Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 13:1 - ಪರಿಶುದ್ದ ಬೈಬಲ್‌

1 ಯೆಹೋವನು ಮೋಶೆಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೋವನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಸರ್ವೇಶ್ವರ ಸ್ವಾಮಿ ಮೋಶೆಗೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1-2 ಯೆಹೋವನು ಮೋಶೆಗೆ - ನಾನು ಇಸ್ರಾಯೇಲ್ಯರಿಗೆ ಕೊಡುವ ಕಾನಾನ್ ದೇಶವನ್ನು ಸಂಚರಿಸಿ ನೋಡುವದಕ್ಕೆ ನೀನು ಒಂದೊಂದು ಕುಲದಿಂದ ಒಬ್ಬೊಬ್ಬ ಮುಖ್ಯಸ್ಥನನ್ನು ಕಳುಹಿಸಬೇಕೆಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೆಹೋವ ದೇವರು ಮೋಶೆಯ ಸಂಗಡ ಮಾತನಾಡಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 13:1
10 ತಿಳಿವುಗಳ ಹೋಲಿಕೆ  

ಇದಾದನಂತರ, ಜನರು ಹಚೇರೋತಿನಿಂದ ಹೊರಟು ಪಾರಾನ್ ಮರುಭೂಮಿಯಲ್ಲಿ ಪಾಳೆಯ ಮಾಡಿಕೊಂಡರು.


“ಆದರೆ ನೀವೆಲ್ಲಾ ನನ್ನ ಬಳಿಗೆ ಬಂದು, ‘ಆ ದೇಶವನ್ನು ಸಂಚರಿಸಿ ಅದರ ಬಲವುಳ್ಳ ಮತ್ತು ಬಲಹೀನ ಸ್ಥಳಗಳನ್ನು ನೋಡಿಕೊಂಡು ನಾವು ಯಾವ ಮಾರ್ಗವಾಗಿ ಹೋಗಬೇಕು ಮತ್ತು ಯಾವಯಾವ ಪಟ್ಟಣಗಳನ್ನು ದಾಟಬೇಕು ಎಂಬುದನ್ನು ನಮಗೆ ತಿಳಿಸಲು ನಮ್ಮಲ್ಲಿ ಕೆಲವರನ್ನು ಕಳುಹಿಸಿ’ ಎಂದು ಹೇಳಿದಿರಿ.


“ಇದು ಒಂದು ಒಳ್ಳೆಯ ಆಲೋಚನೆ ಎಂದುಕೊಂಡು ನಿಮ್ಮ ಕುಲಗಳಿಂದ ಹನ್ನೆರಡು ಮಂದಿಯನ್ನು ಆರಿಸಿಕೊಂಡೆನು.


ಯೆಹೋವನ ಸೇವಕನಾದ ಮೋಶೆಯು, ಈ ದೇಶದಲ್ಲಿ ಗೂಢಚರ್ಯ ಮಾಡುವುದಕ್ಕೆ ನನ್ನನ್ನು ಕಳುಹಿಸಿದ್ದನು. ಆಗ ನನಗೆ ನಲವತ್ತು ವರ್ಷವಾಗಿತ್ತು. ನಾನು ಹಿಂತಿರುಗಿ ಬಂದಾಗ ಈ ದೇಶದ ಬಗ್ಗೆ ದೇವರ ವಾಗ್ದಾನಗಳನ್ನು ನಂಬಿ ಯಥಾರ್ಥವಾದ ಸಂಗತಿಗಳನ್ನು ಮೋಶೆಗೆ ಹೇಳಿದೆ.


ಆಶೇರ್ ಕುಲದಿಂದ ಮೀಕಾಯೇಲನ ಮಗನಾದ ಸೆತೂರ್,


“ನಿಮಗೋಸ್ಕರ ದೇಶವನ್ನು ಹಂಚಿಕೊಡುವ ಕುಲಪ್ರಧಾನರು ಯಾರೆಂದರೆ: ಮಹಾಯಾಜಕನಾದ ಎಲ್ಲಾಜಾರ್, ನೂನನ ಮಗನಾದ ಯೆಹೋಶುವ


ಮತ್ತು ಪ್ರತಿಯೊಂದು ಕುಲದಿಂದ ಒಬ್ಬ ಕುಲಪ್ರಧಾನ.


ಕಾದೇಶ್‌ಬರ್ನೇಯದಿಂದ ಹೊರಡಲು ಆತನು ನಿಮಗೆ ಹೇಳಿದಾಗ ನೀವು ಆತನಿಗೆ ವಿಧೇಯರಾಗಲಿಲ್ಲ. ಆತನು ನಿಮಗೆ, ‘ನೀವು ಬೆಟ್ಟಪ್ರದೇಶವನ್ನು ಹತ್ತಿಹೋಗಿ ನಾನು ನಿಮಗೆ ಕೊಡುವ ದೇಶವನ್ನು ವಶಪಡಿಸಿಕೊಳ್ಳಿ’ ಎಂದು ಹೇಳಿದಾಗ ನಿಮ್ಮ ದೇವರಾದ ಯೆಹೋವನಿಗೆ ವಿಧೇಯರಾಗಲಿಲ್ಲ. ನೀವು ಆತನಲ್ಲಿ ಭರವಸೆ ಇಡಲಿಲ್ಲ. ನೀವು ಆತನ ಆಜ್ಞೆಗೆ ಕಿವಿಗೊಡಲಿಲ್ಲ.


ನೂನನ ಮಗನಾದ ಯೆಹೋಶುವನು ಮತ್ತು ಎಲ್ಲಾ ಜನರು ಆಕಾಶಿಯಾದಲ್ಲಿ ಬಿಡಾರ ಮಾಡಿದ್ದರು. ಯೆಹೋಶುವನು ಇಬ್ಬರು ಗೂಢಚಾರರನ್ನು ಜೆರಿಕೊ ಪಟ್ಟಣದ ಬಗ್ಗೆ ತಿಳಿದುಕೊಳ್ಳಲು ಕಳುಹಿಸಿದನು. ಈ ಜನರನ್ನು ಯೆಹೋಶುವನು ಕಳುಹಿಸಿದ ಸಂಗತಿ ಬೇರೆ ಯಾರಿಗೂ ತಿಳಿದಿರಲಿಲ್ಲ. “ಹೋಗಿ ಆ ಜೆರಿಕೊ ನಗರವನ್ನು ಬಹಳ ಸೂಕ್ಷ್ಮವಾಗಿ ಪರೀಕ್ಷಿಸಿರಿ” ಎಂದು ಯೆಹೋಶುವನು ಆ ಗೂಢಚಾರರಿಗೆ ಹೇಳಿದ್ದನು. ಅವರಿಬ್ಬರು ಜೆರಿಕೊ ನಗರಕ್ಕೆ ಹೋಗಿ ಒಬ್ಬ ವೇಶ್ಯೆಯ ಮನೆಯಲ್ಲಿ ಇಳಿದುಕೊಂಡರು. ಆ ಹೆಂಗಸಿನ ಹೆಸರು “ರಾಹಾಬ.”


ಯೆಹೋವನೇ, ತಲತಲಾಂತರಗಳಿಂದಲೂ ನೀನೇ ನಮ್ಮ ವಾಸಸ್ಥಾನ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು