Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 1:50 - ಪರಿಶುದ್ದ ಬೈಬಲ್‌

50 ಒಡಂಬಡಿಕೆಯ ಪವಿತ್ರ ಗುಡಾರವನ್ನು ನೋಡಿಕೊಳ್ಳುವ ಜವಾಬ್ದಾರಿಯು ಲೇವಿಯರಿಗೆ ಸೇರಿರುವುದರಿಂದ ಅವರಿಗೆ ಅದನ್ನು ತಿಳಿಸು. ಅವರು ಅದನ್ನೂ ಅದರ ಉಪಕರಣಗಳನ್ನೂ ಮತ್ತು ಅದಕ್ಕೆ ಸಂಬಂಧಿಸಿದ ಪ್ರತಿಯೊಂದನ್ನೂ ನೋಡಿಕೊಳ್ಳಬೇಕು. ಅವರು ಪವಿತ್ರ ಗುಡಾರವನ್ನೂ ಅದರಲ್ಲಿರುವ ಪ್ರತಿಯೊಂದನ್ನೂ ಹೊತ್ತುಕೊಂಡು ಹೋಗಬೇಕು. ಅವರು ಅದರ ಸುತ್ತಲೂ ಪಾಳೆಯಮಾಡಿಕೊಂಡು ಅದನ್ನು ನೋಡಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

50 ಆಜ್ಞಾಶಾಸನಗಳಿರುವ ಗುಡಾರವನ್ನೂ ಅದರ ಸಾಮಾನು, ಉಪಕರಣ ಇವುಗಳನ್ನೂ ನೋಡಿಕೊಳ್ಳುವುದಕ್ಕಾಗಿ ಲೇವಿಯರನ್ನು ನೇಮಿಸಬೇಕು. ಅವರು ಆ ಗುಡಾರವನ್ನೂ ಮತ್ತು ಅದರ ಸಾಮಾನುಗಳನ್ನೂ ಹೊರುವುದಕ್ಕಾಗಿ ಇರಬೇಕು. ಅವರು ಅದರ ಸೇವೆಯನ್ನು ಮಾಡುವವರಾಗಿ ಅದರ ಸುತ್ತಲೂ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

50 ಆಜ್ಞಾಶಾಸನಗಳಿರುವ ಗುಡಾರವನ್ನು ಹಾಗು ಅವರ ಸಾಮಾನು ಸರಂಜಾಮುಗಳನ್ನು ನೋಡಿಕೊಳ್ಳುವುದಕ್ಕೆ ಅವರನ್ನು ನೇಮಿಸಬೇಕು. ಅವರು ಆ ಗುಡಾರವನ್ನು ಅದರ ಉಪಕರಣಗಳನ್ನು ಹೊರುವವರಾಗಿರಬೇಕು. ಅದರ ಸೇವೆ ಮಾಡುವವರಾಗಿ ಅದರ ಸುತ್ತಲೂ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

50 ಆಜ್ಞಾಶಾಸನಗಳಿರುವ ಗುಡಾರವನ್ನೂ ಅದರ ಸಾಮಾನು, ಉಪಕರಣ ಇವುಗಳನ್ನೂ ನೋಡಿಕೊಳ್ಳುವದಕ್ಕೆ ಅವರನ್ನು ನೇವಿುಸಬೇಕು. ಅವರು ಆ ಗುಡಾರವನ್ನೂ ಅದರ ಸಾಮಾನನ್ನೂ ಹೊರುವದಕ್ಕಾಗಿ ಇರಬೇಕು. ಮತ್ತು ಅವರು ಅದರ ಸೇವೆಯನ್ನು ಮಾಡುವವರಾಗಿ ಅದರ ಸುತ್ತಲೂ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

50 ಆದರೆ ನೀನು ಸಾಕ್ಷಿಯ ಗುಡಾರವನ್ನೂ ಅದರ ಎಲ್ಲಾ ಸಲಕರಣೆಗಳನ್ನೂ ಅದಕ್ಕೆ ಬೇಕಾದ ಎಲ್ಲವನ್ನೂ ನೋಡಿಕೊಳ್ಳಲು ಲೇವಿಯರನ್ನು ನೇಮಿಸು. ಅವರು ಗುಡಾರವನ್ನೂ ಅದರ ಎಲ್ಲಾ ಸಲಕರಣೆಗಳನ್ನೂ ಹೊತ್ತುಕೊಳ್ಳುವರು. ಅದರ ಸೇವೆಮಾಡಿ, ಗುಡಾರದ ಸುತ್ತುಮುತ್ತಲೂ ಇಳಿದುಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 1:50
30 ತಿಳಿವುಗಳ ಹೋಲಿಕೆ  

