Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 10:33 - ಪರಿಶುದ್ದ ಬೈಬಲ್‌

33 ಅವರು ಯೆಹೋವನ ಬೆಟ್ಟದಿಂದ ಹೊರಟು ಮೂರು ದಿನ ಪ್ರಯಾಣ ಮಾಡಿದರು. ಲೇವಿಯರು ಹೊತ್ತುಕೊಂಡಿದ್ದ ಯೆಹೋವನ ಒಡಂಬಡಿಕೆ ಪೆಟ್ಟಿಗೆಯು ಮತ್ತೆ ಪಾಳೆಯ ಹಾಕಲು ಯೋಗ್ಯವಾದ ಸ್ಥಳವನ್ನು ಎದುರು ನೋಡುತ್ತಾ ಜನರ ಮುಂದೆ ಮೂರು ದಿನಗಳವರೆಗೆ ಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಅವರು ಯೆಹೋವನ ಬೆಟ್ಟವನ್ನು ಬಿಟ್ಟು ಮೂರು ದಿನದ ಪ್ರಯಾಣದಷ್ಟು ದೂರ ಹೋದರು. ಇಳಿದುಕೊಳ್ಳಲು ಸೂಕ್ತವಾದ ಸ್ಥಳವನ್ನು ನೋಡುವುದಕ್ಕಾಗಿ ಯೆಹೋವನ ಒಡಂಬಡಿಕೆಯ ಮಂಜೂಷವು ಆ ಮೂರು ದಿನಗಳು ಅವರ ಮುಂದಾಗಿ ಹೋಗುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ಅವರು ಸರ್ವೇಶ್ವರನ ಬೆಟ್ಟವನ್ನು ಬಿಟ್ಟು ಮೂರುದಿನದ ಪ್ರಯಾಣದಷ್ಟು ದೂರಹೋದರು. ಇಳಿದುಕೊಳ್ಳಲು ಸೂಕ್ತವಾದ ಸ್ಥಳವನ್ನು ನೋಡಲು ಸರ್ವೇಶ್ವರನ ಒಡಂಬಡಿಕೆಯ ಮಂಜೂಷವು ಆ ಮೂರು ದಿವಸ ಅವರಿಗೆ ಮುಂದಾಗಿ ಹೋಗುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಅವರು ಯೆಹೋವನ ಬೆಟ್ಟವನ್ನು ಬಿಟ್ಟು ಮೂರು ದಿನದ ಪ್ರಯಾಣದಷ್ಟು ದೂರ ಹೋದರು. ಇಳುಕೊಳ್ಳತಕ್ಕ ಸ್ಥಳವನ್ನು ನೋಡುವದಕ್ಕೋಸ್ಕರ ಯೆಹೋವನ ಒಡಂಬಡಿಕೆಯ ಮಂಜೂಷವು ಆ ಮೂರು ದಿವಸ ಅವರ ಮುಂದಾಗಿ ಹೋಗುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ಅವರು ಯೆಹೋವ ದೇವರ ಪರ್ವತದ ಬಳಿಯಿಂದ ಮೂರು ದಿವಸಗಳವರೆಗೆ ಪ್ರಯಾಣಮಾಡಿದರು. ಯೆಹೋವ ದೇವರ ಒಡಂಬಡಿಕೆಯ ಮಂಜೂಷವು ಅವರಿಗೆ ಇಳಿದುಕೊಳ್ಳುವ ಸ್ಥಳವನ್ನು ಹುಡುಕುವುದಕ್ಕೆ ಅವರ ಮೂರು ದಿವಸಗಳ ಪ್ರಯಾಣದಲ್ಲಿ ಅವರ ಮುಂದಾಗಿ ಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 10:33
25 ತಿಳಿವುಗಳ ಹೋಲಿಕೆ  

ನೀವು ಪ್ರಯಾಣ ಮಾಡುತ್ತಿರುವಾಗ ಆತನು ನಿಮ್ಮ ಮುಂದೆ ಹೋದನು. ತಂಗಲು ಯೋಗ್ಯವಾದ ಸ್ಥಳದಲ್ಲಿ ನೀವು ಪಾಳೆಯ ಮಾಡಿಕೊಳ್ಳುವಂತೆ ಮಾಡಿದನು. ಹಗಲಲ್ಲಿ ಮೇಘಸ್ತಂಭವಾಗಿಯೂ ರಾತ್ರಿಯಲ್ಲಿ ಅಗ್ನಿಸ್ತಂಭವಾಗಿಯೂ ಆತನು ನಿಮಗೆ ಮಾರ್ಗದರ್ಶಕನಾಗಿದ್ದನು.


ಮೋಶೆಯ ಮಾವನ ಹೆಸರು ಇತ್ರೋನನು. ಇತ್ರೋನನು ಮಿದ್ಯಾನಿನ ಯಾಜಕನಾಗಿದ್ದನು. ಮೋಶೆಯು ಇತ್ರೋನನ ಕುರಿಗಳಿಗೆ ಕುರುಬನಾಗಿದ್ದನು. ಒಂದು ದಿನ, ಮೋಶೆಯು ಕುರಿಗಳನ್ನು ಮರುಭೂಮಿಯ ಪಶ್ಚಿಮಭಾಗಕ್ಕೆ ನಡೆಸಿಕೊಂಡು ದೇವರ ಬೆಟ್ಟವೆಂದು ಕರೆಯಲ್ಪಡುವ ಸೀನಾಯಿ ಎಂಬ ಹೋರೇಬ್ ಬೆಟ್ಟಕ್ಕೆ ಹೋದನು.


ಶಾಂತಿಸ್ವರೂಪನಾದ ದೇವರು ನಿಮಗೆ ಬೇಕಾದ ತನ್ನ ವರದಾನಗಳನ್ನು ದಯಪಾಲಿಸಲಿ ಎಂದು ನಾನು ಆತನಲ್ಲಿ ಪ್ರಾರ್ಥಿಸುತ್ತೇನೆ. ಏಕೆಂದರೆ ಆಗ ನೀವು ಆತನ ಇಷ್ಟಕ್ಕನುಸಾರವಾದವುಗಳನ್ನೆಲ್ಲಾ ಮಾಡಲು ಸಾಧ್ಯವಾಗುವುದು. ತನ್ನ ರಕ್ತವನ್ನು ಸುರಿಸಿ ಸಭೆಯೆಂಬ ಹಿಂಡಿಗೆ ಮಹಾಕುರುಬನಾಗಿರುವ ನಮ್ಮ ಪ್ರಭುವಾದ ಯೇಸುವನ್ನು ಸತ್ತವರೊಳಗಿಂದ ಮೇಲಕ್ಕೆ ಎಬ್ಬಿಸಿದವನು ದೇವರೇ. ಆತನ ರಕ್ತವು ಶಾಶ್ವತವಾದ ಹೊಸ ಒಡಂಬಡಿಕೆಯನ್ನಾರಂಭಿಸಿತು. ದೇವರು ತನಗೆ ಸಂತೋಷವನ್ನು ಉಂಟುಮಾಡುವ ಕಾರ್ಯಗಳನ್ನು ಯೇಸು ಕ್ರಿಸ್ತನ ಮೂಲಕ ನಮ್ಮಲ್ಲಿ ನಡೆಸಲಿ. ಯೇಸುವಿಗೆ ಎಂದೆಂದಿಗೂ ಮಹಿಮೆಯಾಗಲಿ. ಆಮೆನ್.


ಅವರನ್ನು ಈಜಿಪ್ಟಿನಿಂದ ಹೊರಗೆ ತಂದು, ನಾನು ಅವರಿಗಾಗಿ ಹುಡುಕಿಟ್ಟಿರುವ ದೇಶಕ್ಕೆ ಕರೆದುಕೊಂಡು ಹೋಗುವುದಾಗಿ ವಾಗ್ದಾನ ಮಾಡಿದೆನು. ಅದು ಹಾಲೂ ಜೇನೂ ಹರಿಯುವ ದೇಶವಾಗಿತ್ತು. ಅದು ಎಲ್ಲಾ ದೇಶಗಳಿಗಿಂತಲೂ ಸುಂದರವಾದ ದೇಶ.


ಯೆಹೋವನು ಹೀಗೆ ಹೇಳುತ್ತಾನೆ: “ಎರಡು ರಸ್ತೆಗಳು ಕೂಡುವಲ್ಲಿ ನಿಂತು ನೋಡಿರಿ. ‘ಒಳ್ಳೆಯ ರಸ್ತೆ ಎಲ್ಲಿದೆ?’ ಎಂದು ಕೇಳಿರಿ. ಆ ರಸ್ತೆಯನ್ನು ಹಿಡಿದು ನಡೆಯಿರಿ. ಹಾಗೆ ಮಾಡಿದರೆ ನಿಮಗೆ ವಿಶ್ರಾಂತಿ ಸಿಕ್ಕುವದು. ಆದರೆ ‘ನಾವು ಒಳ್ಳೆಯ ಹಾದಿಯ ಮೇಲೆ ನಡೆಯುವುದಿಲ್ಲ’ ಎಂದು ನೀವು ಹೇಳಿದ್ದೀರಿ.


ಆಗ ದೇಶದಲ್ಲಿ ನಿಮ್ಮ ಸಂಖ್ಯೆ ಬೆಳೆಯುವದು” ಇದು ಯೆಹೋವನ ನುಡಿ. “ಆ ಕಾಲದಲ್ಲಿ ಜನರು, ‘ನಮ್ಮಲ್ಲಿ ಯೆಹೋವನ ಒಡಂಬಡಿಕೆಯ ಪೆಟ್ಟಿಗೆ ಇದ್ದ ದಿನಗಳನ್ನು ಜ್ಞಾಪಿಸಿಕೊಳ್ಳುವ’ ಎಂದು ಹೇಳುವುದಿಲ್ಲ. ಅವರು, ‘ಪವಿತ್ರ ಪೆಟ್ಟಿಗೆ’ಯ ಬಗ್ಗೆ ಯೋಚನೆ ಸಹ ಮಾಡುವುದಿಲ್ಲ. ಅವರು ಅದನ್ನು ಜ್ಞಾಪಿಸುವುದೂ ಇಲ್ಲ. ಅದರ ಅಭಾವವನ್ನು ಮನಸ್ಸಿಗೆ ತಂದುಕೊಳ್ಳುವುದೂ ಇಲ್ಲ. ಅವರು ಇನ್ನೊಂದು ‘ಪವಿತ್ರ ಪೆಟ್ಟಿಗೆ’ಯನ್ನು ಸಿದ್ಧಪಡಿಸುವದಿಲ್ಲ.


ಯೆಹೋವನು ಹೇಳುವುದೇನೆಂದರೆ, “ಆಕಾಶವೇ ನನ್ನ ಸಿಂಹಾಸನ, ಭೂಮಿಯೇ ನನ್ನ ಪಾದಪೀಠ. ಹೀಗಿರಲು, ನೀವು ನನಗೊಂದು ಮನೆಯನ್ನು ಕಟ್ಟಲು ಸಾಧ್ಯವೆಂದು ಯೋಚಿಸುವಿರಾ? ವಿಶ್ರಮಿಸಿಕೊಳ್ಳಲು ನೀವು ಸ್ಥಳ ಮಾಡುವಿರಾ? ಇಲ್ಲ, ಸಾಧ್ಯವಿಲ್ಲ!


ಹಿಂದಿನ ಕಾಲದಲ್ಲಿ ದೇವರು ಅವರ ಸಂಗಡ ಮಾತನಾಡಿ, “ಇಲ್ಲಿ ವಿಶ್ರಾಂತಿಯ ಸ್ಥಳವಿದೆ, ಇದು ವಿಶ್ರಮಿಸುವ ಸ್ಥಳ. ಆಯಾಸಗೊಂಡವರೇ, ಬಂದು ವಿಶ್ರಮಿಸಿರಿ. ಇದು ಸಮಾಧಾನಕರವಾದ ಸ್ಥಳ” ಎಂದು ಹೇಳುತ್ತಿದ್ದನು. ಆದರೆ ಜನರಿಗೆ ಆತನ ಮಾತುಗಳನ್ನು ಕೇಳಲು ಇಷ್ಟವಾಗಲಿಲ್ಲ.


ಆದ್ದರಿಂದ ನಾನು ಕೋಪಗೊಂಡು ನನ್ನ ವಿಶ್ರಾಂತಿಯ ನಾಡನ್ನು ಅವರು ಪ್ರವೇಶಿಸಕೂಡದೆಂದು ನಾನು ಪ್ರಮಾಣ ಮಾಡಿದೆನು.”


ಇಸ್ರೇಲರ ಸೈನಿಕರು ಪಾಳೆಯಕ್ಕೆ ಹಿಂದಿರುಗಿದರು. ಇಸ್ರೇಲರ ಹಿರಿಯರು, “ಫಿಲಿಷ್ಟಿಯರು ನಮ್ಮನ್ನು ಸೋಲಿಸಲು ಯೆಹೋವನು ಅವಕಾಶ ನೀಡಿದ್ದೇಕೆ? ಶೀಲೋವಿನಿಂದ ಯೆಹೋವನ ಪವಿತ್ರ ಒಡಂಬಡಿಕೆಯ ಪೆಟ್ಟಿಗೆಯನ್ನು ತರಿಸೋಣ. ಈ ರೀತಿ ದೇವರು ನಮ್ಮೊಂದಿಗೆ ಯುದ್ಧರಂಗಕ್ಕೆ ಬರಲಿ. ಆತನು ನಮ್ಮನ್ನು ಶತ್ರುಗಳಿಂದ ರಕ್ಷಿಸುತ್ತಾನೆ” ಎಂದು ಹೇಳಿದರು.


ಇಸ್ರೇಲರು ಯೆಹೋವನಿಗೆ ಒಂದು ಪ್ರಶ್ನೆಯನ್ನು ಕೇಳಿದರು. (ಆ ಕಾಲದಲ್ಲಿ ಯೆಹೋವನ ಒಡಂಬಡಿಕೆಯ ಪೆಟ್ಟಿಗೆಯು ಬೇತೇಲಿನಲ್ಲಿತ್ತು.


ಅದಕ್ಕೆ ನೀವು, ‘ಯೆಹೋವನ ಒಡಂಬಡಿಕೆಯ ಪೆಟ್ಟಿಗೆಯು ಜೋರ್ಡನ್ ನದಿಯನ್ನು ದಾಟುತ್ತಿರುವಾಗ ಹರಿಯುವ ನೀರು ನಿಂತುಹೋಯಿತು’ ಎಂದು ಹೇಳಿರಿ. ಆ ಕಲ್ಲುಗಳು ಇಸ್ರೇಲರಿಗೆ ಸದಾಕಾಲ ಸಾಕ್ಷಿಗಳಾಗಿರುತ್ತವೆ” ಎಂದು ಹೇಳಿದನು.


ಯೆಹೋವನ ಒಡಂಬಡಿಕೆಯ ಪೆಟ್ಟಿಗೆಯನ್ನು ಹೊತ್ತುಕೊಂಡಿದ್ದ ಲೇವಿಯರಿಗೆ, “ನೀವು ಈ ಪುಸ್ತಕವನ್ನು ತೆಗೆದುಕೊಂಡು ದೇವದರ್ಶನಗುಡಾರದೊಳಗಿರುವ ಪೆಟ್ಟಿಗೆಯ ಪಕ್ಕದಲ್ಲಿಡಿರಿ. ಅದು ನಿಮಗೆ ವಿರುದ್ಧವಾದ ಸಾಕ್ಷಿಯಾಗಿರುವುದು.


ನಾನು ಕಲ್ಲಿನ ಹಲಗೆಗಳನ್ನು ತೆಗೆದುಕೊಂಡು ಬರಲು ಬೆಟ್ಟದ ಮೇಲೇರಿದ್ದೆನು. ಯೆಹೋವ ದೇವರು ನಿಮ್ಮೊಂದಿಗೆ ಮಾಡಿಕೊಂಡ ಒಡಂಬಡಿಕೆ ಆ ಹಲಗೆಯ ಮೇಲೆ ಬರೆಯಲ್ಪಟ್ಟಿತ್ತು. ನಾನು ಆ ಬೆಟ್ಟದ ಮೇಲೆ ನಲವತ್ತು ದಿವಸ ಹಗಲಿರುಳು ಕಳೆದೆನು. ನಾನು ಅನ್ನವನ್ನಾಗಲಿ ನೀರನ್ನಾಗಲಿ ತೆಗೆದುಕೊಳ್ಳಲಿಲ್ಲ.


ಆದ್ದರಿಂದ, ಇಸ್ರೇಲರು ತಮ್ಮ ಪ್ರಯಾಣವನ್ನು ಪ್ರಾರಂಭಿಸಿದರು. ಅವರು ಸೀನಾಯಿ ಮರುಭೂಮಿಯನ್ನು ಬಿಟ್ಟು ಮೇಘವು ಪಾರಾನ್ ಮರುಭೂಮಿಯಲ್ಲಿ ನಿಲ್ಲುವವರೆಗೆ ಪ್ರಯಾಣ ಮಾಡಿದರು.


ಆಗ ಮೋಶೆ ಬೆಟ್ಟವನ್ನೇರಿ ಯೆಹೋವನ ಸನ್ನಿಧಿಗೆ ಹೋದನು. ಮೋಶೆಯು ಬೆಟ್ಟದ ಮೇಲೆ ಇದ್ದಾಗ ಯೆಹೋವನು ಅವನಿಗೆ, “ಯಾಕೋಬನ ಮಹಾ ಕುಟುಂಬವಾದ ಇಸ್ರೇಲರಿಗೆ ಈ ಸಂಗತಿಗಳನ್ನು ಹೇಳು:


ಆ ಸಮಯದಲ್ಲಿ ಇಷಯನ ವಂಶದಿಂದ ಒಬ್ಬ ವಿಶೇಷ ವ್ಯಕ್ತಿಯು ಹುಟ್ಟುವನು. ಆತನು ಒಂದು ಧ್ವಜದಂತಿರುವನು. ಎಲ್ಲಾ ಜನಾಂಗಗಳು ಆತನ ಸುತ್ತಲೂ ಸೇರಿಬರಬೇಕೆಂದು ಈ ಧ್ವಜವು ತೋರಿಸುವುದು. ಆ ಜನಾಂಗಗಳು ತಾವು ಏನು ಮಾಡಬೇಕೆಂದು ಕೇಳುವರು. ಆತನಿರುವ ಸ್ಥಳವು ಮಹಿಮೆಯಿಂದ ತುಂಬುವದು.


ಯೆಹೋವನು ಹೀಗೆನ್ನುತ್ತಾನೆ: “ಶತ್ರುವಿನ ಖಡ್ಗಕ್ಕೆ ಕೆಲವು ಜನರು ಆಹುತಿಯಾಗಿಲ್ಲ. ಅವರಿಗೆ ಮರುಭೂಮಿಯಲ್ಲಿ ನೆಮ್ಮದಿ ದೊರೆಯುವುದು. ಇಸ್ರೇಲು ವಿಶ್ರಾಂತಿಯನ್ನು ಬಯಸಿ ಬರುವುದು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು