ಅರಣ್ಯಕಾಂಡ 13:27 - ಪರಿಶುದ್ದ ಬೈಬಲ್27 ಜನರು ಮೋಶೆಗೆ, “ನೀನು ಕಳುಹಿಸಿದ ದೇಶಕ್ಕೆ ನಾವು ಹೋಗಿ ಸಂಚರಿಸಿ ನೋಡಿದೆವು. ಅದು ಹಾಲೂ ಜೇನೂ ಹರಿಯುವ ದೇಶವಾಗಿದೆ. ಇಗೋ, ಹಣ್ಣುಗಳಲ್ಲಿ ಕೆಲವು ಇಲ್ಲಿವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಅವರು ಮೋಶೆಗೆ, “ನೀನು ನಮ್ಮನ್ನು ಕಳುಹಿಸಿದ ದೇಶಕ್ಕೆ ಹೋದೆವು; ಅದು ನಿಜವಾಗಿಯೂ ಹಾಲೂ ಮತ್ತು ಜೇನೂ ಹರಿಯುವ ದೇಶವೇ; ಅಲ್ಲಿನ ಹಣ್ಣುಗಳು ಇಂಥವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಮೋಶೆಗೆ, “ನೀವು ನಮ್ಮನ್ನು ಕಳಿಸಿದ ನಾಡಿಗೆ ಹೋಗಿದ್ದೆವು. ಅದು ಹಾಲು-ಜೇನು ಹರಿಯುವಂಥ ನಾಡು. ಅಲ್ಲಿನ ಹಣ್ಣುಹಂಪಲುಗಳು ಇಂಥವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಅವರು ಮೋಶೆಗೆ - ನೀನು ನಮ್ಮನ್ನು ಕಳುಹಿಸಿದ ದೇಶಕ್ಕೆ ಹೋದೆವು; ಅದು ಹಾಲೂ ಜೇನೂ ಹರಿಯುವ ದೇಶವೇ; ಅಲ್ಲಿನ ಹಣ್ಣುಗಳು ಇಂಥವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಅವರು ಮೋಶೆಗೆ, “ನೀನು ನಮ್ಮನ್ನು ಕಳುಹಿಸಿದ ದೇಶಕ್ಕೆ ಹೋದೆವು. ಅದು ನಿಜವಾಗಿಯೂ ಹಾಲೂ ಜೇನೂ ಹರಿಯುವ ದೇಶವೇ. ಅದರ ಫಲವು ಇವೇ. ಅಧ್ಯಾಯವನ್ನು ನೋಡಿ |
ನಾನು ಅವರ ಪೂರ್ವಿಕರಿಗೆ ವಾಗ್ದಾನ ಮಾಡಿದ ದೇಶಕ್ಕೆ ಅವರನ್ನು ಕರೆದುಕೊಂಡು ಹೋಗುವೆನು. ಆ ದೇಶವು ಹಾಲೂಜೇನೂ ಹರಿಯುವ ದೇಶವಾಗಿರುತ್ತದೆ. ಅವರಿಗೆ ಇಷ್ಟ ಬಂದದ್ದನ್ನೆಲ್ಲಾ ತಿನ್ನಲು ಅವರಿಗೆ ಸಿಗುವುದು. ಅವರಿಗೆ ಸಮೃದ್ಧಿಯಾದ ಜೀವಿತವು ಇರುವುದು. ಆದರೆ ಅವರು ಸುಳ್ಳುದೇವರ ಕಡೆಗೆ ತಿರುಗಿ ಅವುಗಳನ್ನು ಪೂಜಿಸುವರು. ಅವರು ನನ್ನಿಂದ ತೊಲಗಿ ನನ್ನ ಒಡಂಬಡಿಕೆಯನ್ನು ಮುರಿದುಬಿಡುವರು.
ಬಲಾಢ್ಯ ನಗರಗಳನ್ನು ಸ್ವಾಧೀನಪಡಿಸಿಕೊಂಡರು. ಉತ್ತಮವಾದ ಭೂಮಿಯನ್ನು ವಶಪಡಿಸಿಕೊಂಡರು. ಒಳ್ಳೆಯ ವಸ್ತುಗಳಿಂದ ತುಂಬಿದ್ದ ಮನೆಗಳನ್ನು ಅವರು ವಶಪಡಿಸಿಕೊಂಡರು. ಅಗೆದು ತಯಾರಾಗಿದ್ದ ಬಾವಿಗಳನ್ನು ಅವರಿಗೆ ನೀನು ಕೊಟ್ಟೆ, ದ್ರಾಕ್ಷಿತೋಟವನ್ನು, ಎಣ್ಣೆಮರಗಳ ತೋಪನ್ನು, ಬೇಕಾದಷ್ಟು ಹಣ್ಣಿನ ಮರಗಳನ್ನು ನೀನು ಅವರಿಗೆ ಕೊಟ್ಟೆ. ಅವರ ಹೊಟ್ಟೆ ತುಂಬಿ ಕೊಬ್ಬೇರುವಷ್ಟು ಅವರಿಗೆ ಕೊಟ್ಟೆ. ನೀನು ಕೊಟ್ಟ ಉತ್ತಮವಾದ ವಸ್ತುಗಳಲ್ಲಿ ಅವರು ಆನಂದಿಸಿದರು.