ಒಡಂಬಡಿಕೆಯ ಗುಡಾರವಾದ ಪವಿತ್ರಗುಡಾರವನ್ನು ಮಾಡಲು ಉಪಯೋಗಿಸಿದ ಎಲ್ಲಾ ವಸ್ತುಗಳನ್ನು ಬರೆದಿಡಬೇಕೆಂದು ಮೋಶೆಯು ಲೇವಿಯರಿಗೆ ಆಜ್ಞಾಪಿಸಿದನು. ಈ ಪಟ್ಟಿಯು ಆರೋನನ ಮಗನಾದ ಈತಾಮಾರನ ವಶದಲ್ಲಿ ಇತ್ತು.


“ಇಸ್ರೇಲರು ಪ್ರಯಾಣಮಾಡುವ ಸಮಯದಲ್ಲಿ ಆರೋನನು ಮತ್ತು ಅವನ ಪುತ್ರರು ಪವಿತ್ರವಸ್ತುಗಳಿಗೂ ಪವಿತ್ರ ಉಪಕರಣಗಳಿಗೂ ಹೊದಿಸಿದ ನಂತರ, ಕೆಹಾತ್ಯರು ಅವುಗಳನ್ನು ಹೊರುವುದಕ್ಕೆ ಹೋಗಬಹುದು. ಈ ರೀತಿ ಅವರು ಪವಿತ್ರವಸ್ತುಗಳನ್ನು ಮುಟ್ಟಬಾರದು; ಅವರು ಮುಟ್ಟಿದರೆ ಸಾಯುತ್ತಾರೆ.


ಹೀಗೆ, ಯೆಹೋವನು ಮೋಶೆಯೊಡನೆ ಸೀನಾಯಿ ಬೆಟ್ಟದಲ್ಲಿ ಮಾತಾಡುವುದನ್ನು ಮುಗಿಸಿದನು. ಬಳಿಕ ಯೆಹೋವನು ಒಡಂಬಡಿಕೆ ಬರೆಯಲ್ಪಟ್ಟಿದ್ದ ಎರಡು ಕಲ್ಲಿನ ಹಲಿಗೆಗಳನ್ನು ಮೋಶೆಗೆ ಕೊಟ್ಟನು. ಅವು ದೇವರ ಬೆರಳಿನಿಂದ ಲಿಖಿತವಾಗಿತ್ತು.


ಇದಾದ ಬಳಿಕ ತಮ್ಮನ್ನು ಶುದ್ಧಪಡಿಸಿಕೊಳ್ಳಲು ಲೇವಿಯರಿಗೆ ಆಜ್ಞಾಪಿಸಿದೆನು. ಅವರು ಶುದ್ಧಪಡಿಸಿಕೊಂಡ ಬಳಿಕ ಬಾಗಿಲುಗಳನ್ನು ಕಾಯಲು ಅವರನ್ನು ಕಳುಹಿಸಿದೆನು. ಯಾಕೆಂದರೆ ಸಬ್ಬತ್‌ದಿನವು ಪವಿತ್ರ ದಿನವೆಂದು ಎಲ್ಲರೂ ಆಚರಿಸುವಂತೆ ಹೀಗೆ ಮಾಡಿದೆನು. ದೇವರೇ, ನನ್ನ ಈ ಕಾರ್ಯವನ್ನು ನಿನ್ನ ನೆನಪಿನಲ್ಲಿಟ್ಟುಕೋ. ನನ್ನ ಮೇಲೆ ದಯವಿಟ್ಟು ನಿನ್ನ ಪ್ರೀತಿಯನ್ನು ತೋರಿಸು.


ತನ್ನ ಕೈಯಲ್ಲಿದ್ದ ಕೋಲನ್ನು ಎತ್ತಿ ಎರಡು ಸಾರಿ ಬಂಡೆಯನ್ನು ಹೊಡೆದನು. ಬಂಡೆಯಿಂದ ನೀರು ಹರಿಯತೊಡಗಿತು. ಜನರಿಗೆ ಮತ್ತು ಪಶುಗಳಿಗೆ ಕುಡಿಯಲು ನೀರು ದೊರೆಯಿತು.


ಇಸ್ರೇಲಿನ ಕುಲಗಳವರು ಅಂದರೆ ಯೆಹೋವನ ಕುಲಗಳವರು ಯೆಹೋವನ ಹೆಸರನ್ನು ಕೊಂಡಾಡಲು ಅಲ್ಲಿಗೆ ಹೋಗುವರು.


ಜೆರುಬ್ಬಾಬೆಲ್ ಮತ್ತು ನೆಹೆಮೀಯನ ಕಾಲದಲ್ಲಿ ಇಸ್ರೇಲರೆಲ್ಲರೂ ಗಾಯಕರಿಗೆ ಮತ್ತು ದ್ವಾರಪಾಲಕರಿಗೆ ಅನುದಿನ ಅಗತ್ಯವಾದವುಗಳನ್ನು ಒದಗಿಸಿಕೊಟ್ಟರು. ಇತರ ಲೇವಿಯರಿಗೋಸ್ಕರವಾಗಿಯೂ ಜನರು ಹಣವನ್ನು ಪ್ರತ್ಯೇಕವಾಗಿಟ್ಟರು. ಲೇವಿಯರೂ ಸಹ ಆರೋನನ ವಂಶದ ಯಾಜಕರಿಗಾಗಿ ಹಣವನ್ನು ಪ್ರತ್ಯೇಕವಾಗಿಟ್ಟರು.


ಎಲ್ಯಾಷೀಬ್, ಯೋಯಾದ, ಯೋಹಾನಾನ್ ಮತ್ತು ಯದ್ದೂವ ಇವರ ಕಾಲಗಳಲ್ಲಿದ್ದ ಲೇವಿಯರ ಮತ್ತು ಯಾಜಕರ ಕುಟುಂಬನಾಯಕರ ಹೆಸರುಗಳನ್ನು ಪರ್ಶಿಯ ರಾಜನಾದ ದಾರ್ಯವೇಷನ ಆಳ್ವಿಕೆಯಲ್ಲಿ ಬರೆಯಲಾಯಿತು.


ಲೇವಿಯವರು ಯಾರೆಂದರೆ: ಯೇಷೂವ, ಬಿನ್ನೂಯ, ಕದ್ಮೀಯೇಲ್, ಶೆರೇಬ್ಯ, ಯೆಹೂದ ಮತ್ತು ಮತ್ತನ್ಯ. ಇವರು ಮತ್ತನ್ಯನಿಗೆ ಸಂಬಂಧಿಕರೂ ಗಾಯಕರಿಗೆ ಮುಖ್ಯಸ್ತರೂ ಆಗಿದ್ದರು.


ಬಳಿಕ ಕೆಹಾತನ ಕುಲದವರು ಹೊರಟರು. ಅವರು ದೇವಸ್ಥಾನದ ಪವಿತ್ರವಸ್ತುಗಳನ್ನು ಹೊತ್ತುಕೊಂಡಿದ್ದರು. ಕೆಹಾತ್ಯರು ಪವಿತ್ರವಸ್ತುಗಳೊಡನೆ ಬರುವಷ್ಟರೊಳಗೆ ಇತರ ಲೇವಿಯರು ದೇವದರ್ಶನಗುಡಾರವನ್ನು ಎತ್ತಿ ನಿಲ್ಲಿಸಿದರು.


“ಇಸ್ರೇಲರು ಪ್ರಯಾಣಮಾಡುವಾಗ ಅವರ ನಂತರ ಹೊರಡುವ ತಂಡದವರೇ ಲೇವಿ ಕುಲದವರು. ಇತರ ಪಾಳೆಯಗಳ ಮಧ್ಯೆ ದೇವದರ್ಶನಗುಡಾರವು ಅವರೊಡನೆ ಇರುವುದು. ಅವರು ತಾವು ಪಾಳೆಯ ಮಾಡಿಕೊಂಡ ಕ್ರಮಾನುಸಾರವಾಗಿ ತಮ್ಮ ಧ್ವಜಗಳೊಡನೆ ಮುನ್ನಡೆಯುವರು.


ಆದರೆ ಲೇವಿಯರು ಮಾತ್ರ ಪವಿತ್ರ ಗುಡಾರದ ಸುತ್ತಲೂ ತಮ್ಮ ಪಾಳೆಯ ಮಾಡಿಕೊಳ್ಳಬೇಕು. ಹೀಗೆ ಲೇವಿಯರು ಒಡಂಬಡಿಕೆಯ ಪವಿತ್ರ ಗುಡಾರವನ್ನು ಕಾಯುವರು; ಇಸ್ರೇಲರಿಗೆ ಯಾವ ಕೇಡೂ ಸಂಭವಿಸದಂತೆ ಅವರು ಪವಿತ್ರ ಗುಡಾರವನ್ನು ಸಂರಕ್ಷಿಸುವರು.”


ಇದಾದ ನಂತರ ನಾನು ನೋಡಿದಾಗ ಪರಲೋಕದ ಆಲಯವು (ದೇವದರ್ಶನ ಗುಡಾರವು) ತೆರೆಯಿತು.


