Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 10:35 - ಪರಿಶುದ್ದ ಬೈಬಲ್‌

35 ಜನರು ಪವಿತ್ರ ಪೆಟ್ಟಿಗೆಯನ್ನು ಎತ್ತಿಕೊಂಡು ಹೊರಡುವಾಗ, ಮೋಶೆಯು, “ಯೆಹೋವನೇ, ಎದ್ದೇಳು! ನಿನ್ನ ವೈರಿಗಳು ಚದರಿಹೋಗಲಿ, ನಿನ್ನ ಶತ್ರುಗಳು ಬೆನ್ನುಕೊಟ್ಟು ಓಡಿಹೋಗಲಿ” ಎಂದು ಹೇಳುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ಯೆಹೋವನ ಮಂಜೂಷ ಪೆಟ್ಟಿಗೆಯು ಹೊರಡುವಾಗ ಮೋಶೆ, “ಯೆಹೋವನೇ, ಎದ್ದು ಹೊರಡೋಣವಾಗಲಿ; ನಿನ್ನ ವೈರಿಗಳು ಚದರಿಹೋಗಲಿ; ನಿನ್ನ ಶತ್ರುಗಳು ಬೆನ್ನು ತೋರಿಸಿ ಓಡಿಹೋಗಲಿ” ಎಂದು ಹೇಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

35 ಸರ್ವೇಶ್ವರನ ಮಂಜೂಷ ಹೊರಡುವಾಗ ಮೋಶೆ, “ಹೊರಡೋಣವಾಗಲಿ ಸರ್ವೇಶ್ವರಾ, ಎಚ್ಚೆತ್ತು ಚದರಿಹೋಗಲಿ ನಿಮ್ಮ ಶತ್ರುಗಳು ಬೆಂಗೊಟ್ಟು ಓಡಿಹೋಗಲಿ ನಿಮ್ಮ ಹಗೆಗಾರರು” ಎಂದು ಹೇಳುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

35 ಯೆಹೋವನ ಮಂಜೂಷವು ಹೊರಡುವಾಗ ಮೋಶೆ - ಯೆಹೋವನೇ, ಎದ್ದು ಹೊರಡೋಣವಾಗಲಿ; ನಿನ್ನ ವೈರಿಗಳು ಚದರಿಹೋಗಲಿ; ನಿನ್ನ ಹಗೆಗಾರರು ಬೆಂಗೊಟ್ಟು ಓಡಿಹೋಗಲಿ ಎಂದು ಹೇಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

35 ಇದಲ್ಲದೆ ಮಂಜೂಷವು ಹೊರಡುವಾಗ ಮೋಶೆಯು ಹೀಗೆ ಹೇಳುತ್ತಿದ್ದನು, “ಯೆಹೋವ ದೇವರೇ, ಎದ್ದೇಳಿರಿ, ನಿಮ್ಮ ಶತ್ರುಗಳು ಚದರಿಹೋಗಲಿ. ನಿಮ್ಮನ್ನು ಹಗೆ ಮಾಡುವವರು ನಿಮ್ಮ ಎದುರಿನಿಂದ ಓಡಿಹೋಗಲಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 10:35
10 ತಿಳಿವುಗಳ ಹೋಲಿಕೆ  

ಯೆಹೋವನ ಭುಜಬಲವೇ, ಎಚ್ಚರಗೊಳ್ಳು ಎಚ್ಚರಗೊಳ್ಳು, ಬಲವನ್ನು ಹೊಂದಿಕೊ! ಪುರಾತನ ಕಾಲದಲ್ಲಿ ಮಾಡಿದಂತೆಯೇ ನಿನ್ನ ಶಕ್ತಿಯನ್ನು ತೋರು. ನಿನ್ನ ಶಕ್ತಿಯಿಂದ ನೀನು ರಹಬನ್ನು ಸೋಲಿಸಿರುವೆ. ದೈತ್ಯಾಕಾರದ ಮೃಗವನ್ನು ಸೋಲಿಸಿರುವೆ.


