ಅರಣ್ಯಕಾಂಡ 10:1 - ಪರಿಶುದ್ದ ಬೈಬಲ್1 ಯೆಹೋವನು ಮೋಶೆಗೆ ಆಜ್ಞಾಪಿಸಿದ್ದೇನೆಂದರೆ: ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಯೆಹೋವನು ಮೋಶೆಯ ಸಂಗಡ ಮಾತನಾಡಿ, ಆಜ್ಞಾಪಿಸಿದ್ದೇನೆಂದರೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಸರ್ವೇಶ್ವರ ಸ್ವಾಮಿ ಮೋಶೆಗೆ ಹೀಗೆಂದು ಆಜ್ಞಾಪಿಸಿದರು: ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಯೆಹೋವನು ಮೋಶೆಗೆ ಆಜ್ಞಾಪಿಸಿದ್ದೇನಂದರೆ - ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಯೆಹೋವ ದೇವರು ಮೋಶೆಯ ಸಂಗಡ ಮಾತನಾಡಿ ಅವನಿಗೆ ಹೇಳಿದ್ದು: ಅಧ್ಯಾಯವನ್ನು ನೋಡಿ |
ಯಾಜಕರು ತಮ್ಮ ಕೆಲಸಗಳನ್ನು ಮಾಡಲು ತಮ್ಮ ತಮ್ಮ ಸ್ಥಳಗಳಲ್ಲಿ ತಯಾರಾಗಿ ನಿಂತಿದ್ದರು. ಲೇವಿಕುಲದ ಗಾಯಕರು ತಮ್ಮ ವಾದ್ಯಗಳೊಂದಿಗೆ ದೇವರನ್ನು ಸ್ತುತಿಸಲು ನಿಂತಿದ್ದರು. ಆ ವಾದ್ಯಗಳನ್ನು ಅರಸನಾದ ದಾವೀದನು ದೇವರನ್ನು ಸ್ತುತಿಸುವದಕ್ಕೋಸ್ಕರ ತಯಾರಿಸಿದ್ದನು. ಯಾಜಕರೂ ಲೇವಿಯರೂ, “ದೇವರಾದ ಯೆಹೋವನ ಕೃಪೆಯು ನಿರಂತರವಾದದ್ದು” ಎಂದು ಹೇಳುತ್ತಿದ್ದರು. ಯಾಜಕರು ಲೇವಿಯರಿಗೆ ಎದುರಾಗಿ ನಿಂತುಕೊಂಡು ತುತ್ತೂರಿಯನ್ನು ಊದಿದರು. ಇಸ್ರೇಲರೆಲ್ಲರೂ ನಿಂತುಕೊಂಡರು.
ಅವನು ಮುಂಭಾಗದ ಪ್ರವೇಶ ದ್ವಾರದಲ್ಲಿದ್ದ ರಾಜಸ್ತಂಭದ ಬಳಿ ನಿಂತಿದ್ದನು. ಸೇನಾಧಿಪತಿಗಳೂ ಅವರ ಜನರೂ ತುತ್ತೂರಿಯನ್ನು ಊದಿ ರಾಜನ ಬಳಿಯಲ್ಲಿಯೇ ನಿಂತಿದ್ದರು. ದೇಶದ ಪ್ರಜೆಗಳು ಸಂತೋಷದಿಂದ ತುತ್ತೂರಿಯನ್ನೂದಿದರು. ಗಾಯಕರು ವಾದ್ಯಗಳನ್ನು ಬಾರಿಸುತ್ತಿದ್ದರು. ಅವರು ಜನರನ್ನು ಸ್ತೋತ್ರಗೀತೆಯಲ್ಲಿ ನಡಿಸುತ್ತಿದ್ದರು. ಇದೆಲ್ಲವನ್ನು ಅತಲ್ಯಳು ನೋಡಿ ತನ್ನ ಬಟ್ಟೆಯನ್ನು ಹರಿದು, “ದ್ರೋಹ, ದ್ರೋಹ” ಎಂದು ಕಿರುಚಿದಳು.