ಮೋಶೆ ಆ ಕೋಲುಗಳನ್ನು ಒಡಂಬಡಿಕೆಯ ಗುಡಾರದಲ್ಲಿ ಯೆಹೋವನ ಮುಂದೆ ಇಟ್ಟನು.


ಆಗ ಅರಸನಾದ ಯೆಹೋವಾಷನು ಮಹಾಯಾಜಕನಾದ ಯೆಹೋಯಾದನನ್ನು ಕರೆದು, “ದೇವಾಲಯಕ್ಕೆ ಕೊಡಬೇಕಾದ ಹಣವನ್ನು ಯೆಹೂದ ಮತ್ತು ಜೆರುಸಲೇಮಿನ ಜನರಿಂದ ಲೇವಿಯರು ಸಂಗ್ರಹಿಸಿಕೊಂಡು ಬರಲು ನೀನೇಕೆ ಅವರನ್ನು ಒತ್ತಾಯಿಸಲಿಲ್ಲ? ಮೋಶೆಯೂ ಇಸ್ರೇಲರೂ ಆ ಹಣವನ್ನು ಪವಿತ್ರ ಗುಡಾರಕ್ಕಾಗಿ ಉಪಯೋಗಿಸುತ್ತಿರಲಿಲ್ಲವೇ?” ಎಂದು ಕೇಳಿದನು.


ದೇವದರ್ಶನಗುಡಾರಕ್ಕೆ ಸಂಬಂಧಿಸಿದ ಕೆಲಸವನ್ನು ಮಾಡಲು ಯೋಗ್ಯರಾದ ಮೂವತ್ತರಿಂದ ಐವತ್ತರೊಳಗಿನ ಎಲ್ಲಾ ಪುರುಷರನ್ನು ಲೆಕ್ಕಿಸು.


ಇಸ್ರೇಲರ ಮಧ್ಯದಿಂದ ನಾನು ಲೇವಿಯರನ್ನು ಆರಿಸಿಕೊಂಡಿದ್ದೇನೆ ಮತ್ತು ದೇವದರ್ಶನಗುಡಾರದಲ್ಲಿ ಇಸ್ರೇಲರ ಪರವಾಗಿ ಕೆಲಸ ಮಾಡಲೂ ಮತ್ತು ಇಸ್ರೇಲರಿಗೆ ದೋಷಪರಿಹಾರ ಮಾಡುವುದಕ್ಕೂ ನಾನು ಅವರನ್ನು ಆರೋನ ಮತ್ತು ಅವನ ಪುತ್ರರಿಗೆ ಒಪ್ಪಿಸಿಕೊಟ್ಟಿದ್ದೇನೆ. ಇಸ್ರೇಲರನ್ನು ಶುದ್ಧಿಗೊಳಿಸುವ ಯಜ್ಞಗಳನ್ನು ಸಮರ್ಪಿಸುವುದಕ್ಕೆ ಅವರು ಸಹಾಯ ಮಾಡುವರು. ಹೀಗಿರುವುದರಿಂದ ಇಸ್ರೇಲರು ಪವಿತ್ರವಸ್ತುಗಳ ಅತೀ ಸಮೀಪಕ್ಕೆ ಬಂದರೂ ಅವರಿಗೆ ಅಪಾಯವು ಸಂಭವಿಸುವುದಿಲ್ಲ.”


ಯೆಹೋವನು ಲೇವಿಯರ ವಿಷಯದಲ್ಲಿ ಆಜ್ಞಾಪಿಸಿದಂತೆ ಮೋಶೆ ಆರೋನರೂ ಇಸ್ರೇಲರ ಸಮೂಹದವರೆಲ್ಲರೂ ಮಾಡಿದರು.


ಆಗ ಲೇವಿಯರು ದೇವದರ್ಶನಗುಡಾರದಲ್ಲಿ ಆರೋನನ ಮತ್ತು ಅವನ ಪುತ್ರರ ಮೇಲ್ವಿಚಾರಣೆಯಲ್ಲಿ ಕೆಲಸ ಮಾಡಲು ಅರ್ಹರಾದರು. ಯೆಹೋವನು ಮೋಶೆಗೆ ಲೇವಿಯರ ಬಗ್ಗೆ ಆಜ್ಞಾಪಿಸಿದ್ದಂತೆಯೇ ಅವರಿಗೆ ಮಾಡಲಾಯಿತು.


“ನಾನು ಮತ್ತೆ ಕೋಪಗೊಂಡು ಇಸ್ರೇಲರನ್ನು ದಂಡಿಸದಂತೆ ನೀವು ಪವಿತ್ರಸ್ಥಳವನ್ನು ಮತ್ತು ಯಜ್ಞವೇದಿಕೆಯನ್ನು ಕಾಯಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು