ಈ ಬೋಧನೆಯು ಸತ್ಯವಾದದ್ದು. ನೀನು ಜನರಿಗೆ ಈ ಸಂಗತಿಗಳನ್ನು ಒತ್ತಿಹೇಳಬೇಕೆಂದು ನಾನು ಅಪೇಕ್ಷಿಸುತ್ತೇನೆ. ಆಗ, ದೇವರಲ್ಲಿ ನಂಬಿಕೆ ಇಟ್ಟಿರುವವರು ಜಾಗರೂಕರಾಗಿದ್ದು ತಮ್ಮ ಜೀವನದಲ್ಲಿ ಒಳ್ಳೆಯ ಕಾರ್ಯಗಳನ್ನು ಮಾಡುವರು. ಇವು ಎಲ್ಲರಿಗೂ ಹಿತಕರವಾಗಿವೆ ಮತ್ತು ಪ್ರಯೋಜನಕರವಾಗಿವೆ.


ನೀನು ಒಳ್ಳೆಯ ಕಾರ್ಯಗಳನ್ನು ಮಾಡುತ್ತಾ ಯುವಕರಿಗೆ ಸರ್ವವಿಧದಲ್ಲಿಯೂ ಮಾದರಿಯಾಗಿರಬೇಕು. ನಿನ್ನ ಉಪದೇಶದಲ್ಲಿ ಯಥಾರ್ಥತೆಯನ್ನು ಮತ್ತು ಗಂಭೀರತೆಯನ್ನು ತೋರಿಸಿಕೊಡು.


ನಾವು ಲೆಬನೋನಿನಲ್ಲಿ ನಿನಗೆ ಬೇಕಾದಷ್ಟು ಮರಗಳನ್ನು ಕಡಿದು ಅವುಗಳನ್ನು ಜೋಡಿಸಿ ತೆಪ್ಪಗಳನ್ನಾಗಿ ಮಾಡಿ ಸಮುದ್ರದಲ್ಲಿ ತೇಲಿಬಿಡುವೆವು. ಅವು ಯೊಪ್ಪಕ್ಕೆ ತಲುಪಿದಾಗ ನೀನು ಅವುಗಳನ್ನು ಶೇಖರಿಸಿ ಬೇಕಾದ ಕಡೆಗೆ ರವಾನಿಸು.”


ದೇವರು ಒಪ್ಪಿಕೊಳ್ಳುವ ಭಕ್ತಿಯು ಹೀಗಿದೆ: ಕೊರತೆಯಲ್ಲಿರುವ ಅನಾಥರನ್ನೂ ವಿಧವೆಯರನ್ನೂ ನೋಡಿಕೊಳ್ಳುವುದು ಮತ್ತು ಲೋಕದ ಕೆಟ್ಟತನದಿಂದ ಪ್ರಭಾವಿತರಾಗದಂತೆ ಅದರಿಂದ ದೂರವಿರುವುದು. ದೇವರು ಇಂಥ ಭಕ್ತಿಯನ್ನು ಪರಿಶುದ್ಧವಾದದ್ದೆಂದೂ ಒಳಿತಾದದ್ದೆಂದೂ ಪರಿಗಣಿಸಿ ಸ್ವೀಕರಿಸಿಕೊಳ್ಳುವನು.


ಆತನು ನಮಗೋಸ್ಕರ ತನ್ನನ್ನು ಒಪ್ಪಿಸಿಕೊಟ್ಟನು. ನಮ್ಮನ್ನು ಪಾಪದಿಂದ ಬಿಡುಗಡೆ ಮಾಡಲು ಮತ್ತು ಯಾವಾಗಲೂ ಒಳ್ಳೆಯ ಕಾರ್ಯಗಳನ್ನೇ ಮಾಡ ಬಯಸುವ ತನ್ನ ಪರಿಶುದ್ಧ ಜನರನ್ನಾಗಿ ಮಾಡಲು ಆತನು ಮರಣ ಹೊಂದಿದನು.


ನಾವು ದೇವರ ನಿರ್ಮಾಣ. ನಾವು ಒಳ್ಳೆಯ ಕಾರ್ಯಗಳನ್ನು ಮಾಡಬೇಕೆಂದು ದೇವರು ನಮ್ಮನ್ನು ಕ್ರಿಸ್ತಯೇಸುವಿನಲ್ಲಿ ಹೊಸ ಜನರನ್ನಾಗಿ ಮಾಡಿದನು. ದೇವರು ನಮಗೋಸ್ಕರವಾಗಿ ಆ ಒಳ್ಳೆಯ ಕಾರ್ಯಗಳನ್ನು ಮೊದಲೇ ಯೋಜನೆ ಮಾಡಿದನು. ನಾವು ಆ ಒಳ್ಳೆಯ ಕಾರ್ಯಗಳನ್ನು ಮಾಡುತ್ತಾ ಜೀವಿಸಬೇಕೆಂಬುದು ದೇವರ ಯೋಜನೆಯಾಗಿತ್ತು.


ಆ ಮನುಷ್ಯನು, ‘ಕೊರ್ನೇಲಿಯನೇ! ದೇವರು ನಿನ್ನ ಪ್ರಾರ್ಥನೆಯನ್ನು ಕೇಳಿದ್ದಾನೆ. ನೀನು ಬಡಜನರಿಗೆ ಕೊಡುವಂಥವುಗಳನ್ನು ನೋಡಿದ್ದಾನೆ. ದೇವರು ನಿನ್ನನ್ನು ಮೆಚ್ಚಿಕೊಂಡಿದ್ದಾನೆ.


ಸೆರೆಯಿಂದ ಹಿಂತಿರುಗಿಬಂದ ಜನರು ಬಡಗಿಗಳಿಗೂ ಕಲ್ಲುಕುಟಿಗರಿಗೂ ಹಣ ಕೊಟ್ಟರು. ಲೆಬನೋನಿನಿಂದ ದೇವದಾರು ಮರಗಳನ್ನು ಸಾಗಿಸುವ ತೂರ್ಯರಿಗೆ ಮತ್ತು ಚೀದೋನ್ಯರಿಗೆ ಆಹಾರಪದಾರ್ಥಗಳನ್ನು, ಆಲಿವ್ ಎಣ್ಣೆಯನ್ನು ಮತ್ತು ದ್ರಾಕ್ಷಾರಸವನ್ನು ಸಂಬಳವಾಗಿ ಕೊಟ್ಟರು. ಸೊಲೊಮೋನನು ಮೊದಲನೆಯ ದೇವಾಲಯವನ್ನು ಕಟ್ಟುವಾಗ ಅದಕ್ಕೆ ಬೇಕಾದ ಮರಗಳನ್ನು ಸಮುದ್ರಮಾರ್ಗವಾಗಿ ತಂದಂತೆಯೇ ಇವರೂ ಜೆರುಸಲೇಮಿಗೆ ಸಮೀಪವಿರುವ ಯೊಪ್ಪಕ್ಕೆ ಸಮುದ್ರಮಾರ್ಗವಾಗಿ ತಂದರು. ಪರ್ಶಿಯಾದ ಅರಸನಾದ ಸೈರಸನ ಆಜ್ಞೆಗನುಸಾರವಾಗಿ ಇವೆಲ್ಲವೂ ಮಾಡಲ್ಪಟ್ಟವು.


ಒಳ್ಳೆಯ ಕಾರ್ಯಗಳನ್ನು ಮಾಡುತ್ತಿದ್ದವಳೆಂದೂ ಹೆಸರನ್ನು ಪಡೆದಿರಬೇಕು. ಅಂದರೆ, ಅವಳು ತನ್ನ ಮಕ್ಕಳನ್ನು ಸಾಕಿಸಲಹಿದವಳೂ, ಅತಿಥಿಗಳನ್ನು ಸತ್ಕರಿಸಿದವಳೂ, ದೇವಜನರ ಪಾದಗಳನ್ನು ತೊಳೆದವಳೂ, ತೊಂದರೆಯಲ್ಲಿರುವ ಜನರಿಗೆ ಸಹಾಯ ಮಾಡಿದವಳೂ ಮತ್ತು ತನ್ನಿಂದಾದಷ್ಟು ಒಳ್ಳೆಯ ಕಾರ್ಯಗಳನ್ನು ಮಾಡಿದವಳೂ ಆಗಿರಬೇಕು.


ಮಕೆದೋನಿಯದಲ್ಲಿರುವ ಸಹೋದರ ಸಹೋದರಿಯರನ್ನೆಲ್ಲ ನೀವು ನಿಜವಾಗಿಯೂ ಪ್ರೀತಿಸುತ್ತಿದ್ದೀರಿ. ಅವರನ್ನು ಇನ್ನೂ ಹೆಚ್ಚೆಚ್ಚಾಗಿ ನೀವು ಪ್ರೀತಿಸಬೇಕೆಂದು ನಾವು ನಿಮ್ಮನ್ನು ಪ್ರೋತ್ಸಾಹಿಸುತ್ತೇವೆ.


ಕ್ರಿಸ್ತನ ಸಹಾಯದಿಂದ ದೇವರಿಗೆ ಘನತೆಯನ್ನೂ ಸ್ತೋತ್ರವನ್ನೂ ಉಂಟುಮಾಡುವುದಕ್ಕಾಗಿ ನೀವು ಅನೇಕ ಕಾರ್ಯಗಳನ್ನು ಮಾಡುವಂಥವರಾಗಬೇಕು.


ನೀವು ಬಹಳ ಫಲಕೊಟ್ಟು, ನೀವೇ ನನ್ನ ಶಿಷ್ಯರೆಂಬುದನ್ನು ತೋರಿಸಬೇಕು. ಇದರಿಂದ ನನ್ನ ತಂದೆಗೆ ಮಹಿಮೆ ಆಗುವುದು.


“ನಾನೇ ದ್ರಾಕ್ಷಿಬಳ್ಳಿ; ನೀವೇ ಕವಲುಗಳು. ಒಬ್ಬನು ನನ್ನಲ್ಲಿ ನೆಲೆಗೊಂಡಿದ್ದರೆ ಮತ್ತು ನಾನು ಅವನಲ್ಲಿ ನೆಲೆಗೊಂಡಿದ್ದರೆ, ಆಗ ಅವನು ಹೆಚ್ಚು ಫಲಕೊಡುವನು. ಆದರೆ ಅವನು ನನ್ನನ್ನು ಬಿಟ್ಟು ಏನೂ ಮಾಡಲಾರನು.


ಯೆಹೋವನಿಗೆ ವಿಧೇಯನಾಗಲು ಯೋನನು ಇಷ್ಟಪಡದೆ ಆತನಿಂದ ತಪ್ಪಿಸಿಕೊಂಡು ಓಡಿಹೋಗಲು ಪ್ರಯತ್ನಿಸಿ ಯೊಪ್ಪಕ್ಕೆ ಹೋದನು. ಅಲ್ಲಿ ಬಹುದೂರದ ಪಟ್ಟಣವಾದ ತಾರ್ಷೀಷಿಗೆ ಹೋಗುವ ಹಡಗು ಹೊರಡಲು ಸಿದ್ಧವಾಗಿತ್ತು. ಅವನು ಪ್ರಯಾಣದರವನ್ನು ಕೊಟ್ಟು ಹಡಗನ್ನು ಹತ್ತಿದನು. ಆ ಜನರೊಂದಿಗೆ ತಾರ್ಷೀಷಿಗೆ ಪ್ರಯಾಣಮಾಡಿ ಯೆಹೋವನಿಂದ ದೂರಹೋಗಬೇಕೆಂಬುದೇ ಅವನ ಬಯಕೆಯಾಗಿತ್ತು.


