ಅರಣ್ಯಕಾಂಡ 13:2 - ಪರಿಶುದ್ದ ಬೈಬಲ್2 “ಕಾನಾನ್ ದೇಶದ ಬಗ್ಗೆ ವಿಷಯವನ್ನು ಸಂಗ್ರಹಿಸಿಕೊಂಡು ಬರಲು ಗೂಢಚಾರರನ್ನು ಕಳುಹಿಸು. ನಾನು ಇಸ್ರೇಲರಿಗೆ ಕೊಡುವ ದೇಶ ಇದಾಗಿದೆ. ಹನ್ನೆರಡು ಕುಲಗಳಿಂದ ಒಬ್ಬೊಬ್ಬ ನಾಯಕನನ್ನು ಕಳುಹಿಸು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 “ನಾನು ಇಸ್ರಾಯೇಲರಿಗೆ ಕೊಡುವ ಕಾನಾನ್ ದೇಶವನ್ನು ಸಂಚರಿಸಿ ನೋಡುವುದಕ್ಕೆ ನೀನು ಒಂದೊಂದು ಕುಲದಿಂದ ಒಬ್ಬೊಬ್ಬ ಮುಖ್ಯಸ್ಥನನ್ನು ಕಳುಹಿಸಬೇಕು” ಎಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 “ನಾನು ಇಸ್ರಯೇಲರಿಗೆ ಕೊಡಲಿರುವ ಕಾನಾನ್ ನಾಡನ್ನು ಸಂಚರಿಸಿ ನೋಡಿಬರಲು ಒಂದೊಂದು ಕುಲದಿಂದ ಒಬ್ಬೊಬ್ಬ ಮುಖ್ಯಸ್ಥನನ್ನು ಕಳಿಸು,” ಎಂದು ಆಜ್ಞಾಪಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 “ನಾನು ಇಸ್ರಾಯೇಲರಿಗೆ ಕೊಡುವ ಕಾನಾನ್ ದೇಶವನ್ನು ಪರೀಕ್ಷಿಸುವ ಹಾಗೆ ನೀನು ಜನರನ್ನು ಕಳುಹಿಸು. ಅವರವರ ಪಿತೃಗಳ ಗೋತ್ರದ ಪ್ರಕಾರ ಅವರೊಳಗೆ ಅಧಿಕಾರಿಯಾಗಿರುವ ಪ್ರತಿಯೊಬ್ಬನನ್ನು ಕಳುಹಿಸು,” ಎಂದರು. ಅಧ್ಯಾಯವನ್ನು ನೋಡಿ |