ಅರಣ್ಯಕಾಂಡ 1:51 - ಪರಿಶುದ್ದ ಬೈಬಲ್51 ಪವಿತ್ರ ಗುಡಾರವನ್ನು ತೆಗೆದುಕೊಂಡು ಹೋಗುವಾಗಲೆಲ್ಲಾ ಲೇವಿಯರೇ ಅದನ್ನು ಬಿಚ್ಚಬೇಕು, ಇಳಿಸುವಾಗಲೆಲ್ಲಾ ಲೇವಿಯರೇ ಅದನ್ನು ಹಾಕಬೇಕು. ಪವಿತ್ರ ಗುಡಾರವನ್ನು ನೋಡಿಕೊಳ್ಳುವವರು ಅವರೇ. ಲೇವಿ ಕುಲಕ್ಕೆ ಸೇರದ ಯಾವನಾದರೂ ಅದರ ಸಮೀಪಕ್ಕೆ ಬಂದರೆ, ಅವನಿಗೆ ಮರಣಶಿಕ್ಷೆಯಾಗಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201951 ಗುಡಾರವು ಹೊರಡುವಾಗ ಲೇವಿಯರೇ ಅದನ್ನು ಬಿಚ್ಚಬೇಕು; ಇಳಿದುಕೊಳ್ಳುವಾಗ ಲೇವಿಯರೇ ಅದನ್ನು ಹಾಕಬೇಕು. ಇತರರು ಹತ್ತಿರಕ್ಕೆ ಬಂದರೆ ಅವರಿಗೆ ಮರಣಶಿಕ್ಷೆಯಾಗಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)51 ಹೊರಡುವಾಗ ಆ ಗುಡಾರವನ್ನು ಲೇವಿಯರೇ ಬಿಚ್ಚಬೇಕು; ಇಳಿದುಕೊಳ್ಳುವಾಗ ಲೇವಿಯರೇ ಅದನ್ನು ಹಾಕಬೇಕು. ಇತರರು ಹತ್ತಿರಕ್ಕೆ ಬಂದರೆ ಅವರಿಗೆ ಮರಣಶಿಕ್ಷೆಯಾಗಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)51 ಹೊರಡುವಾಗ ಆ ಗುಡಾರವನ್ನು ಲೇವಿಯರೇ ಬಿಚ್ಚಬೇಕು; ಇಳಿಯುವಾಗ ಲೇವಿಯರೇ ಅದನ್ನು ಹಾಕಬೇಕು. ಇತರರು ಹತ್ತಿರಕ್ಕೆ ಬಂದರೆ ಅವರಿಗೆ ಮರಣಶಿಕ್ಷೆಯಾಗಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ51 ದೇವದರ್ಶನ ಗುಡಾರವು ಹೊರಡುವಾಗ ಲೇವಿಯರು ಅದನ್ನು ತೆಗೆಯಲಿ. ಗುಡಾರವು ಇಳಿಯುವಾಗ ಲೇವಿಯರು ಅದನ್ನು ನಿಲ್ಲಿಸಲಿ. ಬೇರೆ ಯಾವನಾದರೂ ಸಮೀಪಿಸಿದರೆ ಅವನು ಸಾಯಬೇಕು. ಅಧ್ಯಾಯವನ್ನು ನೋಡಿ |
ಆದರೆ ಆರೋನನೇ, ನೀನೂ ನಿನ್ನ ಪುತ್ರರೂ ನಿಮ್ಮ ಯಾಜಕತ್ವವನ್ನು ಕಾಪಾಡಿಕೊಳ್ಳಬೇಕು. ಅಯೋಗ್ಯನಾದ ಯಾವನೂ ಯಜ್ಞವೇದಿಕೆಯ ಬಳಿ ಕೆಲಸ ಮಾಡುವುದಕ್ಕಾಗಲೀ ತೆರೆಯ ಆಚೆಯಿರುವ ಮಹಾ ಪವಿತ್ರಸ್ಥಳಕ್ಕೆ ಪ್ರವೇಶಿಸುವುದಕ್ಕಾಗಲೀ ನೀವು ಬಿಡಕೂಡದು. ನಾನು ನಿಮಗೆ ಅಮೂಲ್ಯವಾದ ಯಾಜಕತ್ವವನ್ನು ಕೊಟ್ಟಿದ್ದೇನೆ. ಆದರೆ ಅಯೋಗ್ಯನಾದ ಯಾವನಾದರೂ ಯಾಜಕತ್ವದ ಈ ಕರ್ತವ್ಯಗಳನ್ನು ಮಾಡಲು ಪ್ರಯತ್ನಿಸಿದರೆ ಅವನು ಕೊಲ್ಲಲ್ಪಡುವನು.”