Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 1:2 - ಪರಿಶುದ್ದ ಬೈಬಲ್‌

2 “ಇಸ್ರೇಲ್ ಜನರೆಲ್ಲರನ್ನು ಅವರವರ ಗೋತ್ರ ಕುಟುಂಬಗಳ ಪ್ರಕಾರ ಲೆಕ್ಕಿಸಿ ಪ್ರತಿಯೊಬ್ಬನ ಹೆಸರನ್ನೂ ಪಟ್ಟಿಮಾಡಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ಇಸ್ರಾಯೇಲರ ಸರ್ವಸಮೂಹದ ಗಂಡಸರನ್ನು ಗೋತ್ರದ ಕುಟುಂಬಗಳ ಪ್ರಕಾರ ಹೆಸರು ಹಿಡಿದು ಒಬ್ಬೊಬ್ಬರನ್ನಾಗಿ ಲೆಕ್ಕಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 “ನೀನು ಮತ್ತು ಆರೋನ ಇಸ್ರಯೇಲ್ ಜನಸಮೂಹದ ಗಂಡಸರನ್ನು ಗೋತ್ರ ಹಾಗೂ ಕುಟುಂಬಗಳಿಗೆ ಅನುಗುಣವಾಗಿ ಹೆಸರು ಹಿಡಿದು ಒಬ್ಬೊಬ್ಬರನ್ನಾಗಿ ಎಣಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಇಸ್ರಾಯೇಲ್ಯರ ಸರ್ವಸಮೂಹದ ಗಂಡಸರನ್ನು ಗೋತ್ರ ಕುಟುಂಬಗಳ ಪ್ರಕಾರ ಹೆಸರುಹಿಡಿದು ಒಬ್ಬೊಬ್ಬರನ್ನಾಗಿ ಲೆಕ್ಕಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 “ಇಸ್ರಾಯೇಲ್ ಜನಸಮೂಹದ ಗಂಡಸರನ್ನು ಗೋತ್ರ ಹಾಗೂ ಕುಟುಂಬಗಳಿಗೆ ಅನುಗುಣವಾಗಿ ಹೆಸರು ಹಿಡಿದು ಒಬ್ಬೊಬ್ಬರನ್ನಾಗಿ ಎಣಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 1:2
16 ತಿಳಿವುಗಳ ಹೋಲಿಕೆ  

ಇಪ್ಪತ್ತು ವರ್ಷ ಮತ್ತು ಅದಕ್ಕೆ ಮೇಲ್ಪಟ್ಟ ಎಲ್ಲಾ ಗಂಡಸರನ್ನು ಲೆಕ್ಕಿಸಲಾಯಿತು. ಅಲ್ಲಿ ಆರು ಲಕ್ಷದ ಮೂರು ಸಾವಿರದ ಐನೂರೈವತ್ತು ಮಂದಿ ಗಂಡಸರಿದ್ದರು ಮತ್ತು ಪ್ರತಿಯೊಬ್ಬನು ತಲಾ ಒಂದು ಬೆಕಾ ಬೆಳ್ಳಿಯನ್ನು ತೆರಿಗೆಯಾಗಿ ಕೊಡಬೇಕಾಯಿತು. (ಅಧಿಕೃತ ಅಳತೆಯ ಪ್ರಕಾರ ಒಂದು ಬೆಕಾ ಅಂದರೆ ಅರ್ಧ ಶೆಕೆಲ್.)


“ಇಸ್ರೇಲರನ್ನು ಲೆಕ್ಕಿಸು. ಹೀಗಾಗಿ ಎಷ್ಟು ಮಂದಿ ಜನರಿರುತ್ತಾರೆಂದು ನೀನು ತಿಳಿದುಕೊಳ್ಳುವೆ. ಪ್ರತಿಸಾರಿ ಇದನ್ನು ಮಾಡಿದಾಗ, ಪ್ರತಿಯೊಬ್ಬನು ತನಗೋಸ್ಕರವಾಗಿ ಯೆಹೋವನಿಗೆ ತೆರಿಗೆಯನ್ನು ಕೊಡಬೇಕು. ಆಗ ಜನರಿಗೆ ಯಾವ ಕೇಡುಗಳೂ ಉಂಟಾಗುವುದಿಲ್ಲ.


