Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 1:19 - ಪರಿಶುದ್ದ ಬೈಬಲ್‌

19 ಯೆಹೋವನು ಆಜ್ಞಾಪಿಸಿದ ಪ್ರಕಾರವೇ ಮೋಶೆಯು ಮಾಡಿದನು. ಜನರು ಸೀನಾಯಿ ಮರುಭೂಮಿಯಲ್ಲಿದ್ದಾಗ ಮೋಶೆಯು ಅವರನ್ನು ಲೆಕ್ಕಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಹೀಗೆ ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆ ಮೋಶೆ ಸೀನಾಯಿ ಅರಣ್ಯದಲ್ಲಿ ಅವರನ್ನು ಲೆಕ್ಕಮಾಡಿ ಮೊಟ್ಟಮೊದಲು ಜನಗಣತಿ ಪ್ರಾರಂಭಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಸರ್ವೇಶ್ವರ ಆಜ್ಞಾಪಿಸಿದಂತೆ ಮೋಶೆ ಸೀನಾಯಿ ಮರುಭೂಮಿಯಲ್ಲಿ ಜನಗಣತಿ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಹೀಗೆ ಮೋಶೆ ಸೀನಾಯಿ ಅರಣ್ಯದಲ್ಲಿ ಅವರನ್ನು ಲೆಕ್ಕಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಹಾಗೆಯೇ, ಮೋಶೆ ಸೀನಾಯಿ ಮರುಭೂಮಿಯಲ್ಲಿ ಜನಗಣತಿ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 1:19
10 ತಿಳಿವುಗಳ ಹೋಲಿಕೆ  

“ಇಸ್ರೇಲ್ ಜನರೆಲ್ಲರನ್ನು ಅವರವರ ಗೋತ್ರ ಕುಟುಂಬಗಳ ಪ್ರಕಾರ ಲೆಕ್ಕಿಸಿ ಪ್ರತಿಯೊಬ್ಬನ ಹೆಸರನ್ನೂ ಪಟ್ಟಿಮಾಡಿ,


ಆಮೇಲೆ ಸೊಲೊಮೋನನು ತನ್ನ ರಾಜ್ಯದಲ್ಲಿದ್ದ ಎಲ್ಲಾ ಪರದೇಶಸ್ಥರನ್ನು ಲೆಕ್ಕಿಸಿದನು. ಸೊಲೊಮೋನನ ತಂದೆಯಾದ ದಾವೀದನು ಮಾಡಿದ ಜನಗಣತಿಯ ನಂತರ ಈ ಜನಗಣತಿಯನ್ನು ಮಾಡಲಾಯಿತು. ಅವರಲ್ಲಿ ಒಂದು ಲಕ್ಷದ ಐವತ್ತ ಮೂರು ಸಾವಿರದ ಆರುನೂರು ಮಂದಿ ಪರದೇಶದವರಿದ್ದರು.


ಯೆಹೋವನು ಆಜ್ಞಾಪಿಸಿದಂತೆಯೇ ಪ್ರತಿಯೊಂದನ್ನೂ ಮೋಶೆಯು ಮಾಡಿದನು.


ಅವರು ದೇವದರ್ಶನಗುಡಾರವನ್ನು ಪ್ರವೇಶಿಸುವಾಗಲೆಲ್ಲಾ ಮತ್ತು ಯಜ್ಞವೇದಿಕೆಯ ಸಮೀಪ ಹೋಗುವಾಗಲೆಲ್ಲಾ ತಮ್ಮನ್ನು ತೊಳೆದುಕೊಳ್ಳುತ್ತಿದ್ದರು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಅವರು ಇದನ್ನು ಮಾಡಿದರು.


ಹೀಗೆ ಯೆಹೋವನು ಮೋಶೆಗೆ ಆಜ್ಞಾಪಿಸಿದ್ದ ಪ್ರತಿಯೊಂದನ್ನು ಇಸ್ರೇಲರು ಮಾಡಿದರು.


ಹೀಗೆ ಯೆಹೋವನು ಮೋಶೆಗೆ ಹೇಳಿದ ಪ್ರತಿಯೊಂದನ್ನು ಇಸ್ರೇಲರು ಮಾಡಿದರು. ತಮ್ಮ ಕ್ರಮಕ್ಕನುಸಾರವಾಗಿ ಅವರು ಪಾಳೆಯ ಮಾಡಿಕೊಂಡರು. ನೇಮಕವಾದ ಪ್ರಕಾರವೇ ಪ್ರಯಾಣ ಮಾಡುತ್ತಿದ್ದರು; ಪ್ರತಿಯೊಬ್ಬನು ತನ್ನ ಸ್ವಂತ ಕುಲದೊಡನೆಯೂ ಕುಟುಂಬದೊಡನೆಯೂ ಇದ್ದನು.


ಮೋಶೆಯು ಯೆಹೋವನಿಗೆ ವಿಧೇಯನಾಗಿ ಆತನ ಆಜ್ಞೆಯಂತೆ ಬೆಳ್ಳಿಯನ್ನು ಆರೋನನಿಗೂ ಅವನ ಪುತ್ರರಿಗೂ ಕೊಟ್ಟನು.


ಮೋಶೆ ಮತ್ತು ಯಾಜಕನಾದ ಎಲ್ಲಾಜಾರನು ಈ ಜನರನ್ನೆಲ್ಲಾ ಲೆಕ್ಕಿಸಿದರು. ಇಸ್ರೇಲರು ಜೋರ್ಡನ್ ಹೊಳೆಯ ತೀರದಲ್ಲಿ ಜೆರಿಕೊ ಪಟ್ಟಣದ ಆಚೆಯಲ್ಲಿ ಮೋವಾಬ್ಯರ ಬಯಲುಗಳಲ್ಲಿದ್ದಾಗ ಇವರನ್ನು ಲೆಕ್ಕಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು