ಅರಣ್ಯಕಾಂಡ 1:24 - ಪರಿಶುದ್ದ ಬೈಬಲ್24 ಗಾದ್ ಕುಲದವರನ್ನು ಲೆಕ್ಕಿಸಿದರು. ಸೈನ್ಯದಲ್ಲಿ ಸೇವೆಮಾಡಲು ಶಕ್ತರಾದ ಇಪ್ಪತ್ತು ವರ್ಷ ಮತ್ತು ಅದಕ್ಕಿಂತ ಮೇಲ್ಪಟ್ಟ ಎಲ್ಲಾ ಪುರುಷರ ಹೆಸರುಗಳನ್ನು ಪಟ್ಟಿಮಾಡಲಾಯಿತು. ಅವರವರ ಕುಲಗಳಿಗನುಸಾರವಾಗಿ ಮತ್ತು ಕುಟುಂಬಗಳಿಗನುಸಾರವಾಗಿ ಅವರ ಹೆಸರುಗಳನ್ನು ಪಟ್ಟಿಮಾಡಲಾಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಗಾದ್ ವಂಶದವರಲ್ಲಿ ಸೈನಿಕರಾಗಿ ಹೊರಡತಕ್ಕವರು ಅಂದರೆ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರು ಗೋತ್ರಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರೆಸರಾಗಿ ಲೆಕ್ಕಮಾಡಲ್ಪಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24-25 ಗಾದ್ ವಂಶದವರಲ್ಲಿ ಸೈನಿಕ ಸೇವೆ ಸಲ್ಲಿಸಲು ಶಕ್ತರಾದವರ, ಅಂದರೆ 30 ವರ್ಷ ಮೇಲ್ಪಟ್ಟ ವಯಸ್ಸಿನ ಹಾಗೂ ಗೋತ್ರ ಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರಿಸಿ ಎಣಿಕೆಯಾದ ಗಂಡಸರ ಸಂಖ್ಯೆ 45,650: ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24-25 ಗಾದ್ ವಂಶದವರಲ್ಲಿ ಸೈನಿಕರಾಗಿ ಹೊರಡತಕ್ಕವರು ಅಂದರೆ ಇಪ್ಪತ್ತು ವರುಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರು ಗೋತ್ರ ಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರು ಹಿಡಿದು ಲೆಕ್ಕಿಸಲ್ಪಟ್ಟ ಗಂಡಸರು … 45,650 ಮಂದಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಗಾದನ ಸಂತತಿಯವರಲ್ಲಿ: ಯುದ್ಧಕ್ಕೆ ಶಕ್ತರಾದ ಪುರುಷರೆಲ್ಲರೂ ಅಂದರೆ ಇಪ್ಪತ್ತು ವರ್ಷ ಅಥವಾ ಅದಕ್ಕಿಂತ ಮೇಲ್ಪಟ್ಟ ವಯಸ್ಸಿನವರು ಗೋತ್ರ ಹಾಗೂ ಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರೆಸರಾಗಿ ಪಟ್ಟಿಮಾಡಲಾದರು. ಅಧ್ಯಾಯವನ್ನು ನೋಡಿ |