29 ಆದರೆ ಮೋಶೆಯು, “ನೀನು ನನ್ನ ವಿಷಯದಲ್ಲಿ ಚಿಂತೆಪಡುತ್ತಿರುವುದೇಕೆ? ಯೆಹೋವನ ಜನರೆಲ್ಲರೂ ಪ್ರವಾದಿಗಳಾಗಿರಬೇಕೆಂದು ನಾನು ಬಯಸುತ್ತೇನೆ. ಅವರೆಲ್ಲರ ಮೇಲೆ ಯೆಹೋವನು ತನ್ನ ಆತ್ಮನನ್ನು ಇರಿಸಬೇಕೆಂದು ನಾನು ಬಯಸುತ್ತೇನೆ” ಎಂದು ಉತ್ತರಿಸಿದನು.
29 ಅದಕ್ಕೆ ಮೋಶೆ, “ನನ್ನ ನಿಮಿತ್ತವಾಗಿ ನೀನು ಹೊಟ್ಟೆಕಿಚ್ಚುಪಡುತ್ತೀಯೋ? ಯೆಹೋವನ ಅನುಗ್ರಹದಿಂದ ಆತನ ಜನರೆಲ್ಲರೂ ಆತ್ಮವನ್ನು ಹೊಂದಿದವರೂ, ಪ್ರವಾದಿಸುವವರೂ ಆದರೆ ಎಷ್ಟೋ ಒಳ್ಳೆಯದು” ಎಂದನು.
29 ಅದಕ್ಕೆ ಮೋಶೆ - ನನ್ನ ಗೌರವವನ್ನು ಕಾಪಾಡಬೇಕೆಂದಿದ್ದೀಯೇ? ಯೆಹೋವನ ಅನುಗ್ರಹದಿಂದ ಆತನ ಜನರೆಲ್ಲರೂ ಆತ್ಮೀಯವರಗಳನ್ನು ಹೊಂದಿದವರೂ ಪ್ರವಾದಿಸುವರೂ ಆದರೆ ಎಷ್ಟೋ ಒಳ್ಳೇದು ಅಂದನು.
29 ಮೋಶೆಯು ಅವನಿಗೆ, “ನನ್ನ ನಿಮಿತ್ತವಾಗಿ ನೀನು ಹೊಟ್ಟೆಕಿಚ್ಚು ಪಡುತ್ತೀಯೋ? ಯೆಹೋವ ದೇವರ ಜನರೆಲ್ಲಾ ಪ್ರವಾದಿಗಳಾಗಿದ್ದು, ಯೆಹೋವ ದೇವರು ತನ್ನ ಆತ್ಮವನ್ನು ಅವರ ಮೇಲೆ ಇಟ್ಟರೆ ಎಷ್ಟೋ ಒಳ್ಳೆಯದು,” ಎಂದನು.
ವಿವಿಧ ಭಾಷೆಗಳಲ್ಲಿ ಮಾತಾಡುವ ವರವನ್ನು ನೀವೆಲ್ಲರೂ ಹೊಂದಿರಬೇಕೆಂದು ನನ್ನ ಅಪೇಕ್ಷೆಯಾಗಿದೆ. ಆದರೆ ನೀವು ಪ್ರವಾದಿಸಬೇಕೆಂದು ನಾನು ಇನ್ನೂ ಹೆಚ್ಚಾಗಿ ಅಪೇಕ್ಷಿಸುತ್ತೇನೆ. ಕೇವಲ ವಿವಿಧ ಭಾಷೆಗಳನ್ನು ಮಾತನಾಡುವವನಿಗಿಂತಲೂ ಪ್ರವಾದಿಸುವವನು ಹೆಚ್ಚು ಶ್ರೇಷ್ಠನಾಗಿದ್ದಾನೆ. ಆದರೆ ವಿವಿಧ ಭಾಷೆಗಳಲ್ಲಿ ಮಾತಾಡುವವನು ಆ ಭಾಷೆಗಳನ್ನು ಅನುವಾದಿಸಬಲ್ಲವನಾಗಿದ್ದರೆ, ಅವನು ಪ್ರವಾದಿಸುವವನಷ್ಟೇ ಶ್ರೇಷ್ಠನಾಗುತ್ತಾನೆ. ಆಗ ಅವನು ಹೇಳುವ ಸಂಗತಿಗಳ ಮೂಲಕ ಸಭೆಗೆ ಸಹಾಯವಾಗುವುದು.
ಪವಿತ್ರ ಗ್ರಂಥವು ಅರ್ಥವಿಲ್ಲದ್ದೆಂದು ಯೋಚಿಸುವಿರಾ? “ದೇವರು ನಮ್ಮಲ್ಲಿ ಇರಿಸಿರುವ ಆತ್ಮದ ಅಪೇಕ್ಷೆಯೇನೆಂದರೆ, ನಾವು ಆತನಿಗೋಸ್ಕರ ಮಾತ್ರ ಇರಬೇಕೆಂದಷ್ಟೆ” ಎಂದು ಪವಿತ್ರ ಗ್ರಂಥವು ಹೇಳುತ್ತದೆ.
ನೀವು ಯಾವುದನ್ನೇ ಮಾಡುವಾಗ, ಸ್ವಾರ್ಥವಾಗಲಿ ಅಹಂಕಾರವಾಗಲಿ ನಿಮಗೆ ಮಾರ್ಗದರ್ಶಕವಾಗದಂತೆ ನೋಡಿಕೊಳ್ಳಿರಿ. ದೀನಭಾವವುಳ್ಳವರಾಗಿದ್ದು ನಿಮಗಿಂತಲೂ ಹೆಚ್ಚಾಗಿ ಬೇರೆಯವರಿಗೆ ಗೌರವವನ್ನು ಕೊಡಿರಿ.
ಆದ್ದರಿಂದ ಇತರ ಜನರಿಗೆ ಕೇಡುಮಾಡಬೇಡಿ, ಸುಳ್ಳಾಡದಿರಿ, ಜನರನ್ನು ಮೋಸಗೊಳಿಸಬೇಡಿ, ಹೊಟ್ಟೆಕಿಚ್ಚುಪಡದಿರಿ, ಜನರ ಬಗ್ಗೆ ಕೆಟ್ಟಮಾತುಗಳನ್ನು ಆಡದಿರಿ. ಇವುಗಳನ್ನೆಲ್ಲಾ ನಿಮ್ಮ ಜೀವಿತದಿಂದ ಹೊರಕ್ಕೆ ಹಾಕಿರಿ.
ಪೌಲನು, “ಸುಲಭವೋ ಕಷ್ಟವೋ ಅದು ನನಗೆ ಮುಖ್ಯವಲ್ಲ. ನೀನು ಮಾತ್ರವಲ್ಲ, ಇಂದು ನನ್ನನ್ನು ಆಲಿಸುತ್ತಿರುವ ಪ್ರತಿಯೊಬ್ಬರೂ ರಕ್ಷಣೆಹೊಂದಿ ನನ್ನಂತೆಯೇ ಆಗಬೇಕೆಂದು ನಾನು ದೇವರಲ್ಲಿ ಪ್ರಾರ್ಥಿಸುತ್ತೇನೆ. ಆದರೆ ಈ ಸಂಕೋಲೆಗಳು ಮಾತ್ರ ನಿಮಗೆ ಬೇಡ!” ಎಂದು ಹೇಳಿದನು.
ನೀವಿನ್ನೂ ಆತ್ಮಿಕರಾಗಿಲ್ಲ. ನಿಮ್ಮ ನಡುವೆ ಹೊಟ್ಟೆಕಿಚ್ಚಿದೆ; ವಾಗ್ವಾದಗಳಿವೆ; ಜಗಳಗಳಿವೆ. ನೀವು ಆತ್ಮಿಕರಲ್ಲವೆಂಬುದನ್ನು ಇವು ಸೂಚಿಸುತ್ತವೆ. ನೀವು ಲೋಕದ ಜನರಂತೆಯೇ ವರ್ತಿಸುತ್ತಿದ್ದೀರಿ.
ಇಸ್ರೇಲರೊಂದಿಗೆ ನಾನು ಇದ್ದೇನೆ ಎಂದು ನೀವು ತಿಳಿಯುವಿರಿ. ನಿಮ್ಮ ದೇವರಾದ ಯೆಹೋವನು ನಾನೇ ಎಂದು ನೀವು ತಿಳಿಯುವಿರಿ. ನನ್ನ ಹೊರತು ಬೇರೆ ದೇವರುಗಳಿಲ್ಲ. ನನ್ನ ಜನರು ಇನ್ನು ಮುಂದೆ ನಾಚಿಕೆಗೆ ಗುರಿಯಾಗುವುದಿಲ್ಲ.”