ಎರಡನೆ ತಿಂಗಳಿನ ಮೊದಲನೆ ದಿನದಲ್ಲಿ ಎಲ್ಲಾ ಜನರು ಒಟ್ಟಾಗಿ ಸೇರಿಬಂದರು. ಜನರು ತಮ್ಮತಮ್ಮ ಕುಟುಂಬಗಳಿಗನುಸಾರವಾಗಿ, ಗೋತ್ರಗಳಿಗನುಸಾರವಾಗಿ ಪಟ್ಟಿ ಮಾಡಿಸಿದರು. ಇಪ್ಪತ್ತು ವರ್ಷ ಮತ್ತು ಅದಕ್ಕಿಂತ ಹೆಚ್ಚು ವಯಸ್ಸಾದ ಎಲ್ಲಾ ಪುರುಷರ ಹೆಸರುಗಳನ್ನು ಪಟ್ಟಿಮಾಡಲಾಯಿತು.


ಅವರು ಸಿಮೆಯೋನ್ ಕುಲದವರನ್ನು ಲೆಕ್ಕಿಸಿದರು. ಸೈನ್ಯದಲ್ಲಿ ಸೇವೆಮಾಡಲು ಶಕ್ತರಾದ ಇಪ್ಪತ್ತು ವರ್ಷ ಮತ್ತು ಅದಕ್ಕಿಂತ ಮೇಲ್ಪಟ್ಟ ಎಲ್ಲಾ ಪುರುಷರ ಹೆಸರುಗಳನ್ನು ಪಟ್ಟಿಮಾಡಲಾಯಿತು. ಅವರವರ ಕುಲಗಳಿಗನುಸಾರವಾಗಿ ಮತ್ತು ಕುಟುಂಬಗಳಿಗನುಸಾರವಾಗಿ ಅವರ ಹೆಸರುಗಳನ್ನು ಪಟ್ಟಿಮಾಡಲಾಯಿತು.


ಇಸ್ರೇಲರು ರಮ್ಸೇಸ್‌ನಿಂದ ಸುಕ್ಕೋತಿಗೆ ಪ್ರಯಾಣ ಮಾಡಿದರು. ಅವರಲ್ಲಿ ಸುಮಾರು ಆರು ಲಕ್ಷಮಂದಿ ಗಂಡಸರಿದ್ದರು. (ಈ ಸಂಖ್ಯೆಯಲ್ಲಿ ಮಕ್ಕಳು ಮತ್ತು ಹೆಂಗಸರು ಸೇರಿಲ್ಲ.)


ಲೆಕ್ಕಿಸಲ್ಪಟ್ಟ ಒಟ್ಟು ಗಂಡಸರು ಮೂರುಮುಕ್ಕಾಲು ಟನ್‌ಗಿಂತ ಹೆಚ್ಚು ಬೆಳ್ಳಿಯನ್ನು ಕೊಟ್ಟರು. (ಅಧಿಕೃತ ಅಳತೆಯನ್ನು ಉಪಯೋಗಿಸಿ ಇದನ್ನು ತೂಕ ಮಾಡಲಾಯಿತು.)


ಯೆಹೋವನು ಆಜ್ಞಾಪಿಸಿದ ಪ್ರಕಾರವೇ ಮೋಶೆಯು ಮಾಡಿದನು. ಜನರು ಸೀನಾಯಿ ಮರುಭೂಮಿಯಲ್ಲಿದ್ದಾಗ ಮೋಶೆಯು ಅವರನ್ನು ಲೆಕ್ಕಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು