Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 11:26 - ಪರಿಶುದ್ದ ಬೈಬಲ್‌

26 ಎಲ್ದಾದ್ ಮತ್ತು ಮೇದಾದ್ ಎಂಬ ಹಿರಿಯರಿಬ್ಬರು ಗುಡಾರದ ಬಳಿಗೆ ಹೋಗಲಿಲ್ಲ. ಹಿರಿಯರ ಹೆಸರುಗಳಿದ್ದ ಪಟ್ಟಿಯಲ್ಲಿ ಅವರ ಹೆಸರುಗಳಿದ್ದವು. ಆದರೆ ಅವರು ಪಾಳೆಯದಲ್ಲೇ ಉಳಿದುಕೊಂಡರು. ಆದರೆ ಅವರಿಗೆ ಆತ್ಮಿಕ ವರಗಳು ಕೊಡಲ್ಪಟ್ಟಿದ್ದರಿಂದ ಅವರು ಪಾಳೆಯದಲ್ಲಿ ಪ್ರವಾದಿಗಳಂತೆ ಪ್ರವಾದಿಸತೊಡಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಆದರೆ ಎಲ್ದಾದ್, ಮೇದಾದ್ ಎಂಬ ಇಬ್ಬರು ಪಾಳೆಯದೊಳಗೆ ನಿಂತಿದ್ದರು. ಅವರ ಹೆಸರುಗಳು ಬರೆಯಲ್ಪಟ್ಟಿದ್ದಾಗ್ಯೂ ಅವರು ದೇವದರ್ಶನದ ಗುಡಾರಕ್ಕೆ ಹೋಗಲಿಲ್ಲ. ಆ ಆತ್ಮವು ಅವರ ಮೇಲೆ ಇಳಿದುಬಂದುದರಿಂದ ಅವರು ಪಾಳೆಯದೊಳಗೆ ಪರವಶರಾಗಿ ಪ್ರವಾದಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಎಲ್ದಾದ್ ಮತ್ತು ಮೇದಾದ್ ಎಂಬ ಹಿರಿಯರಿಬ್ಬರು ಪಾಳೆಯದೊಳಗೆ ಉಳಿದುಕೊಂಡಿದ್ದರು. ಅವರ ಹೆಸರು ಲಿಖಿತವಾಗಿದ್ದರೂ ಅವರು ದೇವದರ್ಶನದ ಗುಡಾರಕ್ಕೆ ಹೊರಟುಬಂದಿರಲಿಲ್ಲ. ಆ ಆತ್ಮಶಕ್ತಿ ಅವರ ಮೇಲೂ ಇಳಿದು ಬಂದುದರಿಂದ ಅವರು ಕೂಡ ಪಾಳೆಯದಲ್ಲೇ ಪರವಶರಾಗಿ ಪ್ರವಾದಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಆದರೆ ಎಲ್ದಾದ್, ಮೇದಾದ್ ಎಂಬವರಿಬ್ಬರು ಪಾಳೆಯದೊಳಗೆ ನಿಂತಿದ್ದರು. ಅವರ ಹೆಸರುಗಳು ಬರೆಯಲ್ಪಟ್ಟಿದ್ದಾಗ್ಯೂ ಅವರು ದೇವದರ್ಶನದ ಗುಡಾರಕ್ಕೆ ಹೊರಟುಹೋಗಲಿಲ್ಲ. ಆ ಆತ್ಮೀಯವರಗಳು ಅವರಿಗೂ ದೊರೆತದರಿಂದ ಅವರು ಪಾಳೆಯದೊಳಗೆ ಪರವಶರಾಗಿ ಪ್ರವಾದಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಆದರೆ ಇಬ್ಬರು ಮನುಷ್ಯರು ಪಾಳೆಯದಲ್ಲಿ ಉಳಿದರು. ಅವರಲ್ಲಿ ಒಬ್ಬನ ಹೆಸರು ಎಲ್ದಾದ್. ಮತ್ತೊಬ್ಬನ ಹೆಸರು ಮೇದಾದ್. ಇವರು ನಾಯಕರ ಪಟ್ಟಿಯಲ್ಲಿದ್ದವರಾಗಿದ್ದರು. ಇವರ ಮೇಲೆ ಆತ್ಮವು ನೆಲೆಯಾಯಿತು. ಇವರು ಗುಡಾರಕ್ಕೆ ಹೊರಟು ಹೋಗದೆ, ಪಾಳೆಯದಲ್ಲಿ ಪ್ರವಾದಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 11:26
11 ತಿಳಿವುಗಳ ಹೋಲಿಕೆ  

ಆಗ ಯೆರೆಮೀಯನು ಬಾರೂಕನಿಗೆ ಹೀಗೆ ಹೇಳಿದನು: “ಯೆಹೋವನ ಆಲಯಕ್ಕೆ ನಾನು ಹೋಗಲಾರೆ. ಅಲ್ಲಿ ಹೋಗುವದಕ್ಕೆ ಅಪ್ಪಣೆಯಿಲ್ಲ.


ಆಗ ಯೆರೆಮೀಯನೆಂಬ ನಾನು, “ಸರ್ವಶಕ್ತನಾದ ಯೆಹೋವನೇ, ಹೇಗೆ ಮಾತನಾಡಬೇಕೆಂಬುದೇ ನನಗೆ ತಿಳಿಯದು. ನಾನು ಕೇವಲ ಹುಡುಗನಷ್ಟೇ” ಎಂದು ಹೇಳಿದೆ.


