ಅರಣ್ಯಕಾಂಡ 11:10 - ಪರಿಶುದ್ದ ಬೈಬಲ್10 ಎಲ್ಲಾ ಕುಟುಂಬದವರೂ ತಮ್ಮತಮ್ಮ ಗುಡಾರದ ಬಾಗಿಲುಗಳಲ್ಲಿ ನಿಂತು ಗುಣಗುಟ್ಟುತ್ತಿರುವ ಶಬ್ದವು ಮೋಶೆಗೆ ಕೇಳಿಸಿತು. ಆಗ ಯೆಹೋವನು ಬಹು ಕೋಪಗೊಂಡನು. ಇದರಿಂದಾಗಿ ಮೋಶೆಗೆ ಬಹಳ ಬೇಸರವಾಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಎಲ್ಲಾ ಕುಟುಂಬದವರೂ ತಮ್ಮ ತಮ್ಮ ಡೇರೆ ಬಾಗಿಲುಗಳಲ್ಲಿ ನಿಂತು ಕಣ್ಣೀರಿಟ್ಟು ಅಳುವ ಆ ಶಬ್ದವು ಮೋಶೆಗೆ ಕೇಳಿಸಿತು. ಆಗ ಯೆಹೋವನು ಬಹಳ ಕೋಪಗೊಂಡನು. ಅವರ ಗುಣುಗುಟ್ಟುವಿಕೆಯಿಂದ ಮೋಶೆಗೆ ಬೇಸರವಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಎಲ್ಲ ಕುಟುಂಬದವರು ತಮ್ಮ ತಮ್ಮ ಡೇರೆಗಳ ಬಾಗಿಲುಗಳಲ್ಲಿ ನಿಂತು ನಿಷ್ಠೂರವಾಗಿ ಮಾತನಾಡಿಕೊಳ್ಳುತ್ತಿದ್ದದ್ದು ಮೋಶೆಗೆ ಕೇಳಿಸಿತು. ಆಗ ಸರ್ವೇಶ್ವರನ ಕೋಪ ಉಕ್ಕೇರಿತು; ಮೋಶೆಗೆ ಇದನ್ನು ಸಹಿಸಲಾಗಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಎಲ್ಲಾ ಕುಟುಂಬದವರೂ ತಮ್ಮ ತಮ್ಮ ಡೇರೇಬಾಗಲುಗಳಲ್ಲಿ ನಿಂತು ಅಳುತ್ತಿರಲಾಗಿ ಆ ಶಬ್ದವು ಮೋಶೆಗೆ ಕೇಳಿಸಿತು. ಆಗ ಯೆಹೋವನು ಬಹಳ ಕೋಪಗೊಂಡನು. ಮೋಶೆಗೆ ಬೇಸರವಾಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಆಗ ಪ್ರತಿಯೊಂದು ಕುಟುಂಬದ ಜನರು ತಮ್ಮ ಗುಡಾರದ ಬಾಗಿಲಿನಲ್ಲಿ ನಿಂತು ಅಳುವುದನ್ನು ಮೋಶೆ ಕೇಳಿದನು. ಯೆಹೋವ ದೇವರು ಬಹಳ ಕೋಪಗೊಂಡರು. ಮೋಶೆ ಗಲಿಬಿಲಿಗೊಂಡನು. ಅಧ್ಯಾಯವನ್ನು ನೋಡಿ |