Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 12:5 - ಪರಿಶುದ್ದ ಬೈಬಲ್‌

5 ಯೆಹೋವನು ಎತ್ತರವಾದ ಮೇಘದಲ್ಲಿ ಇಳಿದು ಬಂದು ದೇವದರ್ಶನಗುಡಾರದ ಪ್ರವೇಶದ್ವಾರದ ಬಳಿ ನಿಂತನು. ಯೆಹೋವನು ಆರೋನನನ್ನೂ ಮಿರ್ಯಾಮಳನ್ನೂ ಕರೆದನು. ಆರೋನನೂ ಮಿರ್ಯಾಮಳೂ ಹತ್ತಿರಕ್ಕೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಯೆಹೋವನು ಮೇಘಸ್ತಂಭದೊಳಗೆ ಇಳಿದು ಬಂದು ದೇವದರ್ಶನದ ಗುಡಾರದ ಬಾಗಿಲ ಬಳಿಯಲ್ಲಿ ನಿಂತು ಆರೋನನ್ನು ಮತ್ತು ಮಿರ್ಯಾಮಳನ್ನು ಹತ್ತಿರಕ್ಕೆ ಕರೆದನು. ಅವರು ಮುಂದೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಅವರು ಬಂದಾಗ ಸರ್ವೇಶ್ವರ ಮೇಘಸ್ತಂಭದಲ್ಲಿ ಇಳಿದು ಬಂದು ದೇವದರ್ಶನದ ಗುಡಾರದ ಬಾಗಿಲಲ್ಲಿ ನಿಂತು ಆರೋನ್ ಹಾಗೂ ಮಿರ್ಯಾಮಳನ್ನು ಹತ್ತಿರಕ್ಕೆ ಕರೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಆ ಮೂವರು ಬಂದಾಗ ಯೆಹೋವನು ಮೇಘಸ್ತಂಭದೊಳಗೆ ಇಳಿದು ಬಂದು ದೇವದರ್ಶನದ ಗುಡಾರದ ಬಾಗಲಲ್ಲಿ ನಿಂತು ಆರೋನ್ ವಿುರ್ಯಾಮರನ್ನು ಹತ್ತಿರಕ್ಕೆ ಕರೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಯೆಹೋವ ದೇವರು ಮೇಘ ಸ್ತಂಭದಲ್ಲಿ ಇಳಿದು ಗುಡಾರದ ಬಾಗಿಲ ಬಳಿಯಲ್ಲಿ ನಿಂತು, ಆರೋನನನ್ನೂ ಮಿರ್ಯಾಮಳನ್ನೂ ಕರೆದಾಗ, ಅವರಿಬ್ಬರು ಮುಂದೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 12:5
6 ತಿಳಿವುಗಳ ಹೋಲಿಕೆ  

ಆಗ ಯೆಹೋವನು ಮೇಘದಲ್ಲಿ ಇಳಿದುಬಂದು ಮೋಶೆಯೊಡನೆ ಮಾತಾಡಿ ಅವನಲ್ಲಿದ್ದ ಆತ್ಮವನ್ನೇ ಆ ಎಪ್ಪತ್ತು ಮಂದಿ ಹಿರಿಯರಿಗೆ ಕೊಟ್ಟನು. ಆತ್ಮಿಕ ವರಗಳು ಅವರಿಗೆ ಕೊಡಲ್ಪಟ್ಟಾಗ ಅವರು ಪ್ರವಾದಿಗಳಂತೆ ಪ್ರವಾದಿಸಿದರು. ಆದರೆ ಮತ್ತೆ ಅವರು ಹಾಗೆ ಪ್ರವಾದಿಸಲಿಲ್ಲ.


ಮೋಶೆಯು ಬೆಟ್ಟವನ್ನೇರಿ ಹೋದನಂತರ ಯೆಹೋವನು ಮೇಘದಲ್ಲಿ ಅವನ ಬಳಿಗೆ ಇಳಿದುಬಂದನು. ಯೆಹೋವನು ಮೋಶೆಯೊಡನೆ ಅಲ್ಲಿ ನಿಂತನು ಮತ್ತು ಮೋಶೆಯು ಯೆಹೋವನ ಹೆಸರನ್ನು ಕರೆದನು.


ಆತನು ಮೇಘಸ್ತಂಭದಿಂದ ಅವರೊಂದಿಗೆ ಮಾತಾಡಿದನು. ಅವರು ಆಜ್ಞೆಗಳಿಗೆ ವಿಧೇಯರಾದರು. ಆತನು ಅವರಿಗೆ ಧರ್ಮಶಾಸ್ತ್ರವನ್ನು ಕೊಟ್ಟನು.


ಹೀಗೆ ಯೆಹೋವನ ಮೋಡವು ಹಗಲಿನಲ್ಲಿ ಪವಿತ್ರಗುಡಾರದ ಮೇಲೆ ನಿಂತಿತು. ರಾತ್ರಿಯಲ್ಲಿ ಮೋಡದಲ್ಲಿ ಅಗ್ನಿಯು ಪ್ರಕಾಶಿಸುತ್ತಿತ್ತು. ಆದ್ದರಿಂದ ಇಸ್ರೇಲ್ ಜನರೆಲ್ಲರೂ ತಾವು ಪ್ರಯಾಣ ಮಾಡುವಾಗ, ಮೋಡವನ್ನು ನೋಡಬಹುದಾಗಿತ್ತು.


ಯೆಹೋವನು ಮೋಶೆಗೆ, “ನಾನು ಕಾರ್ಮುಗಿಲಲ್ಲಿ ನಿನ್ನ ಬಳಿಗೆ ಬಂದು ಜನರೆಲ್ಲರಿಗೂ ಕೇಳುವಂತೆ ನಿನ್ನೊಡನೆ ಮಾತಾಡುವೆನು. ನೀನು ಹೇಳುವುದನ್ನು ಜನರು ಯಾವಾಗಲೂ ನಂಬಲು ಇದು ಸಹಾಯಕವಾಗುವುದು” ಎಂದು ಹೇಳಿದನು. ಆಗ ಮೋಶೆಯು ಜನರು ಹೇಳಿದ್ದನ್ನೆಲ್ಲಾ ದೇವರಿಗೆ ಅರಿಕೆಮಾಡಿದನು.


ಆದ್ದರಿಂದ ಕೂಡಲೇ ಯೆಹೋವನು, ಮೋಶೆ, ಆರೋನರ ಮತ್ತು ಮಿರ್ಯಾಮಳ ಸಂಗಡ ಮಾತಾಡಿ, “ನೀವು ಮೂವರು ದೇವದರ್ಶನಗುಡಾರಕ್ಕೆ ಬನ್ನಿ” ಎಂದು ಹೇಳಿದನು. ಆದ್ದರಿಂದ ಮೋಶೆ, ಆರೋನರು ಮತ್ತು ಮಿರ್ಯಾಮಳು ದೇವದರ್ಶನಗುಡಾರಕ್ಕೆ ಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು