ಅರಣ್ಯಕಾಂಡ 11:8 - ಪರಿಶುದ್ದ ಬೈಬಲ್8 ಜನರು ಮನ್ನವನ್ನು ಕೂಡಿಸಿಕೊಂಡು ಬೀಸುವ ಕಲ್ಲುಗಳಿಂದ ಬೀಸಿ ಅಥವಾ ಒರಳಲ್ಲಿ ಕುಟ್ಟಿ, ಮಡಕೆಗಳಲ್ಲಿ ಬೇಯಿಸಿ ತೆಳುವಾದ ರೊಟ್ಟಿಗಳನ್ನು ಮಾಡಿಕೊಂಡರು. ಅದರ ರುಚಿ ಆಲಿವ್ ಎಣ್ಣೆಯಿಂದ ಮಾಡಿದ ಭಕ್ಷ್ಯಗಳಂತಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಜನರು ತಿರುಗಾಡುತ್ತಾ ಅದನ್ನು ಕೂಡಿಸಿಕೊಂಡು ಬೀಸುವ ಕಲ್ಲುಗಳಿಂದ ಬೀಸಿ, ಇಲ್ಲವೆ ಒರಳಿನಲ್ಲಿ ಕುಟ್ಟಿ ಪಾತ್ರೆಗಳಲ್ಲಿ ಬೇಯಿಸಿ ರೊಟ್ಟಿಗಳನ್ನು ಮಾಡಿಕೊಂಡರು. ಅದರ ರುಚಿ ಎಣ್ಣೆ ಬೆರಸಿ ಮಾಡಿದ ಭಕ್ಷ್ಯಗಳಂತಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಜನರು ಹೊರಗೆ ಹೋಗಿ ಅದನ್ನು ಕೂಡಿಸಿಕೊಂಡು ಬಂದು ಬೀಸುವ ಕಲ್ಲುಗಳಿಂದ ಬೀಸಿ, ಇಲ್ಲವೆ ಒರಳಲ್ಲಿ ಕುಟ್ಟಿ, ಮಡಕೆಗಳಲ್ಲಿ ಬೇಯಿಸಿ ರೊಟ್ಟಿಗಳನ್ನು ಮಾಡಿಕೊಳ್ಳುತ್ತಿದ್ದರು. ಅದರ ರುಚಿ ಎಣ್ಣೆಬೆರೆಸಿ ಮಾಡಿದ ತಿಂಡಿಯಂತೆ ಇರುತ್ತಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಜನರು ತಿರುಗಾಡುತ್ತಾ ಅದನ್ನು ಕೂಡಿಸಿಕೊಂಡು ಬೀಸುವ ಕಲ್ಲುಗಳಿಂದ ಬೀಸಿ ಇಲ್ಲವೆ ಒರಳಲ್ಲಿ ಕುಟ್ಟಿ ಪಾತ್ರೆಗಳಲ್ಲಿ ಬೇಯಿಸಿ ರೊಟ್ಟಿಗಳನ್ನು ಮಾಡಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಜನರು ಹೊರಗೆ ಹೋಗಿ ಅದನ್ನು ಕೂಡಿಸಿ, ಬೀಸುವ ಕಲ್ಲುಗಳಲ್ಲಿ ಬೀಸಿ ಇಲ್ಲವೆ ಒರಳಿನಲ್ಲಿ ಕುಟ್ಟಿ, ಪಾತ್ರೆಗಳಲ್ಲಿ ಬೇಯಿಸಿ ರೊಟ್ಟಿಗಳನ್ನು ಮಾಡುತ್ತಿದ್ದರು. ಅದರ ರುಚಿಯು ಓಲಿವ್ ಎಣ್ಣೆಯಿಂದ ಮಾಡಿದ ರೊಟ್ಟಿಯಹಾಗೆ ಇತ್ತು. ಅಧ್ಯಾಯವನ್ನು ನೋಡಿ |
ಈ ಲೋಕದ ಆಹಾರವು ಕೆಟ್ಟುಹೋಗುತ್ತದೆ ಮತ್ತು ಹಾಳಾಗುತ್ತದೆ. ಆದ್ದರಿಂದ ಅಂಥ ಆಹಾರವನ್ನು ಪಡೆದುಕೊಳ್ಳಲು ದುಡಿಯಬೇಡಿರಿ. ಆದರೆ ಎಂದಿಗೂ ಕೆಟ್ಟುಹೋಗದಂಥ ಮತ್ತು ನಿಮಗೆ ನಿತ್ಯಜೀವವನ್ನು ಕೊಡುವಂಥ ಆಹಾರವನ್ನು ಪಡೆದುಕೊಳ್ಳಲು ದುಡಿಯಿರಿ. ಮನುಷ್ಯಕುಮಾರನು ಆ ಆಹಾರವನ್ನು ನಿಮಗೆ ಕೊಡುವನು. ತಂದೆಯಾದ ದೇವರು ಆತನ ಮೇಲೆ ತನ್ನ ಅಧಿಕಾರದ ಮುದ್ರೆಯನ್ನು ಒತ್ತಿದ್ದಾನೆ” ಎಂದು ಹೇಳಿದನು.