ಯೆಹೋವನೇ, ನಿನ್ನ ವಿಶ್ರಾಂತಿಯ ಸ್ಥಳದಿಂದ ಎದ್ದೇಳು. ನಿನ್ನ ಶಕ್ತಿಪೂರ್ಣವಾದ ಪೆಟ್ಟಿಗೆಯೊಂದಿಗೆ ಎದ್ದೇಳು.


ಥಳಥಳಿಸುವ ನನ್ನ ಖಡ್ಗವನ್ನು ನಾನು ಹದಮಾಡುವೆನು. ನನ್ನ ವೈರಿಗಳನ್ನು ಶಿಕ್ಷಿಸಲು ನಾನದನ್ನು ಉಪಯೋಗಿಸುವೆನು. ನಾನು ಅವರಿಗೆ ಯೋಗ್ಯವಾದ ದಂಡನೆಯನ್ನು ಕೊಡುವೆನು ಎಂದು ನಾನು ಆಣೆಯಿಟ್ಟು ಹೇಳುತ್ತೇನೆ.


ಆದರೆ ಆತನು ತನ್ನನ್ನು ದ್ವೇಷಿಸುವವರನ್ನು ಶಿಕ್ಷಿಸುತ್ತಾನೆ. ತನ್ನನ್ನು ದ್ವೇಷಿಸುವ ಜನರನ್ನು ಶಿಕ್ಷಿಸಲು ಆತನು ನಿಧಾನ ಮಾಡುವುದಿಲ್ಲ.


ಇಸ್ರೇಲರ ಸೈನಿಕರು ಪಾಳೆಯಕ್ಕೆ ಹಿಂದಿರುಗಿದರು. ಇಸ್ರೇಲರ ಹಿರಿಯರು, “ಫಿಲಿಷ್ಟಿಯರು ನಮ್ಮನ್ನು ಸೋಲಿಸಲು ಯೆಹೋವನು ಅವಕಾಶ ನೀಡಿದ್ದೇಕೆ? ಶೀಲೋವಿನಿಂದ ಯೆಹೋವನ ಪವಿತ್ರ ಒಡಂಬಡಿಕೆಯ ಪೆಟ್ಟಿಗೆಯನ್ನು ತರಿಸೋಣ. ಈ ರೀತಿ ದೇವರು ನಮ್ಮೊಂದಿಗೆ ಯುದ್ಧರಂಗಕ್ಕೆ ಬರಲಿ. ಆತನು ನಮ್ಮನ್ನು ಶತ್ರುಗಳಿಂದ ರಕ್ಷಿಸುತ್ತಾನೆ” ಎಂದು ಹೇಳಿದರು.


ಯೆಹೋವನೇ, ಎದ್ದೇಳು! ಜನಾಂಗಗಳಿಗೆ ನ್ಯಾಯತೀರಿಸು. ಅವರು ಬಲಿಷ್ಠರಾಗಕೂಡದು.


ದುಷ್ಟರಿಗೆ ವಿರೋಧವಾಗಿ ಯಾರೂ ನನಗೆ ಸಹಾಯಮಾಡಲಿಲ್ಲ. ದುಷ್ಕೃತ್ಯಗಳನ್ನು ಮಾಡುವವರ ವಿರುದ್ಧವಾಗಿ ಯಾರೂ ನನ್ನೊಂದಿಗೆ ನಿಂತುಕೊಳ್ಳಲಿಲ್ಲ.


ಯೆಹೋವನು ತನ್ನ ಜನರನ್ನು ರಕ್ಷಿಸಬಲ್ಲನು. ಯೆಹೋವನೇ, ದಯವಿಟ್ಟು ನಿನ್ನ ಜನರಿಗೆ ಒಳ್ಳೆಯದನ್ನು ಮಾಡು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು