Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 12:13 - ಪರಿಶುದ್ದ ಬೈಬಲ್‌

13 ಆದ್ದರಿಂದ ಮೋಶೆ ಯೆಹೋವನಿಗೆ ಪ್ರಾರ್ಥಿಸಿ, “ದೇವರೇ, ದಯಮಾಡಿ ಈಕೆಯನ್ನು ವಾಸಿಮಾಡು” ಎಂದು ಮೊರೆಯಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆಗ ಮೋಶೆ ಯೆಹೋವನಿಗೆ, “ದೇವಾ, ಆಕೆಯನ್ನು ವಾಸಿಮಾಡಬೇಕೆಂದು ಬೇಡುತ್ತೇನೆ” ಎಂದು ಮೊರೆಯಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಆಗ ಮೋಶೆ ಸರ್ವೇಶ್ವರನಿಗೆ, “ಹೇ ದೇವಾ, ಆಕೆಯನ್ನು ಗುಣಪಡಿಸಬೇಕೆಂದು ಬೇಡಿಕೊಳ್ಳುತ್ತೇನೆ,” ಎಂದು ಮೊರೆಯಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಆಗ ಮೋಶೆ ಯೆಹೋವನಿಗೆ - ದೇವಾ, ಆಕೆಯನ್ನು ವಾಸಿಮಾಡಬೇಕೆಂದು ಬೇಡುತ್ತೇನೆ ಎಂದು ಮೊರೆಯಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಮೋಶೆಯು ಯೆಹೋವ ದೇವರಿಗೆ, “ದೇವರೇ, ಅವಳನ್ನು ಈಗ ಗುಣಪಡಿಸು, ಎಂದು ನಾನು ನಿನ್ನನ್ನು ಬೇಡಿಕೊಳ್ಳುತ್ತೇನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 12:13
23 ತಿಳಿವುಗಳ ಹೋಲಿಕೆ  

ನಂಬಿಕೆಯಿಂದ ಮಾಡಿದ ಪ್ರಾರ್ಥನೆಯು ಕಾಯಿಲೆಯಲ್ಲಿರುವವನನ್ನು ಗುಣಪಡಿಸುತ್ತದೆ. ಪ್ರಭುವು ಅವನನ್ನು ಗುಣಪಡಿಸುತ್ತಾನೆ. ಒಂದುವೇಳೆ, ಆ ವ್ಯಕ್ತಿಯು ಪಾಪ ಮಾಡಿದ್ದರೆ, ಪ್ರಭುವು ಅವನನ್ನು ಕ್ಷಮಿಸುತ್ತಾನೆ.


ಕೆಟ್ಟತನವು ನಿಮ್ಮನ್ನು ಸೋಲಿಸುವುದಕ್ಕೆ ಅವಕಾಶಕೊಡದೆ ಒಳ್ಳೆಯದನ್ನು ಮಾಡುವುದರ ಮೂಲಕವಾಗಿ ಕೆಟ್ಟತನವನ್ನು ಸೋಲಿಸಿರಿ.


ನಿಮ್ಮನ್ನು ಶಪಿಸುವವರನ್ನು ಆಶೀರ್ವದಿಸಿರಿ. ನಿಮ್ಮನ್ನು ಹೀನೈಸುವ ಜನರಿಗೋಸ್ಕರ ಪ್ರಾರ್ಥಿಸಿರಿ.


ಯೇಸು, “ತಂದೆಯೇ, ಇವರನ್ನು ಕ್ಷಮಿಸು. ಇವರಿಗೆ ತಾವು ಮಾಡುತ್ತಿರುವುದು ತಿಳಿದಿಲ್ಲ” ಎಂದು ಪ್ರಾರ್ಥಿಸಿದನು. ಸೈನಿಕರು ಚೀಟುಹಾಕಿ ಯೇಸುವಿನ ಬಟ್ಟೆಗಳು ಯಾರಿಗೆ ಸೇರಬೇಕೆಂದು ತೀರ್ಮಾನಿಸಿದರು.


ಯೆಹೋವನೇ, ನೀನು ನನ್ನನ್ನು ವಾಸಿಮಾಡಿದರೆ ನಿಜವಾಗಿಯೂ ನಾನು ಗುಣಹೊಂದುತ್ತೇನೆ. ನನ್ನನ್ನು ರಕ್ಷಿಸು, ಆಗ ನಿಜವಾಗಿಯೂ ರಕ್ಷಣೆ ಹೊಂದಿದವನಾಗುವೆನು. ಯೆಹೋವನೇ, ನಾನು ನಿನ್ನನ್ನು ಸ್ತುತಿಸುತ್ತೇನೆ.


ಆ ಸಮಯದಲ್ಲಿ ಚಂದ್ರನ ಪ್ರಕಾಶವು ಸೂರ್ಯನಂತಿರುವದು. ಸೂರ್ಯನ ಪ್ರಕಾಶವು ಈಗ ಇರುವದಕ್ಕಿಂತ ಏಳರಷ್ಟು ಹೆಚ್ಚಾಗಿರುವದು. ಸೂರ್ಯನ ಒಂದು ದಿವಸದ ಬೆಳಕು ಒಂದು ವಾರದ ಬೆಳಕಿನಷ್ಟಿರುವದು. ಯೆಹೋವನು ತನ್ನ ಮುರಿದುಹೋದ ಜನರಿಗೆ ಆದ ಗಾಯದ ಪೆಟ್ಟುಗಳನ್ನು ಗುಣಪಡಿಸುವಾಗ ಇವೆಲ್ಲಾ ಸಂಭವಿಸುತ್ತವೆ.


ಯೆಹೋವನು ಸಮುವೇಲನಿಗೆ, “ಸೌಲನು ನನ್ನ ಮಾರ್ಗವನ್ನು ತ್ಯಜಿಸಿದನು. ನಾನು ಸೌಲನನ್ನು ರಾಜನನ್ನಾಗಿ ಮಾಡಿದ್ದಕ್ಕಾಗಿ ಪಶ್ಚಾತ್ತಾಪಪಡುತ್ತೇನೆ. ನಾನು ಆಜ್ಞಾಪಿಸಿದ ಕಾರ್ಯಗಳನ್ನು ಅವನು ಮಾಡುತ್ತಿಲ್ಲ” ಎಂದು ಹೇಳಿದನು. ಸಮುವೇಲನು ತಳಮಳಗೊಂಡನು. ಅವನು ರಾತ್ರಿಯೆಲ್ಲ ಅಳುತ್ತಾ ಯೆಹೋವನಲ್ಲಿ ಮೊರೆಯಿಟ್ಟನು.


ನಾನು ನಿಮಗಾಗಿ ಪ್ರಾರ್ಥಿಸದಿದ್ದರೆ ಯೆಹೋವನಿಗೆ ವಿರುದ್ಧವಾಗಿ ಪಾಪಮಾಡಿದವನಾಗುತ್ತೇನೆ. ನಾನು ನಿಮಗೆ ಒಳ್ಳೆಯದೂ ಯೋಗ್ಯವೂ ಆಗಿರುವ ಮಾರ್ಗವನ್ನು ಉಪದೇಶಿಸುತ್ತೇನೆ.


ಮರುದಿನ ಇಸ್ರೇಲರೆಲ್ಲರೂ ಮೋಶೆ ಆರೋನರ ವಿರುದ್ಧ ಗುಣುಗುಟ್ಟುತ್ತಾ, “ನೀವೇ ಯೆಹೋವನ ಜನರನ್ನು ಸಾಯಿಸಿದಿರಿ” ಎಂದು ಹೇಳಿದರು.


ಇಸ್ರೇಲರು ಮೋಶೆ ಆರೋನರ ವಿರುದ್ಧ ಗೊಣಗುಟ್ಟಿದರು. ಜನರೆಲ್ಲರೂ ಒಟ್ಟಾಗಿ ಮೋಶೆ ಆರೋನರ ಬಳಿಗೆ ಬಂದು, “ನಾವು ಈಜಿಪ್ಟಿನಲ್ಲಿಯಾಗಲೀ ಅಥವಾ ಈ ಮರುಭೂಮಿಯಲ್ಲಾಗಲಿ ಸತ್ತಿದ್ದರೆ ಒಳ್ಳೆಯದಿತ್ತು.


ಅವನು ಮೊಣಕಾಲೂರಿ, “ಪ್ರಭುವೇ, ಈ ಪಾಪವನ್ನು ಇವರ ಮೇಲೆ ಹೊರಿಸಬೇಡ!” ಎಂದು ಧ್ವನಿಯೆತ್ತಿ ಹೇಳುತ್ತಾ ಪ್ರಾಣಬಿಟ್ಟನು.


ದೇವರು ಅಬೀಮೆಲೆಕನ ಕುಟುಂಬದಲ್ಲಿರುವ ಎಲ್ಲ ಸ್ತ್ರೀಯರನ್ನು ಬಂಜೆಯರನ್ನಾಗಿ ಮಾಡಿದ್ದನು. ಅಬ್ರಹಾಮನ ಹೆಂಡತಿಯಾದ ಸಾರಳನ್ನು ಅಬೀಮೆಲೆಕನು ಕರೆಸಿಕೊಂಡಿದ್ದೇ ಅದಕ್ಕೆ ಕಾರಣ. ಅಬ್ರಹಾಮನು ದೇವರಲ್ಲಿ ಪ್ರಾರ್ಥಿಸಿದಾಗ ದೇವರು ಅಬೀಮೆಲೆಕನನ್ನೂ ಅವನ ಹೆಂಡತಿಯನ್ನೂ ಸೇವಕಿಯರನ್ನೂ ಗುಣಪಡಿಸಿದ್ದರಿಂದ ಅವರಿಗೆ ಮಕ್ಕಳಾದರು.


ಆಗ ದೇವರು, “ನಿನ್ನ ಕೈಯನ್ನು ತಿರಿಗಿ ಉಡಿಯಲ್ಲಿ ಹಾಕು” ಅಂದನು. ಅಂತೆಯೇ ಮೋಶೆಯು ತನ್ನ ಕೈಯನ್ನು ಮತ್ತೆ ಉಡಿಯಲ್ಲಿ ಹಾಕಿ ಹೊರತೆಗೆದಾಗ ಅದು ಮೊದಲಿನಂತೆ ಆಗಿತ್ತು.


ಆಗ ಜನರು ಸಹಾಯಕ್ಕಾಗಿ ಮೋಶೆಗೆ ಮೊರೆಯಿಟ್ಟರು. ಮೋಶೆಯು ಅವರಿಗೋಸ್ಕರ ಯೆಹೋವನಿಗೆ ಪ್ರಾರ್ಥಿಸಲಾಗಿ ಬೆಂಕಿ ಆರಿಹೋಯಿತು.


ಗರ್ಭದಲ್ಲೇ ಅರ್ಧ ಮಾಂಸ ಕೊಳೆತುಹೋಗಿ, ಹುಟ್ಟುವಾಗಲೇ ಸತ್ತ ಮಗುವಿನಂತೆ ಈಕೆಗೆ ಆಗದಂತೆ ದಯವಿಟ್ಟು ಕಾಪಾಡು” ಎಂದು ಬೇಡಿಕೊಂಡನು.


ನನ್ನ ದೇವರಾದ ಯೆಹೋವನೇ, ನಾನು ನಿನಗೆ ಪ್ರಾರ್ಥಿಸಿದಾಗ ನೀನು ನನ್ನನ್ನು ಗುಣಪಡಿಸಿದೆ.


ನಾನು ಆತನಿಗೆ, “ಯೆಹೋವನೇ, ನನಗೆ ದಯೆತೋರು. ನಾನು ನಿನಗೆ ವಿರೋಧವಾಗಿ ಪಾಪಮಾಡಿದ್ದೇನೆ, ಆದರೂ ನನ್ನನ್ನು ಕ್ಷಮಿಸಿ ಗುಣಪಡಿಸು” ಎಂದು ಹೇಳಿದೆ.


ಆತನು ಅವರಿಗೆ, “ನೀವು ನಿಮ್ಮ ದೇವರಾದ ಯೆಹೋವನ ಮಾತನ್ನು ಶ್ರದ್ಧೆಯಿಂದ ಕೇಳಿ ಆತನ ದೃಷ್ಟಿಗೆ ಯೋಗ್ಯವಾದವುಗಳನ್ನು ಮಾಡಬೇಕು; ಆತನ ಆಜ್ಞೆಗಳಿಗೆ ವಿಧೇಯರಾಗಿದ್ದು ಆತನ ಕಟ್ಟಳೆಗಳನ್ನೆಲ್ಲಾ ಅನುಸರಿಸಬೇಕು. ಆಗ ನಾನು ಈಜಿಪ್ಟಿನವರಿಗೆ ಉಂಟುಮಾಡಿದ ಕಾಯಿಲೆಗಳಲ್ಲಿ ಒಂದನ್ನೂ ನಿಮಗೆ ಬರಗೊಡಿಸುವುದಿಲ್ಲ. ಯೆಹೋವನೆಂಬ ನಾನೇ ನಿಮಗೆ ಆರೋಗ್ಯದಾಯಕನಾಗಿದ್ದೇನೆ” ಎಂದು ಹೇಳಿದನು.


ನಂತರ ರಾಜನಾದ ಯಾರೊಬ್ಬಾಮನು ದೇವಮನುಷ್ಯನಿಗೆ, “ನಿನ್ನ ದೇವರಾದ ಯೆಹೋವನಲ್ಲಿ ನನಗಾಗಿ ಪ್ರಾರ್ಥಿಸು. ನನ್ನ ಕೈಯನ್ನು ಗುಣಪಡಿಸುವಂತೆ ಯೆಹೋವನಲ್ಲಿ ಪ್ರಾರ್ಥಿಸು” ಎಂದನು. ದೇವಮನುಷ್ಯನು ಯೆಹೋವನಿಗೆ ಪ್ರಾರ್ಥಿಸಿದನು. ಆಗ ರಾಜನ ಕೈ ಗುಣವಾಯಿತು. ಅದು ಮತ್ತೆ ಮೊದಲಿನಂತೆ ಆಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು