ಅರಣ್ಯಕಾಂಡ 1:53 - ಪರಿಶುದ್ದ ಬೈಬಲ್53 ಆದರೆ ಲೇವಿಯರು ಮಾತ್ರ ಪವಿತ್ರ ಗುಡಾರದ ಸುತ್ತಲೂ ತಮ್ಮ ಪಾಳೆಯ ಮಾಡಿಕೊಳ್ಳಬೇಕು. ಹೀಗೆ ಲೇವಿಯರು ಒಡಂಬಡಿಕೆಯ ಪವಿತ್ರ ಗುಡಾರವನ್ನು ಕಾಯುವರು; ಇಸ್ರೇಲರಿಗೆ ಯಾವ ಕೇಡೂ ಸಂಭವಿಸದಂತೆ ಅವರು ಪವಿತ್ರ ಗುಡಾರವನ್ನು ಸಂರಕ್ಷಿಸುವರು.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201953 ಆದರೆ ಲೇವಿಯರು ಮಾತ್ರ ತಮ್ಮ ಡೇರೆಗಳನ್ನು ದೇವದರ್ಶನದ ಗುಡಾರದ ಸುತ್ತಲೂ ಹಾಕಿಕೊಳ್ಳಬೇಕು. ಹೀಗಾದರೆ ಯೆಹೋವನ ಕೋಪವು ಇಸ್ರಾಯೇಲರ ಮೇಲೆ ಬರುವುದಕ್ಕೆ ಆಸ್ಪದವಿರುವುದಿಲ್ಲ. ಲೇವಿಯರು ದೇವದರ್ಶನದ ಗುಡಾರವನ್ನು ಕಾಯುವವರಾಗಿರಬೇಕು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)53 ಲೇವಿಯರು ಮಾತ್ರ ತಮ್ಮ ಡೇರೆಗಳನ್ನು ದೇವದರ್ಶನದ ಗುಡಾರದ ಸುತ್ತಲೂ ಹಾಕಿಕೊಳ್ಳಬೇಕು. ಹೀಗೆ ಮಾಡಿದರೆ ನನ್ನ ಕೋಪ ಇಸ್ರಯೇಲರ ಮೇಲೆ ಎರಗಲು ಆಸ್ಪದವಿರದು. ಲೇವಿಯರು ದೇವದರ್ಶನದ ಗುಡಾರವನ್ನು ಕಾಯುವವರಾಗಿರಬೇಕು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)53 ಲೇವಿಯರು ಮಾತ್ರ ತಮ್ಮ ಡೇರೆಗಳನ್ನು ದೇವದರ್ಶನದ ಗುಡಾರದ ಸುತ್ತಲೂ ಹಾಕಿಕೊಳ್ಳಬೇಕು. ಹೀಗಾದರೆ [ಯೆಹೋವನ] ಕೋಪವು ಇಸ್ರಾಯೇಲ್ಯರ ಮೇಲೆ ಉಂಟಾಗುವದಕ್ಕೆ ಆಸ್ಪದವಿರುವದಿಲ್ಲ. ಲೇವಿಯರು ದೇವದರ್ಶನದ ಗುಡಾರವನ್ನು ಕಾಯುವವರಾಗಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ53 ಆದರೆ ಲೇವಿಯರು ಸಾಕ್ಷಿಯ ಗುಡಾರದ ಸುತ್ತಲೂ ಇಳಿದುಕೊಳ್ಳಬೇಕು. ಹೀಗೆ ಇಸ್ರಾಯೇಲರ ಸಭೆಯ ಮೇಲೆ ನನ್ನ ಕೋಪಕ್ಕೆ ಆಸ್ಪದವಿರದು. ಲೇವಿಯರು ಸಭೆಯ ಗುಡಾರ ಕಾಯುವ ಜವಾಬ್ದಾರಿಕೆಯುಳ್ಳವರಾಗಿರಬೇಕು.” ಅಧ್ಯಾಯವನ್ನು ನೋಡಿ |
ಬಳಿಕ ಮೋಶೆ ಆರೋನನೊಡನೆ ಮತ್ತು ಅವನ ಪುತ್ರರಾದ ಎಲ್ಲಾಜಾರ್ ಮತ್ತು ಈತಾಮಾರ್ ಇವರೊಡನೆ ಮಾತಾಡಿದನು. ಮೋಶೆ ಅವರಿಗೆ, “ನೀವು ದುಃಖದಿಂದ ನಿಮ್ಮ ತಲೆಕೂದಲನ್ನು ಕೆದರಿಕೊಳ್ಳಬೇಡಿರಿ; ನಿಮ್ಮ ಬಟ್ಟೆಗಳನ್ನು ಹರಿದುಕೊಳ್ಳಬೇಡಿರಿ. ಇಲ್ಲವಾದರೆ ನೀವೂ ಕೊಲ್ಲಲ್ಪಡುವಿರಿ. ಅಲ್ಲದೆ ಯೆಹೋವನು ಜನರೆಲ್ಲರ ಮೇಲೆ ಕೋಪಗೊಳ್ಳುವನು. ಆದರೆ ಯೆಹೋವನು ಬೆಂಕಿಯಿಂದ ನಾಶಮಾಡಿದವರ ಬಗ್ಗೆ ಇಸ್ರೇಲರೆಲ್ಲರು ಮತ್ತು ನಿಮ್ಮ ಬಂಧುಗಳು ದುಃಖಿಸಬಹುದು.
ಇಸ್ರೇಲರ ಮಧ್ಯದಿಂದ ನಾನು ಲೇವಿಯರನ್ನು ಆರಿಸಿಕೊಂಡಿದ್ದೇನೆ ಮತ್ತು ದೇವದರ್ಶನಗುಡಾರದಲ್ಲಿ ಇಸ್ರೇಲರ ಪರವಾಗಿ ಕೆಲಸ ಮಾಡಲೂ ಮತ್ತು ಇಸ್ರೇಲರಿಗೆ ದೋಷಪರಿಹಾರ ಮಾಡುವುದಕ್ಕೂ ನಾನು ಅವರನ್ನು ಆರೋನ ಮತ್ತು ಅವನ ಪುತ್ರರಿಗೆ ಒಪ್ಪಿಸಿಕೊಟ್ಟಿದ್ದೇನೆ. ಇಸ್ರೇಲರನ್ನು ಶುದ್ಧಿಗೊಳಿಸುವ ಯಜ್ಞಗಳನ್ನು ಸಮರ್ಪಿಸುವುದಕ್ಕೆ ಅವರು ಸಹಾಯ ಮಾಡುವರು. ಹೀಗಿರುವುದರಿಂದ ಇಸ್ರೇಲರು ಪವಿತ್ರವಸ್ತುಗಳ ಅತೀ ಸಮೀಪಕ್ಕೆ ಬಂದರೂ ಅವರಿಗೆ ಅಪಾಯವು ಸಂಭವಿಸುವುದಿಲ್ಲ.”
ಸರ್ವಶಕ್ತನಾದ ಯೆಹೋವನು ಪ್ರವಾದಿಗಳ ಬಗ್ಗೆ ಹೀಗೆನ್ನುತ್ತಾನೆ, “ನಾನು ಆ ಪ್ರವಾದಿಗಳನ್ನು ದಂಡಿಸುವೆನು. ಆ ಶಿಕ್ಷೆಯು ವಿಷಪೂರಿತ ಆಹಾರದಂತೆಯೂ ನೀರಿನಂತೆಯೂ ಇರುವುದು. ಪ್ರವಾದಿಗಳು ಒಂದು ಆಧ್ಯಾತ್ಮಿಕ ವ್ಯಾಧಿಯನ್ನು ಪ್ರಾರಂಭಿಸಿದರು. ಆ ವ್ಯಾಧಿಯು ಇಡೀ ದೇಶದಲ್ಲೆಲ್ಲ ಪ್ರಸರಿಸಿತು. ಆದ್ದರಿಂದ ನಾನು ಆ ಪ್ರವಾದಿಗಳನ್ನು ಶಿಕ್ಷಿಸುತ್ತೇನೆ. ಆ ವ್ಯಾಧಿಯು ಆ ಪ್ರವಾದಿಗಳಿಂದ ಜೆರುಸಲೇಮಿಗೆ ಬಂದಿತು.”
ಒಡಂಬಡಿಕೆಯ ಪವಿತ್ರ ಗುಡಾರವನ್ನು ನೋಡಿಕೊಳ್ಳುವ ಜವಾಬ್ದಾರಿಯು ಲೇವಿಯರಿಗೆ ಸೇರಿರುವುದರಿಂದ ಅವರಿಗೆ ಅದನ್ನು ತಿಳಿಸು. ಅವರು ಅದನ್ನೂ ಅದರ ಉಪಕರಣಗಳನ್ನೂ ಮತ್ತು ಅದಕ್ಕೆ ಸಂಬಂಧಿಸಿದ ಪ್ರತಿಯೊಂದನ್ನೂ ನೋಡಿಕೊಳ್ಳಬೇಕು. ಅವರು ಪವಿತ್ರ ಗುಡಾರವನ್ನೂ ಅದರಲ್ಲಿರುವ ಪ್ರತಿಯೊಂದನ್ನೂ ಹೊತ್ತುಕೊಂಡು ಹೋಗಬೇಕು. ಅವರು ಅದರ ಸುತ್ತಲೂ ಪಾಳೆಯಮಾಡಿಕೊಂಡು ಅದನ್ನು ನೋಡಿಕೊಳ್ಳಬೇಕು.
ಅವರು ಪ್ರತಿದಿನವೂ ಮುಂಜಾನೆ ಸಾಯಂಕಾಲಗಳಲ್ಲಿ ಸರ್ವಾಂಗಹೋಮಗಳನ್ನೂ ಧೂಪಗಳನ್ನೂ ಅರ್ಪಿಸುವರು; ಮೇಜಿನ ಮೇಲೆ ನೈವೇದ್ಯದ ರೊಟ್ಟಿಗಳನ್ನಿಡುವರು. ಅವರು ಬಂಗಾರದ ದೀಪಸ್ತಂಭಗಳ ಮೇಲಿನ ಆರತಿಗಳನ್ನು ಸರಿಯಾಗಿ ನೋಡಿಕೊಳ್ಳುವುದರಿಂದ ಅವು ಹಗಲಿನಲ್ಲಿಯೂ ಸಾಯಂಕಾಲದಲ್ಲಿಯೂ ಪ್ರಕಾಶಮಾನವಾಗಿ ಉರಿಯುವವು. ನಾವು ಬಹಳ ಎಚ್ಚರಿಕೆಯಿಂದ ನಮ್ಮ ದೇವರ ಸೇವೆಮಾಡುತ್ತೇವೆ. ಆದರೆ ನೀವು ಆತನನ್ನು ತೊರೆದುಬಿಟ್ಟಿದ್ದೀರಿ.