ಅರಣ್ಯಕಾಂಡ 13:16 - ಪರಿಶುದ್ದ ಬೈಬಲ್16 ದೇಶದ ವಿಷಯವನ್ನು ಸಂಗ್ರಹಿಸಿಕೊಂಡು ಬರಲು ಮೋಶೆ ಕಳುಹಿಸಿದ ಗೂಢಚಾರರ ಹೆಸರುಗಳು ಇವೇ. (ಮೋಶೆಯು ನೂನನ ಮಗನಾದ ಹೋಶೇಯನಿಗೆ ಯೆಹೋಶುವನೆಂದು ಹೆಸರಿಟ್ಟನು.) ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ದೇಶವನ್ನು ಸಂಚರಿಸಿ ನೋಡುವುದಕ್ಕೆ ಮೋಶೆ ಕಳುಹಿಸಿದ ಮನುಷ್ಯರ ಹೆಸರುಗಳು ಇವೇ. ಮೋಶೆ ನೂನನ ಮಗನಾದ ಹೋಶೇಯನಿಗೆ ಯೆಹೋಶುವನೆಂದು ಹೆಸರಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ನಾಡನ್ನು ಸಂಚರಿಸಿ ನೋಡಿಬರುವುದಕ್ಕೆ ಮೋಶೆ ಕಳಿಸಿದ್ದ ವ್ಯಕ್ತಿಗಳ ಹೆಸರುಗಳು ಇವೇ. ಮೋಶೆ ನೂನನ ಮಗ ಹೋಶೇಯನಿಗೆ ‘ಯೆಹೋಶುವ’ ಎಂದು ಹೆಸರಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ದೇಶವನ್ನು ಸಂಚರಿಸಿ ನೋಡುವದಕ್ಕೆ ಮೋಶೆ ಕಳುಹಿಸಿದ ಮನುಷ್ಯರ ಹೆಸರುಗಳು ಇವೇ. ಮೋಶೆ ನೂನನ ಮಗನಾದ ಹೋಶೇಯನಿಗೆ ಯೆಹೋಶುವನೆಂದು ಹೆಸರಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ದೇಶವನ್ನು ಸಂಚರಿಸಿ ನೋಡುವುದಕ್ಕಾಗಿ ಮೋಶೆ ಕಳುಹಿಸಿದ ಮನುಷ್ಯರ ಹೆಸರುಗಳು ಇವೇ. ಮೋಶೆ ನೂನನ ಮಗ ಹೋಶೇಯನಿಗೆ ಯೆಹೋಶುವ ಎಂದು ಹೆಸರಿಟ್ಟನು. ಅಧ್ಯಾಯವನ್ನು ನೋಡಿ |
ತರುವಾಯ ಇತರ ಜನಾಂಗಗಳ ನಾಡುಗಳನ್ನು ವಶಪಡಿಸಿಕೊಳ್ಳುವುದಕ್ಕಾಗಿ ಯೆಹೋಶುವನು ನಮ್ಮ ಪಿತೃಗಳನ್ನು ಮುನ್ನಡೆಸಿದನು. ನಮ್ಮ ಜನರು ಆ ದೇಶದೊಳಗೆ ಹೋದಾಗ, ದೇವರು ಇತರ ಜನರನ್ನು ಅಲ್ಲಿಂದ ಹೊರಡಿಸಿಬಿಟ್ಟನು. ನಮ್ಮ ಜನರು ಆ ಹೊಸ ದೇಶದೊಳಗೆ ಹೋದಾಗ ಈ ಗುಡಾರವನ್ನು ತಮ್ಮೊಂದಿಗೆ ತೆಗೆದುಕೊಂಡು ಹೋದರು. ನಮ್ಮ ಜನರು ಈ ಗುಡಾರವನ್ನು ತಮ್ಮ ಪಿತೃಗಳಿಂದ ಸ್ವೀಕರಿಸಿಕೊಂಡು ದಾವೀದನ ಕಾಲದವರೆಗೂ ಅದನ್ನು ಇಟ್ಟುಕೊಂಡಿದ್ದರು.