Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 10:2 - ಪರಿಶುದ್ದ ಬೈಬಲ್‌

2 “ನೀನು ಬೆಳ್ಳಿಯ ತಗಡುಗಳಿಂದ ಎರಡು ತುತ್ತೂರಿಗಳನ್ನು ಮಾಡಿಸಬೇಕು. ಜನಸಮೂಹದವರನ್ನು ಒಟ್ಟಾಗಿ ಕರೆಸುವುದಕ್ಕೂ ಅವರು ಯಾವಾಗ ಹೊರಡಬೇಕೆಂದು ಹೇಳುವುದಕ್ಕೂ ಇವುಗಳನ್ನು ಉಪಯೋಗಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ನೀನು ಬೆಳ್ಳಿಯ ತಗಡಿನಿಂದ ಎರಡು ತುತ್ತೂರಿಗಳನ್ನು ಮಾಡಿಸಬೇಕು. ಜನಸಮೂಹದವರನ್ನು ಕೂಡಿಸುವುದಕ್ಕೂ ಮತ್ತು ದಂಡುಗಳನ್ನು ಹೊರಡಿಸುವುದಕ್ಕೂ ಅವುಗಳನ್ನು ಉಪಯೋಗಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 “ನೀನು ಬೆಳ್ಳಿಯ ತಗಡಿನಿಂದ ಎರಡು ಕಹಳೆಗಳನ್ನು ಮಾಡಿಸು. ಜನರನ್ನು ಸಭೆಸೇರಿಸುವುದಕ್ಕೂ ಹಾಗೂ ದಂಡನ್ನು ಹೊರಡಿಸುವುದಕ್ಕೂ ಅವುಗಳನ್ನು ಉಪಯೋಗಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನೀನು ಬೆಳ್ಳಿಯ ತಗಡಿನಿಂದ ಎರಡು ತುತೂರಿಗಳನ್ನು ಮಾಡಿಸಬೇಕು. ಜನಸಮೂಹದವರನ್ನು ಕೂಡಕರಿಸುವದಕ್ಕೂ ದಂಡುಗಳನ್ನು ಹೊರಡಿಸುವದಕ್ಕೂ ಅವುಗಳನ್ನು ಉಪಯೋಗಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 “ನಕ್ಷೆಯ ಕೆಲಸದಿಂದ ಹೊಡೆದು ಮಾಡಿದ ಬೆಳ್ಳಿಯ ತಗಡಿನ ಎರಡು ತುತೂರಿಗಳನ್ನು ನೀನು ಮಾಡಿಸಬೇಕು. ಸಭೆಯನ್ನು ಕರೆಯುವುದಕ್ಕಾಗಿಯೂ, ಪಾಳೆಯಗಳ ಪ್ರಯಾಣಕ್ಕಾಗಿಯೂ ನೀನು ಅವುಗಳನ್ನು ಉಪಯೋಗಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 10:2
14 ತಿಳಿವುಗಳ ಹೋಲಿಕೆ  

ಉಪವಾಸ ದಿನವನ್ನು ಗೊತ್ತುಪಡಿಸಿರಿ. ಆ ದಿನಕ್ಕಾಗಿ ಜನರನ್ನು ಒಟ್ಟುಗೂಡಿಸಿರಿ. ದೇಶದಲ್ಲಿ ವಾಸವಾಗಿರುವ ನಾಯಕರುಗಳೆಲ್ಲರನ್ನೂ ಜನರನ್ನೂ ಒಟ್ಟುಗೂಡಿಸಿರಿ; ನಿಮ್ಮ ದೇವರಾದ ಯೆಹೋವನ ಆಲಯಕ್ಕೆ ಅವರನ್ನೆಲ್ಲ ಪ್ರಾರ್ಥನೆಗಾಗಿ ಕರೆದುಕೊಂಡು ಬನ್ನಿರಿ.


“ನಿಮ್ಮ ಅಯೋಗ್ಯವಾದ ಯಜ್ಞಗಳನ್ನು ನನ್ನ ಬಳಿಗೆ ತರಬೇಡಿ; ನಿಮ್ಮ ಧೂಪವು ನನಗೆ ಅಸಹ್ಯ; ನಿಮ್ಮ ಅಮಾವಾಸ್ಯೆಯನ್ನಾಗಲಿ ಹಬ್ಬವನ್ನಾಗಲಿ ಸಬ್ಬತ್ತನ್ನಾಗಲಿ ನಾನು ಸಹಿಸಲಾರೆ. ನಿಮ್ಮ ಪವಿತ್ರಕೂಟಗಳಲ್ಲಿ ನೀವು ಮಾಡುವ ದುಷ್ಟತನವನ್ನು ನಾನು ಸಹಿಸಲಾರೆ.


ಅಮಾವಾಸ್ಯೆಯಲ್ಲಿಯೂ ನಮ್ಮ ರಜಾಕಾಲವಾದ ಪೂರ್ಣಿಮೆಯಲ್ಲಿಯೂ ತುತ್ತೂರಿಯನ್ನು ಊದಿರಿ.


ಒಬ್ಬನೇ ಪ್ರಭು, ಒಂದೇ ನಂಬಿಕೆ, ಒಂದೇ ದೀಕ್ಷಾಸ್ನಾನ.


“ಯೆಹೋವನಾಲಯದ ಕಾವಲುಗಾರನಂತೆ ತುತ್ತೂರಿಯನ್ನು ನಿನ್ನ ತುಟಿಗಳಲ್ಲಿಟ್ಟು ಊದು. ಇಸ್ರೇಲರು ನನ್ನ ಕಟ್ಟಳೆಗಳಿಗೆ ಅವಿಧೇಯರಾಗಿ ನನ್ನ ಒಡಂಬಡಿಕೆಯನ್ನು ಮುರಿದಿದ್ದಾರೆ.


ಯೆಹೋವನೇ, ನಿನ್ನ ಸದ್ಭಕ್ತರು ನಿಜವಾಗಿಯೂ ಸಂತೋಷವಾಗಿದ್ದಾರೆ. ಅವರು ನಿನ್ನ ಕರುಣೆಯ ಬೆಳಕಿನಲ್ಲಿ ವಾಸಿಸುತ್ತಿದ್ದಾರೆ.


ಯಜ್ಞವೇದಿಕೆಯ ಪೂರ್ವ ಭಾಗದಲ್ಲಿ ಲೇವಿಯರ ಗಾಯಕರು ನಿಂತರು. ಆಸಾಫನ, ಹೇಮಾನನ ಮತ್ತು ಯೆದುತೂನನ ಗಾಯಕ ವೃಂದದವರೆಲ್ಲರೂ ಅಲ್ಲಿ ಇದ್ದರು. ಅವರ ಗಂಡುಮಕ್ಕಳೂ ಕುಟುಂಬದವರೂ ಅಲ್ಲಿದ್ದರು. ಗಾಯಕರೆಲ್ಲರೂ ಬಿಳೀ ನಾರುಮಡಿಯ ಬಟ್ಟೆಗಳನ್ನು ಉಟ್ಟಿದ್ದರು. ತಾಳ, ತಂತಿವಾದ್ಯಗಳನ್ನು ಹಿಡಿದುಕೊಂಡಿದ್ದರು. ಗಾಯಕರೊಂದಿಗೆ ನೂರಿಪ್ಪತ್ತು ಮಂದಿ ಯಾಜಕರು ತುತ್ತೂರಿಯನ್ನೂದಿದರು.


ಜನರು ದೇವಾಲಯಕ್ಕೆ ಹಣವನ್ನು ಕೊಟ್ಟರು. ಆದರೆ ಯಾಜಕರು ಆ ಹಣವನ್ನು ಬೆಳ್ಳಿಯ ಬಟ್ಟಲು, ಕತ್ತರಿ, ಬೋಗುಣಿ, ತುತ್ತೂರಿ ಅಥವಾ ಬೆಳ್ಳಿಬಂಗಾರಗಳ ಪಾತ್ರೆಗಳಿಗೆ ಉಪಯೋಗಿಸದೆ ಕೆಲಸಗಾರರ ವೇತನಕ್ಕೆ ಉಪಯೋಗಿಸಿದರು. ಆ ಕೆಲಸಗಾರರು ದೇವಾಲಯವನ್ನು ಸರಿಪಡಿಸಿದರು.


ಆದರೆ ಜನಸಮುದಾಯವು ಕೂಡಿಬರಬೇಕಾದಾಗ ತುತ್ತೂರಿಗಳನ್ನು ಲಘುಸ್ವರದಲ್ಲಿ ಊದಿಸಬೇಕೇ ಹೊರತು ಆರ್ಭಟ ಸ್ವರದಲ್ಲಲ್ಲ.


“ಬಳಿಕ ಒಂದು ದೀಪಸ್ತಂಭವನ್ನು ಶುದ್ಧಬಂಗಾರದಿಂದ ಮಾಡಿಸಬೇಕು. ಅದರ ಬುಡವನ್ನೂ ಕಂಬವನ್ನೂ ಕಸೂತಿ ಕೆಲಸದಿಂದ ಮಾಡಿಸಬೇಕು. ಆ ದೀಪಸ್ತಂಭವೆಲ್ಲಾ ಅಖಂಡವಾಗಿದ್ದು ಪುಷ್ಪಪಾತ್ರೆಗಳಂತೆಯೂ ಅಲಂಕಾರವಾಗಿ ಕೆತ್ತಲ್ಪಡಬೇಕು.


ಬಳಿಕ ಕೆರೂಬಿಯರ ಎರಡು ಬಂಗಾರದ ಆಕಾರಗಳನ್ನು ಮಾಡಿಸಿ ಕೃಪಾಸನದ ಎರಡು ಕೊನೆಗಳಲ್ಲಿ ಇಡಬೇಕು.


ಯೆಹೋವನು ಮೋಶೆಗೆ ಆಜ್ಞಾಪಿಸಿದ್ದೇನೆಂದರೆ:


“ಈ ಸಂದೇಶವನ್ನು ಯೆಹೂದ ಜನರಲ್ಲಿ ಸಾರಿರಿ: ಜೆರುಸಲೇಮ್ ನಗರದ ಪ್ರತಿಯೊಬ್ಬನಿಗೂ ದೇಶದಲ್ಲೆಲ್ಲಾ ತುತ್ತೂರಿಗಳನ್ನು ಊದಿರಿ ಎಂದು ಹೇಳಿರಿ. ದೊಡ್ಡ ಧ್ವನಿಯಲ್ಲಿ ‘ಒಂದು ಕಡೆ ಸೇರೋಣ ಬನ್ನಿ, ರಕ್ಷಣೆಗಾಗಿ ಭದ್ರವಾದ ನಗರಗಳಿಗೆ ಓಡಿಹೋಗೋಣ ಬನ್ನಿ’ ಎಂದು ಕೂಗಿ ಹೇಳಿರಿ.


ಚೀಯೋನಿನಲ್ಲಿ ತುತ್ತೂರಿಯನ್ನೂದಿರಿ. ನನ್ನ ಪವಿತ್ರ ಪರ್ವತದಲ್ಲಿ ಧ್ವನಿಯೆತ್ತಿ ಎಚ್ಚರಿಕೆ ನೀಡಿರಿ. ದೇಶದಲ್ಲಿ ವಾಸಿಸುವ ಎಲ್ಲಾ ಜನರು ಭಯದಿಂದ ನಡುಗಲಿ. ಯೆಹೋವನ ಮಹಾದಿನವು ಬರಲಿದೆ; ಯೆಹೋವನ ಮಹಾದಿನವು ಹತ್ತಿರವೇ ಇದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು