ಅರಣ್ಯಕಾಂಡ 11:20 - ಪರಿಶುದ್ದ ಬೈಬಲ್20 ಒಂದು ತಿಂಗಳು ಪೂರ್ತಿ ಮಾಂಸವನ್ನು ತಿನ್ನುವಿರಿ. ಅದು ನಿಮ್ಮ ಮೂಗಿನಲ್ಲಿ ಓಕರಿಕೆಯಾಗಿ ಹೊರಬರುವ ತನಕ ಮತ್ತು ನಿಮಗೆ ಅಸಹ್ಯವಾಗುವವರೆಗೆ ಅದನ್ನು ತಿನ್ನುವಿರಿ. ನೀವು ನಿಮ್ಮ ಮಧ್ಯದಲ್ಲಿರುವ ಯೆಹೋವನನ್ನು ತಿರಸ್ಕರಿಸಿದ್ದರಿಂದ ಮತ್ತು ‘ನಾವೇಕೆ ಈಜಿಪ್ಟನ್ನು ಬಿಟ್ಟು ಬಂದೆವು?’ ಎಂದು ಆತನ ಮುಂದೆ ದೂರು ಹೇಳಿದ್ದರಿಂದ ಇದು ನಿಮಗೆ ಸಂಭವಿಸುವುದು.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಆದರೆ ನೀವು ಪೂರ್ತಿಯಾಗಿ ಒಂದು ತಿಂಗಳು ಮಾಂಸವನ್ನು ಊಟಮಾಡುವಿರಿ. ಅದು ವಾಕರಿಕೆಯಾಗಿ ನಿಮ್ಮ ಮೂಗಿನಲ್ಲಿ ಹೊರಟು ನಿಮಗೆ ಅಸಹ್ಯವಾಗುವ ತನಕ ಅದನ್ನು ಊಟಮಾಡುವಿರಿ. ನಿಮ್ಮ ಮಧ್ಯದಲ್ಲಿರುವ ಯೆಹೋವನನ್ನು ನೀವು ಅಲಕ್ಷ್ಯಮಾಡಿ ಆತನ ಎದುರಿನಲ್ಲಿ ಅತ್ತು, ‘ನಾವು ಏಕೆ ಐಗುಪ್ತ ದೇಶವನ್ನು ಬಿಟ್ಟುಬಂದೆವು ಎಂದು ಹೇಳುತ್ತೀರಲ್ಲಾ’ ಎಂದು ಹೇಳು” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಅದು ಓಕರಿಕೆಯಾಗಿ, ನಿಮ್ಮ ಮೂಗಿನಲ್ಲಿ ಹೊರಟು ನಿಮಗೆ ಅಸಹ್ಯವಾಗುವ ತನಕ ಅದನ್ನು ತಿನ್ನುವಿರಿ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಪೂರಾ ಒಂದು ತಿಂಗಳು ಮಾಂಸವನ್ನು ಊಟಮಾಡುವಿರಿ. ಅದು ಓಕರಿಕೆಯಾಗಿ ನಿಮ್ಮ ಮೂಗಿನಲ್ಲಿ ಹೊರಟು ನಿಮಗೆ ಅಸಹ್ಯವಾಗುವ ತನಕ ಅದನ್ನು ಊಟಮಾಡುವಿರಿ ಅಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಅದು ನಿಮ್ಮ ಮೂಗಿನಿಂದ ಬಂದು, ನಿಮಗೆ ಅಸಹ್ಯವಾಗುವ ತನಕ ಪೂರ್ತಿ ತಿಂಗಳವರೆಗೆ ಮಾಂಸವನ್ನು ತಿನ್ನುವಿರಿ. ನಿಮ್ಮ ಮಧ್ಯದಲ್ಲಿರುವ ಯೆಹೋವ ದೇವರನ್ನು ಅಲಕ್ಷ್ಯಮಾಡಿ, ಅವರ ಎದುರಿನಲ್ಲಿ ಅತ್ತು, ‘ನಾವು ಏಕೆ ಈಜಿಪ್ಟಿನಿಂದ ಬಂದೆವು,’ ಎಂದು ಹೇಳುತ್ತೀರಲ್ಲಾ, ಎಂದು ಹೇಳು,” ಎಂದರು. ಅಧ್ಯಾಯವನ್ನು ನೋಡಿ |
ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ, “ಮಕ್ಕಳು ಹೆತ್ತವರನ್ನು ಗೌರವಿಸುವರು. ಸೇವಕರು ಯಜಮಾನನನ್ನು ಗೌರವಿಸುತ್ತಾರೆ. ನಾನು ನಿಮ್ಮ ತಂದೆಯಾಗಿದ್ದೇನೆ, ಆದರೆ ನನ್ನನ್ನು ಯಾಕೆ ಗೌರವಿಸುವದಿಲ್ಲ? ನಾನು ನಿಮ್ಮ ಯಜಮಾನನಾಗಿದ್ದೇನೆ, ಆದರೆ ನನ್ನನ್ಯಾಕೆ ಗೌರವಿಸುವದಿಲ್ಲ? ಯಾಜಕರೇ, ನೀವು ನನ್ನ ಹೆಸರನ್ನು ಗೌರವಿಸುವದಿಲ್ಲ.” ಆದರೆ ನೀವು, “ನಾವು ನಿನಗೆ ಯಾವ ವಿಷಯದಲ್ಲಿ ಗೌರವ ಕೊಟ್ಟಿಲ್ಲ” ಎಂದು ಕೇಳುತ್ತೀರಿ.
ಆಗ ಯೆಹೋಶುವನು ಜನರೆಲ್ಲರಿಗೆ, “ನಾವು ಇಂದು ಹೇಳಿದ ಎಲ್ಲವನ್ನು ಜ್ಞಾಪಕದಲ್ಲಿಟ್ಟುಕೊಳ್ಳಲು ಈ ಕಲ್ಲು ನಿಮಗೆ ಸಾಕ್ಷಿಯಾಗಿರುವುದು. ಇಂದು ಯೆಹೋವನು ನಮ್ಮೊಡನೆ ಮಾತನಾಡುತ್ತಿದ್ದಾಗ ಈ ಕಲ್ಲು ಇಲ್ಲಿಯೇ ಇತ್ತು. ಅದಕ್ಕಾಗಿ ಈ ಕಲ್ಲು ಇಂದು ನಡೆದ ಸಂಗತಿಯನ್ನು ನೆನಪಿನಲ್ಲಿಡಲು ನಮಗೆ ಸಹಾಯಕವಾಗುವುದು. ನೀವು ನಿಮ್ಮ ದೇವರಾದ ಯೆಹೋವನಿಗೆ ವಿಮುಖರಾದರೆ ಈ ಕಲ್ಲೇ ನಿಮಗೆ ವಿರೋಧವಾಗಿ ಸಾಕ್ಷಿ ಹೇಳುವುದು” ಎಂದು ಹೇಳಿದನು.
ಅಲ್ಲದೆ ಮೋಶೆಯು, “ನೀವು ಗೊಣಗುಟ್ಟುತ್ತಿರುವುದನ್ನು ಯೆಹೋವನು ಕೇಳಿದ್ದಾನೆ. ಆದ್ದರಿಂದ ರಾತ್ರಿಯಲ್ಲಿ ಆತನು ನಿಮಗೆ ಮಾಂಸವನ್ನು ಕೊಡುವನು. ಪ್ರತಿ ಮುಂಜಾನೆ ನಿಮಗೆ ಬೇಕಾದಷ್ಟು ರೊಟ್ಟಿಯು ದೊರಕುವುದು. ನೀವು (ಆರೋನನ ಮೇಲೂ ನನ್ನ ಮೇಲೂ) ಗೊಣಗುಟ್ಟುತ್ತಿದ್ದೀರಿ? ಆದರೆ ನಮಗೆ ದೂರು ಹೇಳಲು ನಾವೆಷ್ಟರವರು? ನೀವು ಯೆಹೋವನ ವಿರುದ್ಧವಾಗಿ ದೂರು ಹೇಳುತ್ತಿದ್ದೀರೆಂಬುದು ನಿಮ್ಮ ಜ್ಞಾಪಕದಲ್ಲಿರಲಿ” ಎಂದು ಹೇಳಿದನು.