Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 13:30 - ಪರಿಶುದ್ದ ಬೈಬಲ್‌

30 ಕಾಲೇಬನು ಮೋಶೆಯ ಬಳಿಯಲ್ಲಿದ್ದ ಗೊಣಗುಟ್ಟುವ ಜನರನ್ನು ಸುಮ್ಮನಿರಿಸಿ, “ನಾವು ಹೋಗಿ ದೇಶವನ್ನು ವಶಪಡಿಸಿಕೊಳ್ಳಬೇಕು. ನಾವು ಸುಲಭವಾಗಿ ದೇಶವನ್ನು ವಶಪಡಿಸಿಕೊಳ್ಳಬಹುದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಇಸ್ರಾಯೇಲರು ಮೋಶೆಗೆ ವಿರುದ್ಧವಾಗಿ ಗುಣುಗುಟ್ಟಿದರು. ಕಾಲೇಬನು ಅವರನ್ನು ಸುಮ್ಮನಿರಿಸಿ, “ನಾವು ನಿರ್ಭಯವಾಗಿ ಆ ಬೆಟ್ಟದ ಸೀಮೆಗೆ ಹತ್ತಿಹೋಗಿ ಅದನ್ನು ಸ್ವಾಧೀನಪಡಿಸಿಕೊಳ್ಳೋಣ. ಅದನ್ನು ಜಯಿಸಲು ನಾವು ಶಕ್ತರಾಗಿದ್ದೇವೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಮೋಶೆಗೆ ವಿರುದ್ಧ ಗುಣಗುಟ್ಟುತ್ತಿದ್ದವರನ್ನು ಕಾಲೇಬನು ಸಮಾಧಾನಗೊಳಿಸುತ್ತಾ, “ನಾವು ಧೈರ್ಯದಿಂದ ಆ ಮಲೆನಾಡಿಗೆ ಹೋಗಿ ಅದನ್ನು ಸ್ವಾಧೀನ ಪಡಿಸಿಕೊಳ್ಳೋಣ. ಅದನ್ನು ಜಯಿಸಲು ನಮ್ಮಿಂದ ಸಾಧ್ಯ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಇಸ್ರಾಯೇಲ್ಯರು ಮೋಶೆಗೆ ವಿರೋಧವಾಗಿ ಗುಣುಗುಟ್ಟಲಾಗಿ ಕಾಲೇಬನು ಅವರನ್ನು ಸುಮ್ಮನಿರಿಸಿ - ನಾವು ನಿರ್ಭಯವಾಗಿ ಆ ಬೆಟ್ಟದ ಸೀಮೆಗೆ ಹತ್ತಿಹೋಗಿ ಅದನ್ನು ಸ್ವಾಧೀನಪಡಿಸಿಕೊಳ್ಳೋಣ; ಅದನ್ನು ಜಯಿಸಬಲ್ಲೆವು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ನಂತರ ಕಾಲೇಬನು ಮೋಶೆಯ ಎದುರಿನಲ್ಲಿ ಜನರನ್ನು ಸುಮ್ಮನಿರಿಸಿ, “ನಾವು ತಕ್ಷಣವೇ ಏರಿಹೋಗಿ ಅದನ್ನು ಸ್ವಾಧೀನ ಮಾಡಿಕೊಳ್ಳೋಣ. ಏಕೆಂದರೆ ಅದನ್ನು ಜಯಿಸಲು ನಾವು ನಿಜವಾಗಿಯೂ ಶಕ್ತರಾಗಿದ್ದೇವೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 13:30
14 ತಿಳಿವುಗಳ ಹೋಲಿಕೆ  

ಹೀಗಿರುವಲ್ಲಿ ಇದರ ಬಗ್ಗೆ ನಾವು ಏನು ಹೇಳೋಣ? ದೇವರು ನಮ್ಮೊಂದಿಗೆ ಇರುವಾಗ, ನಮ್ಮನ್ನು ಯಾರೂ ಸೋಲಿಸಲಾರರು.


ಆದರೆ ನನ್ನ ಸೇವಕನಾದ ಕಾಲೇಬನು ಅವರ ಹಾಗಲ್ಲ, ಅವನು ನನ್ನನ್ನು ಮನಃಪೂರ್ವಕವಾಗಿ ಹಿಂಬಾಲಿಸಿದ್ದಾನೆ. ಆದ್ದರಿಂದ ಅವನು ಸಂಚರಿಸಿ ನೋಡಿದ ದೇಶಕ್ಕೆ ಅವನನ್ನು ಬರಮಾಡುವೆನು ಮತ್ತು ಅವನ ಸಂತತಿಯವರು ಆ ದೇಶವನ್ನು ಹೊಂದುವರು.


ಕ್ರಿಸ್ತನ ಮೂಲಕ ನಾನು ಎಲ್ಲಾ ಕಾರ್ಯಗಳನ್ನು ಮಾಡಬಲ್ಲೆನು. ಏಕೆಂದರೆ ಆತನು ನನ್ನನ್ನು ಬಲಪಡಿಸುತ್ತಾನೆ.


ದೇವರೊಬ್ಬನೇ ನಮ್ಮನ್ನು ಬಲಗೊಳಿಸಬಲ್ಲನು. ಆತನೊಬ್ಬನೇ ನಮ್ಮ ಶತ್ರುಗಳನ್ನು ಸೋಲಿಸಬಲ್ಲನು!


ಆ ಜನರೆಲ್ಲರೂ ಬಲವಾದ ನಂಬಿಕೆಯುಳ್ಳವರಾಗಿದ್ದರು. ಆ ನಂಬಿಕೆಯಿಂದಲೇ ರಾಜ್ಯಗಳನ್ನು ಸೋಲಿಸಿದರು. ಅವರು ಯೋಗ್ಯವಾದ ಕಾರ್ಯಗಳನ್ನು ಮಾಡಿದರು ಮತ್ತು ದೇವರು ವಾಗ್ದಾನ ಮಾಡಿದ್ದವುಗಳನ್ನು ಪಡೆದುಕೊಂಡರು. ಅವರಲ್ಲಿ ಕೆಲವರು ತಮ್ಮ ನಂಬಿಕೆಯಿಂದ ಸಿಂಹಗಳ ಬಾಯಿಗಳನ್ನು ಮುಚ್ಚಿದರು;


ಆದರೆ ನಮಗೋಸ್ಕರ ತನ್ನ ಪ್ರೀತಿಯನ್ನು ತೋರಿಸಿದ ದೇವರ ಮೂಲಕವಾಗಿ ಈ ಎಲ್ಲಾ ಸಂಗತಿಗಳಲ್ಲಿ ನಮಗೆ ಪೂರ್ಣ ಜಯವಿದೆ.


ಅಮಾಲೇಕ್ಯರು ನೆಗೆವ್‌ನಲ್ಲಿ ವಾಸಿಸುತ್ತಾರೆ. ಹಿತ್ತಿಯರು, ಯೆಬೂಸಿಯರು ಮತ್ತು ಅಮೋರಿಯರು ಪರ್ವತ ಪ್ರದೇಶದಲ್ಲಿ ವಾಸಿಸುತ್ತಾರೆ. ಕಾನಾನ್ಯರು ಸಮುದ್ರ ತೀರದಲ್ಲಿಯೂ ಮತ್ತು ಯೋರ್ದನ್ ನದಿಯ ಉದ್ದಕ್ಕೂ ವಾಸಿಸುತ್ತಾರೆ” ಎಂದು ಹೇಳಿದರು.


ಆದರೆ ಅವನೊಡನೆ ಹೋದ ಜನರು, “ನಾವು ಆ ಜನರೊಡನೆ ಹೋರಾಡಲಾರೆವು, ಅವರು ನಮಗಿಂತಲೂ ಬಲಿಷ್ಠರು” ಎಂದು ಹೇಳಿದರು.


ಪ್ರತಿಯೊಂದು ಕುಲದಿಂದ ನೀವು ನೇಮಿಸಬೇಕಾದವರು ಇವರೇ: ಯೆಹೂದ ಕುಲದಿಂದ ಯೆಫುನ್ನೆಯ ಮಗನಾದ ಕಾಲೇಬ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು