ಅಪೊಸ್ತಲರ ಕೃತ್ಯಗಳು 9:39 - ಪರಿಶುದ್ದ ಬೈಬಲ್39 ಪೇತ್ರನು ಸಿದ್ಧನಾಗಿ ಅವರೊಂದಿಗೆ ಹೋದನು. ಅವನು ಅಲ್ಲಿಗೆ ತಲುಪಿದಾಗ, ಅವರು ಅವನನ್ನು ಮೇಲ್ಮಾಳಿಗೆಯ ಕೋಣೆಗೆ ಕರೆದುಕೊಂಡು ಹೋದರು. ವಿಧವೆಯರೆಲ್ಲ ಅಳುತ್ತಾ ಪೇತ್ರನನ್ನು ಸುತ್ತುವರಿದರು. ದೊರ್ಕಳು ಜೀವಂತವಾಗಿದ್ದಾಗ ತಮಗಾಗಿ ತಯಾರಿಸಿ ಕೊಟ್ಟ ಮೇಲಂಗಿಗಳನ್ನು ಮತ್ತು ಬಟ್ಟೆಗಳನ್ನು ಅವರು ಪೇತ್ರನಿಗೆ ತೋರಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201939 ಪೇತ್ರನು ಎದ್ದು ಅವರ ಜೊತೆಯಲ್ಲಿ ಹೋದನು. ಅವನು ಬಂದ ಕೂಡಲೆ ಅವರು ಅವನನ್ನು ಮೇಲಂತಸ್ತಿಗೆ ಕರೆದುಕೊಂಡು ಹೋದರು. ಅಲ್ಲಿ ವಿಧವೆಯರೆಲ್ಲ ಅಳುತ್ತಾ, ಅವನ ಹತ್ತಿರ ನಿಂತುಕೊಂಡು ದೊರ್ಕಳು ತಮ್ಮ ಸಂಗಡ ಇದ್ದಾಗ ಮಾಡಿಕೊಟ್ಟಿದ್ದ ಒಳಂಗಿಗಳನ್ನೂ, ಮೇಲಂಗಿಗಳನ್ನೂ ತೋರಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)39 ಪೇತ್ರನು ಎದ್ದು ಅವರ ಜೊತೆಯಲ್ಲೇ ಹೊರಟುಬಂದನು. ಅವನನ್ನು ಮೇಲಂತಸ್ತಿನ ಕೋಣೆಗೆ ಕರೆದುಕೊಂಡು ಹೋದರು. ಅಲ್ಲಿ ಕೂಡಿದ್ದ ವಿಧವೆಯರೆಲ್ಲರೂ ಅವನ ಸುತ್ತುವರಿದು ಅಳುತ್ತಾ, ದೋರ್ಕಳು ಜೀವದಿಂದ ಇದ್ದಾಗ ತಮಗೆ ಮಾಡಿಕೊಟ್ಟ ಬಟ್ಟೆಬರೆಗಳನ್ನು ಅವನಿಗೆ ತೋರಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)39 ಪೇತ್ರನು ಎದ್ದು ಅವರ ಜೊತೆಯಲ್ಲಿ ಹೋದನು. ಅವನು ಬಂದ ಕೂಡಲೆ ಅವರು ಅವನನ್ನು ಮೇಲಂತಸ್ತಿಗೆ ಕರೆದುಕೊಂಡು ಹೋದರು. ಅಲ್ಲಿ ವಿಧವೆಯರೆಲ್ಲರು ಅಳುತ್ತಾ ಅವನ ಹತ್ತಿರ ನಿಂತುಕೊಂಡು ದೊರ್ಕಳು ತಮ್ಮ ಸಂಗಡ ಇದ್ದಾಗ ಮಾಡಿಕೊಟ್ಟಿದ್ದ ಒಳಂಗಿಗಳನ್ನೂ ಮೇಲಂಗಿಗಳನ್ನೂ ತೋರಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ39 ಅವರೊಂದಿಗೆ ಪೇತ್ರನು ಹೊರಟನು. ಅವನು ಬಂದಾಗ ಅವನನ್ನು ಮೇಲಂತಸ್ತಿನ ಕೋಣೆಗೆ ಕರೆದುಕೊಂಡು ಹೋದರು. ವಿಧವೆಯರು ಅವನ ಸುತ್ತಲೂ ನಿಂತುಕೊಂಡು ದೊರ್ಕಳು ಜೀವದಿಂದ ಇದ್ದಾಗ ಆಕೆ ಸಿದ್ಧಪಡಿಸಿದ ನಿಲುವಂಗಿಗಳನ್ನು ಇತರ ಬಟ್ಟೆಗಳನ್ನು ಅವನಿಗೆ ತೋರಿಸುತ್ತಾ ಕಣ್ಣೀರಿಟ್ಟರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್39 ಪೆದ್ರು ತಯಾರ್ ಹೊವ್ನ್ ತೆಂಚ್ಯಾ ವಾಂಗ್ಡಾ ಗೆಲೊ ತೊ ಥೈ ಪಾವಲ್ಯಾ ತನ್ನಾ ತೆನಿ ಪೆದ್ರುಕ್ ಮ್ಹಾಳ್ಳ್ಯಾ ವೈಲ್ಯಾ ಖೊಲಿಕ್ ಬಲ್ವುನ್ ನ್ಹೆಲ್ಯಾನಿ, ಘವ್ಮರಲ್ಲಿ ಬಾಯ್ಕಾಮಾನ್ಸಾ ಸಗ್ಳ್ಯಿ ರಡಿಂಗೆತ್ ಪೆದ್ರುಕ್ಡೆ ಯೆಲಿ, ಅನಿ ದೊರ್ಕಾಸ್ ಜಿವಾನಿ ರಾತಾನಾ ಅಪ್ನಾಕ್ನಿ ತಯಾರ್ ಕರುನ್ ದಿಲ್ಲೆ ಝಗೆ ಅನಿ ಕಪ್ಡೆ ಸಗ್ಳ್ಯೆ ಪೆದ್ರುಕ್ ದಾಕ್ವುಲ್ಯಾನಿ. ಅಧ್ಯಾಯವನ್ನು ನೋಡಿ |