ಅರಣ್ಯಕಾಂಡ 13:26 - ಪರಿಶುದ್ದ ಬೈಬಲ್26 ಇಸ್ರೇಲರು ಪಾರಾನ್ ಮರುಭೂಮಿಯ ಕಾದೇಶಿನಲ್ಲಿ ತಂಗಿದ್ದರು. ಅವರು ನೋಡಿದ್ದರ ಬಗ್ಗೆ ಎಲ್ಲವನ್ನು ಮೋಶೆಗೂ ಆರೋನನಿಗೂ ಎಲ್ಲಾ ಇಸ್ರೇಲರಿಗೂ ತಿಳಿಸಿದರು. ಅವರು ಕಾನಾನ್ ದೇಶದಿಂದ ತಂದ ಹಣ್ಣುಗಳನ್ನು ತೋರಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಆ ಮೇಲೆ ಪಾರಾನ್ ಅರಣ್ಯದಲ್ಲಿದ್ದ ಮೋಶೆ, ಆರೋನರು ಮತ್ತು ಇಸ್ರಾಯೇಲರ ಸರ್ವಸಮೂಹದವರ ಬಳಿಗೆ ಕಾದೇಶಿಗೆ ಬಂದು ಅವರಿಗೆ ಸಮಾಚಾರವನ್ನು ತಿಳಿಸಿ ಆ ದೇಶದ ಹಣ್ಣುಗಳನ್ನು ತೋರಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಪಾರಾನ್ ಮರುಭೂಮಿಯ ಕಾದೇಶಿನಲ್ಲಿದ್ದ ಮೋಶೆ, ಆರೋನ್ ಹಾಗೂ ಇಸ್ರಯೇಲ್ ಜನಸಮೂಹದ ಬಳಿಗೆ ಬಂದು ಅವರಿಗೆ ಸಮಾಚಾರವನ್ನು ತಿಳಿಸಿ ಆ ನಾಡಿನ ಹಣ್ಣುಗಳನ್ನು ತೋರಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಅವರು ಹೋಗಿ ಮೋಶೆ ಆರೋನರ ಬಳಿಗೂ, ಇಸ್ರಾಯೇಲರ ಸಮಸ್ತ ಸಭೆಯ ಬಳಿಗೂ ಪಾರಾನ್ ಮರುಭೂಮಿಯಲ್ಲಿರುವ ಕಾದೇಶಿಗೂ ಬಂದು, ಅವರಿಗೂ, ಸಮಸ್ತ ಸಭೆಗೂ ವಿಷಯವನ್ನು ವಿವರಿಸಿ, ಆ ದೇಶದ ಫಲಗಳನ್ನು ಅವರಿಗೆ ತೋರಿಸಿದರು. ಅಧ್ಯಾಯವನ್ನು ನೋಡಿ |