Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 10:11 - ಪರಿಶುದ್ದ ಬೈಬಲ್‌

11 ಇಸ್ರೇಲರು ಈಜಿಪ್ಟನ್ನು ಬಿಟ್ಟ ನಂತರದ ಎರಡನೆಯ ವರ್ಷದ ಎರಡನೆಯ ತಿಂಗಳಿನ ಇಪ್ಪತ್ತನೆಯ ದಿನದಲ್ಲಿ ಮೇಘವು ಒಡಂಬಡಿಕೆಯ ಗುಡಾರದಿಂದ ಮೇಲೆ ಎದ್ದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಎರಡನೆಯ ವರ್ಷದ ಎರಡನೆಯ ತಿಂಗಳಿನ ಇಪ್ಪತ್ತನೆಯ ದಿನದಲ್ಲಿ ದೇವದರ್ಶನದ ಗುಡಾರದ ಮೇಲಿದ್ದ ಮೇಘವು ಮೇಲಕ್ಕೆ ಎದ್ದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಎರಡನೆಯ ವರ್ಷದ ಎರಡನೆಯ ತಿಂಗಳಿನ ಇಪ್ಪತ್ತನೆಯ ದಿನ ದೇವದರ್ಶನದ ಗುಡಾರದ ಮೇಲಿದ್ದ ಮೇಘವು ಮೇಲಕ್ಕೆ ಎದ್ದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಎರಡನೆಯ ವರುಷದ ಎರಡನೆಯ ತಿಂಗಳಿನ ಇಪ್ಪತ್ತನೆಯ ದಿನದಲ್ಲಿ ದೇವದರ್ಶನದ ಗುಡಾರದ ಮೇಲಿದ್ದ ಮೇಘವು ಮೇಲಕ್ಕೆ ಎದ್ದದರಿಂದ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಎರಡನೆಯ ವರ್ಷದ ಎರಡನೆಯ ತಿಂಗಳಿನ ಇಪ್ಪತ್ತನೆಯ ದಿವಸದಲ್ಲಿ ಮೇಘವು ಸಾಕ್ಷಿ ಗುಡಾರದ ಮೇಲಿನಿಂದ ಎದ್ದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 10:11
8 ತಿಳಿವುಗಳ ಹೋಲಿಕೆ  

ಅಂಥವರು ಎರಡನೆಯ ತಿಂಗಳಿನ ಹದಿನಾಲ್ಕನೆಯ ದಿನದ ನಸುಸಂಜೆ ವೇಳೆಯಲ್ಲಿ ಪಸ್ಕಹಬ್ಬವನ್ನು ಆಚರಿಸಬೇಕು. ಆ ಸಮಯದಲ್ಲಿ ಅವರು ಪಸ್ಕದ ಕುರಿಮರಿಯ ಮಾಂಸವನ್ನು ಹುಳಿಯಿಲ್ಲದ ರೊಟ್ಟಿಗಳೊಡನೆ ಮತ್ತು ಕಹಿಯಾದ ಸೊಪ್ಪುಗಳೊಡನೆ ಊಟಮಾಡಬೇಕು.


ಜನರು ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನದ ನಸುಸಂಜೆಯ ವೇಳೆಯಲ್ಲಿ ಸೀನಾಯಿ ಮರುಭೂಮಿಯಲ್ಲಿ ಇದನ್ನು ಆಚರಿಸಿದರು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆ ಪ್ರತಿಯೊಂದನ್ನೂ ಮಾಡಿದರು.


ಇಸ್ರೇಲರು ಈಜಿಪ್ಟ್ ದೇಶವನ್ನು ಬಿಟ್ಟುಬಂದ ನಂತರ ಎರಡನೆ ವರ್ಷದ ಮೊದಲನೆಯ ತಿಂಗಳಲ್ಲಿ ಸೀನಾಯಿ ಮರುಭೂಮಿಯಲ್ಲಿ ಯೆಹೋವನು ಮೋಶೆಯೊಡನೆ ಮಾತಾಡಿದನು. ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ:


ಯೆಹೋವನು ದೇವದರ್ಶನಗುಡಾರದೊಳಗೆ ಮೋಶೆಯೊಡನೆ ಮಾತಾಡಿದನು. ಆಗ ದೇವದರ್ಶನಗುಡಾರವು ಸೀನಾಯಿ ಮರುಭೂಮಿಯಲ್ಲಿತ್ತು. ಇಸ್ರೇಲರು ಈಜಿಪ್ಟನ್ನು ಬಿಟ್ಟ ಎರಡನೆಯ ವರ್ಷದ ಎರಡನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಇದು ನಡೆಯಿತು. ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ:


ಆದ್ದರಿಂದ ಪವಿತ್ರಗುಡಾರವು, ಅವರು ಈಜಿಪ್ಟನ್ನು ಬಿಟ್ಟಕಾಲದಿಂದ ಎರಡನೆಯ ವರ್ಷದ ಮೊದಲನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಸ್ಥಾಪಿಸಲ್ಪಟ್ಟಿತು.


“ಮೊದಲನೆಯ ತಿಂಗಳಿನ ಮೊದಲನೆಯ ದಿನದಲ್ಲಿ ದೇವದರ್ಶನಗುಡಾರವಾದ ಪವಿತ್ರಗುಡಾರವನ್ನು ಎತ್ತಿನಿಲ್ಲಿಸು.


“ನಮ್ಮ ದೇವರಾದ ಯೆಹೋವನು ಹೋರೇಬ್ ಬೆಟ್ಟದಲ್ಲಿ ನಮ್ಮೊಂದಿಗೆ ಮಾತಾಡಿದನು. ಆತನು ಹೇಳಿದ್ದೇನೆಂದರೆ: ‘ನೀವು ಈ ಪ್ರದೇಶಕ್ಕೆ ಬಂದು ಬಹಳ ಕಾಲವಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು