ಅರಣ್ಯಕಾಂಡ 12:7 - ಪರಿಶುದ್ದ ಬೈಬಲ್7 ಆದರೆ ಮೋಶೆಯೊಡನೆ ನಾನು ಆ ರೀತಿ ಮಾಡುವುದಿಲ್ಲ. ಮೋಶೆಯು ನನ್ನ ನಂಬಿಗಸ್ತನಾದ ಸೇವಕನು. ಅವನ ಮೇಲೆ ನನಗೆ ಭರವಸೆಯಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ನನ್ನ ಸೇವಕನಾದ ಮೋಶೆಯು ಅಂಥವನಲ್ಲ. ಅವನು ನನ್ನ ಮನೆಯಲ್ಲೆಲ್ಲಾ ನಂಬಿಗಸ್ತನಾಗಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ನನ್ನ ದಾಸನಾದ ಮೋಶೆ ಅಂಥವನಲ್ಲ ಅವನೇ ನಂಬಿಗಸ್ತ ನನ್ನ ಮನೆಯಲ್ಲೆಲ್ಲಾ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ನನ್ನ ಸೇವಕನಾದ ಮೋಶೆ ಅಂಥವನಲ್ಲ; ಅವನು ನನ್ನ ಮನೆಯಲ್ಲೆಲ್ಲಾ ನಂಬಿಗಸ್ತನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಆದರೆ ನನ್ನ ಸೇವಕನಾದ ಮೋಶೆಯು ಹಾಗಲ್ಲ. ಅವನು ನನ್ನ ಮನೆಯಲ್ಲೆಲ್ಲಾ ನಂಬಿಗಸ್ತನಾಗಿದ್ದಾನೆ. ಅಧ್ಯಾಯವನ್ನು ನೋಡಿ |
ಯೆಹೋವನು ಮೋಶೆಯೊಂದಿಗೆ ಮುಖಾಮುಖಿಯಾಗಿ ಮಾತಾಡುತ್ತಿದ್ದನು. ಒಬ್ಬನು ತನ್ನ ಸ್ನೇಹಿತನೊಂದಿಗೆ ಮಾತಾಡುವಂತೆ ಯೆಹೋವನು ಮೋಶೆಯೊಂದಿಗೆ ಮಾತಾಡುತ್ತಿದ್ದನು. ಯೆಹೋವನೊಂದಿಗೆ ಮಾತಾಡಿದ ನಂತರ ಮೋಶೆಯು ಪಾಳೆಯಕ್ಕೆ ಮರಳಿ ಹೋಗುತ್ತಿದ್ದನು. ನೂನನ ಮಗನೂ ಯೌವನಸ್ಥನೂ ಆಗಿದ್ದ ಯೆಹೋಶುವನು ಮೋಶೆಯ ಸಹಾಯಕನಾಗಿದ್ದನು. ಮೋಶೆಯು ಗುಡಾರವನ್ನು ಬಿಟ್ಟುಹೋದಾಗ ಯೆಹೋಶುವನು ಗುಡಾರದಲ್ಲಿಯೇ ಇರುತ್ತಿದ್ದನು.