ಸೌಲನು ಆ ದಿನ ಏನನ್ನೂ ಹೇಳದೆ, “ದಾವೀದನಿಗೆ ಏನೋ ಸಂಭವಿಸಿರಬಹುದು ಆದ್ದರಿಂದ ಅವನು ಇಂದು ಶುದ್ಧನಾಗಿರಲಿಕ್ಕಿಲ್ಲ” ಎಂದು ಯೋಚಿಸಿದನು.


ಆಗ ಅವರು ಯೆಹೋವನನ್ನು, “ಸೌಲನು ಇಲ್ಲಿಗೆ ಬರುವನೋ?” ಎಂದು ಕೇಳಿದರು. ಯೆಹೋವನು, “ಸೌಲನು ಸರಕುಗಳ ಹಿಂದೆ ಅಡಗಿಕೊಂಡಿದ್ದಾನೆ” ಎಂದು ಹೇಳಿದನು.


ಅದಕ್ಕೆ ಮೋಶೆಯು ಯೆಹೋವನಿಗೆ, “ನಾನು ಮಹಾ ವ್ಯಕ್ತಿಯೇನಲ್ಲ! ಫರೋಹನ ಸನ್ನಿಧಾನಕ್ಕೆ ಹೋಗುವುದಕ್ಕೂ ಇಸ್ರೇಲರನ್ನು ಈಜಿಪ್ಟಿನಿಂದ ಬಿಡಿಸಿಕೊಂಡು ಬರುವುದಕ್ಕೂ ನಾನೆಷ್ಟರವನು?” ಎಂದು ಹೇಳಿದನು.


ಒಬ್ಬ ಯೌವನಸ್ಥನು ಮೋಶೆಯ ಬಳಿಗೆ ಓಡಿಹೋಗಿ, “ಎಲ್ದಾದ್ ಮತ್ತು ಮೇದಾದ್ ಎಂಬಿಬ್ಬರು ಪಾಳೆಯದಲ್ಲಿ ಪ್ರವಾದಿಗಳಂತೆ ಪ್ರವಾದಿಸುತ್ತಿದ್ದಾರೆ” ಎಂದು ಹೇಳಿದನು.


ಬಿಳಾಮನು ಕಣ್ಣೆತ್ತಿ ನೋಡಿದಾಗ ಇಸ್ರೇಲರೆಲ್ಲರನ್ನು ಕಂಡನು. ಅವರು ತಮ್ಮ ಕುಲಗಳ ಪ್ರಕಾರ ಡೇರೆಗಳನ್ನು ಹಾಕಿಕೊಂಡಿದ್ದರು.


ಆಗ ಯೆಹೋವನ ಆತ್ಮವು ಮಹಾಶಕ್ತಿಯೊಡನೆ ನಿನ್ನ ಮೈಮೇಲೆ ಬರುತ್ತದೆ. ನೀನು ಮಾರ್ಪಾಟಾಗಿ ಬೇರೊಬ್ಬ ಮನುಷ್ಯನಾಗುವೆ. ನೀನೂ ಆ ಪ್ರವಾದಿಗಳಂತೆ ಪ್ರವಾದಿಸಲು ಆರಂಭಿಸುವೆ.


ಓಬೇದನ ಮಗನಾದ ಅಜರ್ಯನ ಮೇಲೆ ದೇವರಾತ್ಮವು ಬಂದಿತು. ಅಜರ್ಯನು ಆಸನನ್ನು ಸಂಧಿಸಿ ಹೀಗೆ ಹೇಳಿದನು: “ಆಸನೇ, ನನ್ನ ಮಾತನ್ನು ಕೇಳು. ಯೆಹೂದದ ಜನರೇ, ಬೆನ್ಯಾಮೀನ್ ಜನರೇ, ನನ್ನ ಮಾತನ್ನು ಕೇಳಿರಿ. ನೀವು ಯೆಹೋವನೊಡನೆ ಇದ್ದರೆ ಆತನು ನಿಮ್ಮ ಸಂಗಡ ಇರುವನು. ನೀವು ಆತನನ್ನು ಹುಡುಕಿದರೆ ಆತನು ನಿಮಗೆ ಸಿಕ್ಕುವನು. ಆದರೆ ನೀವು ಆತನನ್ನು ತೊರೆದರೆ ಆತನು ನಿಮ್ಮನ್ನೂ ತೊರೆಯುವನು.


“ನೀನು ನಮ್ಮ ಪೂರ್ವಿಕರ ವಿಷಯದಲ್ಲಿ ತಾಳ್ಮೆಯಿಂದಿದ್ದೆ. ನಿನ್ನ ವಿಷಯದಲ್ಲಿ ತಪ್ಪಾಗಿ ನಡೆದುಕೊಳ್ಳಲು ಅನೇಕ ವರ್ಷಗಳವರೆಗೆ ಅವರನ್ನು ಬಿಟ್ಟುಬಿಟ್ಟೆ. ನೀನು ಅವರನ್ನು ನಿನ್ನ ಆತ್ಮನಿಂದ ಎಚ್ಚರಿಸಿದೆ; ಅವರನ್ನು ಎಚ್ಚರಿಸಲು ನಿನ್ನ ಪ್ರವಾದಿಗಳನ್ನು ಕಳುಹಿಸಿದೆ. ಆದರೆ ನಮ್ಮ ಪೂರ್ವಿಕರು ಕಿವಿಗೊಡಲಿಲ್ಲ. ಆದ್ದರಿಂದ ಪರರಾಜ್ಯದ ಜನರಿಗೆ ಅವರನ್ನು ಒಪ್ಪಿಸಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು