ಅರಣ್ಯಕಾಂಡ 11:21 - ಪರಿಶುದ್ದ ಬೈಬಲ್21 ಅದಕ್ಕೆ ಮೋಶೆ, “ಯೆಹೋವನೇ, ಇಲ್ಲಿ ಆರು ಲಕ್ಷ ಗಂಡಸರು ನನ್ನೊಂದಿಗೆ ಇದ್ದಾರೆ. ಆದಾಗ್ಯೂ ನೀನು ಇವರಿಗೆ ಮಾಂಸ ಕೊಡುವುದಾಗಿಯೂ ಇವರು ಒಂದು ತಿಂಗಳೆಲ್ಲಾ ಅದನ್ನು ತಿನ್ನುವುದಾಗಿಯೂ ನೀನು ಹೇಳುತ್ತಿರುವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಅದಕ್ಕೆ ಮೋಶೆ, “ನನ್ನ ಸಂಗಡ ಇರುವ ಜನರು ಆರು ಲಕ್ಷ ಕಾಲಾಳುಗಳು, ಆದರೂ ನೀನು, ‘ಇವರಿಗೆ ಒಂದು ತಿಂಗಳು ಪೂರ್ತಿಯಾಗಿ ಮಾಂಸವನ್ನು ತಿನ್ನಲು ಕೊಡುತ್ತೇನೆ’ ಎಂದು ಹೇಳಿದ್ದೀ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಮೋಶೆ ಸರ್ವೇಶ್ವರನಿಗೆ, ” ನನ್ನ ಸಂಗಡ ಇರುವ ಜನರು ಆರು ಲಕ್ಷ ಕಾಲಾಳುಗಳು. ಆದರೂ ನೀವು, ‘ಇವರು ಇಡೀ ಒಂದು ತಿಂಗಳು ತಿನ್ನುವಷ್ಟು ಮಾಂಸವನ್ನು ಕೊಡುತ್ತೇನೆ’ ಎಂದು ಹೇಳಿದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಅದಕ್ಕೆ ಮೋಶೆ - ನನ್ನ ಸಂಗಡ ಇರುವ ಜನರು ಆರು ಲಕ್ಷ ಕಾಲಾಳುಗಳು; ಆದಾಗ್ಯೂ ನೀನು - ಇವರು ಪೂರಾ ಒಂದು ತಿಂಗಳು ತಿನ್ನುವಷ್ಟು ಮಾಂಸವನ್ನು ಕೊಡುತ್ತೇನೆ ಎಂದು ಹೇಳಿದ್ದೀ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಆದರೆ ಮೋಶೆಯು, “ನನ್ನ ಸಂಗಡ ಇರುವ ಜನರು ಆರು ಲಕ್ಷ ಕಾಲಾಳುಗಳು. ಅವರು ಒಂದು ತಿಂಗಳು ಪೂರ್ತಿ ತಿನ್ನುವ ಹಾಗೆ, ಅವರಿಗೆ ನಾನು ಮಾಂಸವನ್ನು ಕೊಡುವೆನೆಂದು ನೀವು ಹೇಳಿದ್ದೀರಿ. ಅಧ್ಯಾಯವನ್ನು ನೋಡಿ |