ಅರಣ್ಯಕಾಂಡ 11:32 - ಪರಿಶುದ್ದ ಬೈಬಲ್32 ಜನರು ಎದ್ದು ಆ ದಿನವೆಲ್ಲಾ ಮತ್ತು ರಾತ್ರಿಯೆಲ್ಲಾ ಮತ್ತು ಮರುದಿನವೆಲ್ಲಾ ಲಾವಕ್ಕಿಗಳನ್ನು ಕೂಡಿಸಿಕೊಂಡರು. ಸ್ವಲ್ಪ ಕೂಡಿಸಿಕೊಂಡವನು ಅರವತ್ತು ಕಿಲೋಗ್ರಾಂ ಕೂಡಿಸಿಕೊಂಡನು. ಬಳಿಕ ಜನರು ಲಾವಕ್ಕಿಗಳ ಮಾಂಸವನ್ನು ಪಾಳೆಯದ ಸುತ್ತಲೂ ಹರಡಿ ಬಿಸಿಲಿನಲ್ಲಿ ಒಣಗಿಸಿಕೊಂಡರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 ಇಸ್ರಾಯೇಲರು ಆ ದಿನವೆಲ್ಲಾ, ರಾತ್ರಿಯೆಲ್ಲಾ, ಮರುದಿನವೆಲ್ಲಾ ಲಾವಕ್ಕಿಗಳನ್ನು ಕೂಡಿಸಿದರು. ಯಾರು ಹತ್ತು ಹೋಮೆರಿಗಿಂತ ಕಡಿಮೆ ಕೂಡಿಸಿಕೊಳ್ಳಲಿಲ್ಲ. ಅವರು ಪಾಳೆಯದ ಸುತ್ತಲೂ ಅವುಗಳನ್ನು ಹರಡಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)32 ಇಸ್ರಯೇಲರು ಆ ದಿನ ಹಗಲಿರುಳೂ ಮರುದಿನ ಹಗಲೂ ಆ ಲಾವಕ್ಕಿಗಳನ್ನು ಕೂಡಿಸಿಕೊಂಡರು. ಕಡಿಮೆ ಕೂಡಿಸಿಕೊಂಡವರು ಕೂಡ ಸಾವಿರ ಕಿಲೋಗ್ರಾಂನಷ್ಟು ಕೂಡಿಸಿಕೊಂಡರು. ಅವುಗಳನ್ನು ಪಾಳೆಯದ ಸುತ್ತಲೂ ಹರವಿ ಒಣಗಿಸಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)32 ಇಸ್ರಾಯೇಲ್ಯರು ಎದ್ದು ಆ ದಿನ ಹಗಲಿರುಳೂ ಮರುದಿನ ಹಗಲೂ ಆ ಲಾವಕ್ಕಿಗಳನ್ನು ಕೂಡಿಸಿಕೊಳ್ಳುತ್ತಿದ್ದರು; ಸ್ವಲ್ಪವಾಗಿ ಕೂಡಿಸಿಕೊಂಡವರು ಹದಿನೆಂಟು ಖಂಡುಗ ಕೂಡಿಸಿದರು. ಅವುಗಳನ್ನು ಪಾಳೆಯದ ಸುತ್ತಲೂ ಹರವಿ ಒಣಗಿಸಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ32 ಜನರು ಆ ದಿನವೆಲ್ಲಾ, ಆ ರಾತ್ರಿಯೆಲ್ಲಾ, ಮರು ದಿವಸವೆಲ್ಲಾ ಲಾವಕ್ಕಿಗಳನ್ನು ಕೂಡಿಸಿದರು. ಕಡಿಮೆ ಕೂಡಿಸಿದವನು ಸಾವಿರ ಕಿಲೋಗ್ರಾಮಿನಷ್ಟು ಕೂಡಿಸಿದನು. ಅವರು ಪಾಳೆಯದ ಸುತ್ತಲೂ ಅವುಗಳನ್ನು ಹರಡಿಕೊಂಡರು. ಅಧ್ಯಾಯವನ್ನು ನೋಡಿ |