ಅರಣ್ಯಕಾಂಡ 11:25 - ಪರಿಶುದ್ದ ಬೈಬಲ್25 ಆಗ ಯೆಹೋವನು ಮೇಘದಲ್ಲಿ ಇಳಿದುಬಂದು ಮೋಶೆಯೊಡನೆ ಮಾತಾಡಿ ಅವನಲ್ಲಿದ್ದ ಆತ್ಮವನ್ನೇ ಆ ಎಪ್ಪತ್ತು ಮಂದಿ ಹಿರಿಯರಿಗೆ ಕೊಟ್ಟನು. ಆತ್ಮಿಕ ವರಗಳು ಅವರಿಗೆ ಕೊಡಲ್ಪಟ್ಟಾಗ ಅವರು ಪ್ರವಾದಿಗಳಂತೆ ಪ್ರವಾದಿಸಿದರು. ಆದರೆ ಮತ್ತೆ ಅವರು ಹಾಗೆ ಪ್ರವಾದಿಸಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಯೆಹೋವನು ಆ ಮೇಘದಲ್ಲಿ ಇಳಿದು ಬಂದು ಅವನ ಸಂಗಡ ಮಾತನಾಡಿದನು. ಮೋಶೆಯ ಮೇಲಿರುವ ಆತ್ಮದಲ್ಲಿ ಸ್ವಲ್ಪವನ್ನು ಆ ಎಪ್ಪತ್ತು ಮಂದಿ ಹಿರಿಯರಿಗೂ ಪಾಲುಕೊಟ್ಟನು. ಆ ಆತ್ಮವು ಅವರಿಗೆ ದೊರಕಿದಾಗ ಅವರು ಪರವಶರಾಗಿ ಆ ಸಂದರ್ಭದಲ್ಲಿ ಮಾತ್ರ ಪ್ರವಾದಿಸಿದರು. ಆ ಮೇಲೆ ಅವರು ಎಂದಿಗೂ ಪ್ರವಾದಿಸಲೇ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಆಗ ಸರ್ವೇಶ್ವರ ಮೇಘದಲ್ಲಿ ಇಳಿದುಬಂದು ಅವನೊಡನೆ ಮಾತಾಡಿ ಅವನಿಗೆ ಅನುಗ್ರಹಿಸಲಾಗಿದ್ದ ಆತ್ಮಶಕ್ತಿಯಲ್ಲಿ ಕಿಂಚಿತ್ತನ್ನು ಆ ಎಪ್ಪತ್ತು ಮಂದಿ ಹಿರಿಯರಿಗೂ ಹಂಚಿದರು. ಆ ಶಕ್ತಿ ಅವರ ಮೇಲೆ ಇಳಿದುಬಂದಾಗ ಅವರು ಪರವಶರಾಗಿ ಪ್ರವಾದಿಸಿದರು. ಅಂಥ ಅನುಭವ ಅವರಿಗೆ ಮತ್ತೆ ಬರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಯೆಹೋವನು ಆ ಮೇಘದಲ್ಲಿ ಇಳಿದು ಬಂದು ಅವನ ಸಂಗಡ ಮಾತಾಡಿ ಅವನಲ್ಲಿದ್ದ ಆತ್ಮೀಯವರಗಳಲ್ಲಿ ಆ ಎಪ್ಪತ್ತು ಮಂದಿ ಹಿರಿಯರಿಗೂ ಪಾಲುಕೊಟ್ಟನು; ಆ ವರಗಳು ಅವರಿಗೆ ದೊರಕಿದಾಗ ಅವರು ಪರವಶರಾಗಿ ಪ್ರವಾದಿಸಿದರು; ಆಮೇಲೆ ಅವರು ತಿರಿಗಿ ಪ್ರವಾದಿಸಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಯೆಹೋವ ದೇವರು ಮೇಘದೊಳಗಿಂದ ಇಳಿದು, ಅವನ ಸಂಗಡ ಮಾತನಾಡಿ, ಅವನ ಮೇಲಿರುವ ಆತ್ಮಶಕ್ತಿಯಲ್ಲಿ ಕಿಂಚಿತ್ತನ್ನು ತೆಗೆದು, ಹಿರಿಯರಾದ ಎಪ್ಪತ್ತು ಮಂದಿಯ ಮೇಲೆ ಇಟ್ಟರು. ಆದ್ದರಿಂದ ಆತ್ಮವು ಅವರ ಮೇಲೆ ನೆಲೆಯಾಗಿದ್ದಾಗ ಅವರು ಪ್ರವಾದಿಸಿದರು. ಆಮೇಲೆ ಅವರು ಪ್ರವಾದಿಸಲಿಲ್ಲ. ಅಧ್ಯಾಯವನ್ನು ನೋಡಿ |