ಆಕೆ ಸುಂದರವಾದ ಜಿಂಕೆಯಂತೆಯೂ ಅಂದವಾದ ಕಾಡುಮೇಕೆಯಂತೆಯೂ ಇದ್ದಾಳೆ. ಆಕೆಯ ಸ್ತನಗಳು ನಿನ್ನನ್ನು ಸಂಪೂರ್ಣವಾಗಿ ತೃಪ್ತಿಪಡಿಸಲಿ. ಆಕೆಯ ಪ್ರೀತಿಯಲ್ಲೇ ಲೀನವಾಗಿರು.


ಮೇಯರ್ಕೋನ್ ಮತ್ತು ರಕ್ಕೋನ್, ಯೊಪ್ಪಕ್ಕೆ ಹತ್ತಿರದ ಪ್ರದೇಶಗಳೂ ಇವರಿಗೆ ದೊರೆತವು.


ಪ್ರಭುವಿಗೆ ಯೋಗ್ಯರಾಗಿ ನಡೆದು ಪ್ರತಿಯೊಂದು ವಿಷಯದಲ್ಲಿ ಆತನನ್ನು ಸಂತೋಷಪಡಿಸಬೇಕೆಂತಲೂ ನೀವು ಎಲ್ಲಾ ವಿಧವಾದ ಒಳ್ಳೆಯ ಕಾರ್ಯಗಳನ್ನು ಮಾಡುತ್ತಾ ದೇವಜ್ಞಾನದಲ್ಲಿ ಬೆಳಯಬೇಕೆಂತಲೂ


ನನ್ನ ಪ್ರಿಯನೇ, ತ್ವರೆಪಡು. ಸುಗಂಧಸಸ್ಯ ಪರ್ವತಗಳ ಮೇಲೆ ಸಾರಂಗದಂತೆಯೂ ಪ್ರಾಯದ ಜಿಂಕೆಯಂತೆಯೂ ಇರು.


ಜೆರುಸಲೇಮಿನ ಸ್ತ್ರೀಯರೇ, ತಕ್ಕಕಾಲಕ್ಕೆ ಮೊದಲೇ ಪ್ರೀತಿಯನ್ನು ಹುಟ್ಟಿಸಿ, ಬೆಳೆಯಿಸುವುದಿಲ್ಲವೆಂದು ಜಿಂಕೆಗಳ ಮೇಲೆಯೂ ಕಾಡುಹುಲ್ಲೆಗಳ ಮೇಲೆಯೂ ನನಗೆ ಪ್ರಮಾಣಮಾಡಿರಿ.


ನನ್ನ ಪ್ರಿಯನು ಸಾರಂಗದಂತೆಯೂ ಪ್ರಾಯದ ಜಿಂಕೆಯಂತೆಯೂ ಇದ್ದಾನೆ. ಅಗೋ, ಅವನು ನಮ್ಮ ಗೋಡೆಯ ಆಚೆ ನಿಂತಿದ್ದಾನೆ; ತಡಕೆಗಳಿಂದ ಇಣಿಕಿಹಾಕುತ್ತಿದ್ದಾನೆ; ಕಿಟಕಿಗಳಿಂದ ನೋಡುತ್ತಿದ್ದಾನೆ.


ಪೇತ್ರನು ಲುದ್ದದಲ್ಲಿದ್ದಾನೆಂಬ ಸುದ್ದಿಯು ಜೊಪ್ಪದಲ್ಲಿದ್ದ ವಿಶ್ವಾಸಿಗಳಿಗೆ ತಿಳಿಯಿತು. (ಲುದ್ದವು ಜೊಪ್ಪದ ಸಮೀಪದಲ್ಲಿದೆ.) ಆದ್ದರಿಂದ ಅವರು ಇಬ್ಬರನ್ನು ಪೇತ್ರನ ಬಳಿಗೆ ಕಳುಹಿಸಿದರು. ಅವರು, “ತ್ವರೆ ಮಾಡು, ದಯವಿಟ್ಟು ಬೇಗನೆ ಬಾ!” ಎಂದು ಅವನನ್ನು ಬೇಡಿಕೊಂಡರು.


ಜೊಪ್ಪದ ಎಲ್ಲಾ ಕಡೆಗಳಲ್ಲಿಯೂ ಇದ್ದ ಜನರಿಗೆ ಈ ವಿಷಯ ತಿಳಿಯಿತು. ಈ ಜನರಲ್ಲಿ ಅನೇಕರು ಪ್ರಭುವನ್ನು ನಂಬಿದರು.


ಕೊರ್ನೇಲಿಯನು ಈ ಮೂವರಿಗೆ ಪ್ರತಿಯೊಂದನ್ನೂ ವಿವರಿಸಿದನು. ಬಳಿಕ ಅವರನ್ನು ಜೊಪ್ಪಕ್ಕೆ ಕಳುಹಿಸಿದನು.


ಪೇತ್ರನು ಅವರನ್ನು ಒಳಗೆ ಕರೆದು, ಆ ರಾತ್ರಿ ಅಲ್ಲೇ ಇರಬೇಕೆಂದು ಕೇಳಿಕೊಂಡನು. ಮರುದಿನ ಪೇತ್ರನು ಸಿದ್ಧನಾಗಿ, ಆ ಮೂವರೊಂದಿಗೆ ಹೊರಟನು. ಜೊಪ್ಪದ ವಿಶ್ವಾಸಿಗಳಲ್ಲಿ ಕೆಲವರು ಅವನೊಂದಿಗೆ ಹೋದರು.


ಪೇತ್ರನು ಅವರಿಗೆ, “ನಾನು ಜೊಪ್ಪ ಪಟ್ಟಣದಲ್ಲಿದ್ದೆನು. ನಾನು ಪ್ರಾರ್ಥಿಸುತ್ತಿದ್ದಾಗ ನನಗೊಂದು ದರ್ಶನವಾಯಿತು. ಆ ದರ್ಶನದಲ್ಲಿ, ಆಕಾಶದಿಂದ ಇಳಿದುಬರುತ್ತಿರುವ ಒಂದು ವಸ್ತುವನ್ನು ಕಂಡೆನು. ಅದು ದೊಡ್ಡ ತಟ್ಟೆಯಂತಿತ್ತು. ಅದರ ನಾಲ್ಕು ಮೂಲೆಗಳಲ್ಲಿ ಹಗ್ಗವನ್ನು ಕಟ್ಟಿ ಭೂಮಿಗೆ ಇಳಿಯಬಿಡಲಾಗಿತ್ತು. ಅದು ಇಳಿದು ಬಂದು ನನ್ನ ಸಮೀಪದಲ್ಲೇ ನಿಂತುಕೊಂಡಿತು.


ತನ್ನ ಮನೆಯಲ್ಲಿ ದೇವದೂತನೊಬ್ಬನು ನಿಂತಿರುವುದನ್ನು ತಾನು ಕಂಡದ್ದರ ಬಗ್ಗೆ ಕೊರ್ನೇಲಿಯನು ನನಗೆ ಹೇಳಿದನು. ಆ ದೇವದೂತನು ಕೊರ್ನೇಲಿಯನಿಗೆ, ‘ಕೆಲವು ಜನರನ್ನು ಜೊಪ್ಪಕ್ಕೆ ಕಳುಹಿಸು. ಸೀಮೋನ್ ಪೇತ್ರನನ್ನು ಆಹ್ವಾನಿಸಿ ನಿಮ್ಮ ಬಳಿಗೆ ಬರಮಾಡಿಕೊ.


ಎರಡು ತಲಾಂತು ಹೊಂದಿದ ಸೇವಕನೂ ಅದೇ ರೀತಿ ಆ ಹಣವನ್ನು ವ್ಯಾಪಾರಕ್ಕೆ ಹಾಕಿ ಇನ್ನೂ ಎರಡು ತಲಾಂತು ಸಂಪಾದಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು